ಹೊಸ ವರ್ಷವು ಬಂದಿದೆ, ಗೆಳತಿ!

ಹಳೆಯ ವರ್ಷವಿಂದಳಿಯಿತು, ಗೆಳತಿ,
ಅದರೊಡಲಿನ ಸುಖದುಃಖದ ಪ್ರಣತಿ
ಆರಿತು, ಹೊಸ ವರ್ಷಕೆ ಆರತಿ
ನೀಡಿ, ಸ್ವಾಗತಿಪ, ಬಾ, ಗೆಳತಿ.
ಹೊಸ ವರ್ಷವು ಬಂದಿದೆ, ಗೆಳತಿ!

ಯುಗ ಕಳೆಯಿತು, ಬಾಳೆದೆಯೊಳ ಪ್ರೀತಿ
ಆಸೆ ಅಡಗಿದಭಿಲಾಷೆಯನೆಲ್ಲ
ಮಣ್ಣು ಮಾಡುವುದೆ ಹೊಸದರ ನೀತಿ.
ಬಾಹು ನೀಡಿ ಬರಸೆಳೆಯುವೆವೆಲ್ಲ.
ಹೊಸ ವರ್ಷವು ಬಂದಿದೆ, ಗೆಳತಿ!

ನೋಡು, ಬಂದಿರುವ ಹೊಸ ವರ್ಷದ ರವ
ತಂದಿದೆ ಹೊಸ ದುಗುಡದ ಪ್ರಣತಿ;
ಅದರ ನೆರಳಿನಲಿ ಜೀವನವೆಲ್ಲವ
ದುಃಖಾದರ್ಶವನೆಸಗುವ ಗೆಳತಿ!
ಹೊಸ ವರ್ಷವು ಬಂದಿದೆ, ಗೆಳತಿ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆರೋಪ – ೯
Next post ಬಿಂಬ

ಸಣ್ಣ ಕತೆ

 • ಹೃದಯದ ತೀರ್ಪು

  ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

 • ಮಿಂಚಿನ ದೀಪ

  ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

 • ಬೂಬೂನ ಬಾಳು

  ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

 • ಬಸವನ ನಾಡಿನಲಿ

  ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

 • ಸಾವು

  ಈ ಗೊಂಡಾರಣ್ಯದಲ್ಲಿ ನಾನು ಬಂದುದಾದರೂ ಹೇಗೆ? ಅಗೋ ಅಲ್ಲಿ ಲಾಸ್ಯವಾಗಿ ಬಳುಕುತ್ತಾ ನಲಿಯುತ್ತಾ ತುಂತುರು ತುಂತುರಾಗಿ ಮುತ್ತಿನ ಹನಿಗಳನ್ನು ಪ್ರೋಕ್ಷಿಸುತ್ತಿರುವ ಝರಿಯ ರಮಣೀಯತೆಯನ್ನೂ ಮೀರುವಂತಹ ಭಯಾನಕತೆ ವ್ಯಾಪಿಸಿದೆಯಲ್ಲಾ… Read more…