
ನೊಸಲು ನೊಸಲಿನಲಿರಿಸಿ ಸುಸಿಲಾಡುವವು ಹೂವು ಹೊಳೆ ನೀರ ಬಳಿಗೆ; ಪಡಿನೆಳಲನೆದೆಯೊಳಗಿರಿಸಿ ಮಧುರ ಸಲಿಲ ಸಲೀಲ ನಲಿದಾಡುವದು; ಚಿತ್ರ ರತಿಯ ನೋಡುತ ಚಿಕ್ಕೆ ಕಣ್ಚಿವುಟುವವು; ಮಂದ ಮಾರುತನು ಪಿಸುಗುಡುತಲಿಹನದರ ಸೌಸವದ ಸವಿಮಾತ; ಸಂಜೆ ಬಾಸಣಿಸಲಿದೆ ತಿಮಿ...
ಹೊಗೆ ಮೋಡ ಹಿಂಜಿ, ಕಣ್ಮರೆಯಾಗುವಂತೆ, ನೆನೆ- ಸಿದ ರೂಪ ಹುಡಿಯಾಗತಿದೆ; ಮಬ್ಬು ಕವಿದು ಬರು- ತಿದೆ; ಸ್ವಪ್ನಲೋಕದೊಳು ಆಕಾರ ಪ್ರಳಯವಿರು- ವಂತೆ, ತುಂಬಿದೆ ನಿರಾಕಾರ ತಮ. ಚಿತ್ತಘನ ನಿಬಿಡ ವನ; ಹೊತ್ತು ಗೊತ್ತಿಲ್ಲ; ಮಿಸುಗುಡದೆ ಮನ ತನ್ನ ನುಂಗಿದೆ ...














