ಕನಸು ನನಸುಗಳೆಲ್ಲ

ಕನಸು ನನಸುಗಳೆಲ್ಲ ಯಾರಿಗೋ ಮುಡಿಪಾಗಿ
ಹಾಡುಗಳಲೆಲ್ಲೆಲ್ಲು ಯಾರದೋ ಛಾಯೆಯೇ
ಮೂಡಿರಲು, ಇದು ಯಾರು? ಎನುತ ಕಾತರರಾಗಿ
ಗೆಳೆಯರೆಲ್ಲರು ನನ್ನ ಕಾಡುತಿರೆ, ನಿನ್ನನೇ
ಬಣ್ಣಿಸಲು ಹೊರಟಿಹೆನು; ನಿನ್ನ ನೆನವಿನಲೆನ್ನ
ಮನದ ಮಾತುಗಳೆಲ್ಲ ರಂಗಾಗಿ ಹಾರುತಿದೆ!
ಒಂದು ಸಂಜೆಯ ಕನಸು ಬಾಳಿನಿರುಳಿನ ಮುನ್ನ
ಮೆರೆದು ಮರೆಯಾಗುವೊಲು, ದುಗುಡದಲಿ ಮಾಸುತಿವೆ!

ಸಾವ ಮಡಿಲಿನ ನಿನ್ನ ದುಗುಡದಲಿ ಒಲವಿರಲು
ಬಣ್ಣನೆಯ ಬಣ್ಣಕ್ಕೆ ನಿಲುಕದಿಹ ಅದನೆಂತು
ಪದಗಳಲಿ ಪದುವಿಡಲಿ? ಎದೆಯ ಕಂಬನಿ ಹರಿದು
ಬಾಳನಾವರಿಸುತಿದೆ! – ನಿನ್ನೊಲವ ಸುಖವಂತು
ಮುಗಿಲ ಮೋಡದಹಾಗೆ ಮಾಯವಾಗಿರಲಿಂದು,
ಉಳಿದಿಹುದು ಕಂಗಳಿಗೆ ಹಗಲುಗನಸಿನ ಬಿಂದು!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮತ್ತೆ ಬಂದ ವಸಂತ
Next post ಚಿತ್ತ

ಸಣ್ಣ ಕತೆ

  • ಮನೆ “ಮಗಳು” ಗರ್ಭಿಣಿಯಾದಾಗ

    ಮನೆ ಮಗಳು "ಸೋನಿ" ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು.… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಏಕಾಂತದ ಆಲಾಪ

    ಅಂದು ದಸರೆಯ ಮುನ್ನಾದಿನ ಮಕ್ಕಳಿಗೆಲ್ಲಾ ಶಾಲಾ ರಜೆ ದಿವಸಗಳು. ಅವಳು ಕಾತ್ಯಾಯನಿ, ಒಂದು ತಿಂಗಳಿಂದ ಆ ಪಟ್ಟಣದ ಪ್ರಸಿದ್ಧ ನೇತ್ರಾಲಯಕ್ಕೆ ಅಲೆಯುತ್ತಿದ್ದಾಳೆ. ಎರಡೂ ಕಣ್ಣುಗಳು ಪೊರೆಯಿಂದ ಮುಂದಾಗಿವೆ.… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…