Home / Ananthanarayana S

Browsing Tag: Ananthanarayana S

ಭೋರ್ಗರೆದು ಬರಸೆಳೆದು ಬಿರುಸಿನಲಿ ಚಿಮ್ಮೆಸೆದು ಗಿರಗಿರನೆ ಸುರುಳಿಯಲಿ ಸೊರಗಿಸುವ ಸುಳಿಗಳಲಿ ಸಿಕ್ಕಿದಂತೊಮ್ಮೊಮ್ಮೆ ಹೃದಯ ಬಲು ತಪಿಸುವುದು! ನಭಕೇರಿ ಕೆಳಗುರುಳಿ ಭಾವಗಳ ಕಡಲಿನಲಿ ಮಿಂದು ಮೈ ಬೆಂಡಾಗಿ ಬಸವಳಿದು ಬೀಳುವುದು! ಮರು ನಿಮಿಷ ಮೆಲ್ಲೆಲರ...

ಯಾವುದಾದರು ಒಂದು ಹಳೆಯ ಹಾಡೇ ಸಾಕು! ಹೊಸ ರಾಗ-ಹೊಸ ತಾಳ ಹೊಸಭಾವಗಳ ಮೇಳ ಯಾವುದೊಂದೂ ಬೇಡ. ಹೃದಯದೊಲವನು ಮೀಟಿ ಒಲವ ನೀರನ್ನು ತರಿಸಿ ಹೊಸ ರಾಗ-ಹೊಸ ತಾಳ ಹೊಸ ಭಾವಗಳ ಮೇಳ ಹಿಗ್ಗಿ ಹರಿಸುವ ಒಂದು ಹಳೆಯ ಹಾಡು! *****...

ಬಾರಯ್ಯ  ಬಂದುದಕೆ ಏನನಾದರು ಕೊಟ್ಟು ಕಳುಹಿಸುವೆ.  ಕುಳಿತೆನ್ನ ಬಳಿಗೆ ಬಂದು ಕೇಳುವೊಡೆ ಹಾಡುವೆನು – ಅದು ಒಂದೆ ಸಂಪದವು ಬೇಕಾದೊಡದನೀವೆ-ಹಾಡುವೆನು ಕೇಳು! *****...

ಸಾಹಿತ್ಯ ಸಾಗರದ ದಡದಿ ನಿಲ್ಲುತಲಂದು ನೋಡಿದೆನು ಆಸೆಯಿಂ ಅಲೆಗಳೆಡೆಗೆ ಒಳಗೆ ಹುಡುಗಿಹ ಮುತ್ತುರತ್ನಗಳನೊಯ್ಯುವೆನೆ ಕನ್ನಡಮ್ಮನ ಅಡಿಗೆ ಮಾಲೆಯಾಗಿಡಲು! ದೂರದಿಂ ಕುಣಿಯುತ್ತ ಹತ್ತಿರಕೆ ಬಂದಿತಲೆ, ನೋಡುತಲೆ ಧೀಗೆಟ್ಟೆ ರೌದ್ರರೂಪ! ಸಾಗರದಿ ಮುಳುಗುತ್...

ಯುಗಯುಗಗಳೇಕಾಂತ ಗೀತಹಾಡುತನಂತ ನೋವಿನಲಿ ಕಾತರಿಸೆ ನನ್ನ ಉಷೆ ಬಂದೆ! ನಿನ್ನ ಬೆಳಕಲಿ ನಿನಗೆ ನನ್ನೆದೆಯ ಕಿರುಹಣತೆ ಅರ್ಪಿಸಿದೆ. ನೀನೊಪ್ಪಿ ಒಲವ ಬಾಳಿಸಿದೆ! ನಾನು ಕವಿ-ನೀ ಕಾವ್ಯ ನಾ ಬರೆದ ಗೀತಗಳು ನಿನ್ನ ಒಲವಿನ ನೂರು ಸೊಗಸು ನೆರಳು. ನೀ ಬೆಳೆಸಿ...

ನಿನ್ನದು ಆ ತೀರ-ನನ್ನದು ಈ ತೀರ ನಟ್ಟನಡುವಿನಂತರ, ತೆರೆಯ ಅಭ್ಯಂತರ ಕಿರಿದಹುದು ಕಿರಿದಲ್ಲ-ಹಿರಿದಲ್ಲ ಹಿರಿದಹುದು ಕಿರುತೊರೆಯ ಅಂತರ-ಕಡಲಿನಂತರ! ಹರಿಯುವಲೆಗಳಂತೆನ್ನ ಮನಸಿನಾತುರ ಹರಿಯುತಿದೆ, ಕೊರೆಯುತಿದೆ ಒಲವ ಕಾತರ ಮೌನದಲ್ಲೆ ಮರುಗಿಸಿದೆ ಹೃದಯ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....