
ನನ್ನ ಜೀವನ ನದಿಯ ಎದೆ ಮೊರೆತ ಶಾಂತತೆಯ ಕಡಲಿನಲಿ ಮರೆಯಾಗಿ, ಕಲ್ಪನೆಯ ಕನಸುಗಳು ವಿಶ್ರಾಂತಿಗಾಗೊರಲಿ ವಿರಹಿಯಾಗಿಹ ಮನವ ಬಿಸಿ ಮುಳ್ಳುಗಳ ಹಾಗೆ ಒತ್ತೊತ್ತಿ ಕಾಡುವುದು ನಿಲ್ಲಿಸಿದ ದಿನದಂದು ಈ ಎಡೆಗೆ ಸಾಗುವೆಯ? ಹೃದಯದಲಿ ಹಾವಿಟ್ಟು ವಿಷವ ಹುಸಿಯಲಿ...
ಪ್ರಿಯ ಸಖಿ, ಅಡಗಿ ಮನಿ ಅವ್ವನ್ನ ತಿಂತು ಅಧಿಕಾರ ಅಪ್ಪನ್ನ ತಿಂತು ಪುಸ್ತಕದ ಹೊರೆ ತಿಂತು ತಮ್ಮನ್ನ ಮಸ್ತಕ ತಿಂತು ಮನುಷ್ಯನ್ನ ಶೈಲಜಾ ಉಡಚಣ ಅವರ ಈ ಹನಿಗವನ ಮೇಲ್ನೋಟಕ್ಕೆ ಎಷ್ಟು ತಮಾಷೆಯಾಗಿದೆ ಯಲ್ಲವೇ? ಆದರೆ ಆಳಕ್ಕಿಳಿದಷ್ಟು ಅರ್ಥವಾದಂತೆಲ್ಲಾ ...
ಗಣೇಶಬಂದ ಕಾಯ್ ಕಡುಬು ತಿಂದ, ಇನ್ನೂ ಬೇಕು ಅಂದ ಹೊಟ್ಟೆ ಬಿರಿಯ ಮೆಂದ ಕಾಯಿ ಕಡುಬಿನ್ ಜೊತೆಗೆ ಕರಿಗಡುಬನ್ನೂ ಬಾರಿಸ್ದ ಐದ್ ಸುತ್ತಿನ್ ಚಕ್ಲೀನ ಹೊಟ್ಟೆಯೊಳಗೆ ತೂರಿಸ್ದ ಸಿಹಿ ಹೂರಣ ತುಂಬಿದ್ದ ಒಂದು ತಟ್ಟೆ ಮೋದಕ ಹೊಟ್ಟೇ ಮೂಲೇಲ್ ಇಳ್ಸಿ ಕುಡಿದ ಕ...
ಮೃದು ಪವನ ಪರಿಮಳದ ಅರಿಕೆಗೆಚ್ಚರಗೊಳಲಿ ಸುಮವೀಣೆ! ಆ ವೀಣೆಯಿಂಚರದ ಕನಸಿನಲಿ ತೆರೆತೆರೆ ತೆರೆಯಲೊಂದು ರೂಪಕ ಸರೋವರಂ! ಅಲ್ಲುಲಿವ ರಾಜಹಂಸಗಳ ಪಲ್ಲವಿ ‘ಪಂಪಂ’! ಪಂಪ, ನಿನ್ನಿಂಪಿನಚ್ಚರಿಯ ನುಡಿವೆಳಗಿನಿಂ- ದರಳ್ವ ಮಲ್ಲಿಗೆ ಮಾವು ಕರ್ಬು ಗಿಳಿ ತುಂಬಿ...
ಮಡಿಕೇರೀ ಮಲೆ ಸೃಷ್ಠಿಯ ಕೋಮಲೆ ಸುತ್ತಲು ಗಿರಿಸಾಲು. ಬಯಲಿನ ತಪ್ಪಲು ನಿರ್ಝರ ದರಿಗಳು ನಿಡು ಮರ ಗಿಡ ಸಾಲು, ಸೃಷ್ಠಿಯ ರಮ್ಯ ಸೌಂದರ್ಯಗಳು ದೃಷ್ಠಿಯೆ ಬೀಳದ ಆಳದೊಳೆಲ್ಲಿಯು ಹಚ್ಚನೆ ಹೊಲಸಾಲು ಸುತ್ತು ದಿಗಂತವ ಅಪ್ಪುತ ನಿಂತಿಹ ನುಣ್ಣನೆ ಬೆಟ್ಟಗಳು,...
ತನುವೆಂಬ ಹುತ್ತಕ್ಕೆ ಮನವೆಂಬ ಸರ್ಪ ಆವರಿಸಿ ಹೆಡೆ ಎತ್ತಿ ಆಡುತಿರಲು, ಆ ಸರ್ಪನ ಕಂಡು ನಾ ಹೆದರಿಕೊಂಡು, ಗುರುಕರುಣವೆಂಬ ಪರುಷವ ತಂದು ಮುಟ್ಟಿಸಲು, ನೋಟ ನಿಂದಿತ್ತು, ಹೆಡೆ ಅಡಗಿತ್ತು, ಗುರು ಕರುಣವೆಂಬ ಪರುಷವೆ ನಿಂದಿತ್ತು. ನಿಂದ ಪರುಷವೆನ ಕೊಂಡ...
“ಹೌದಲ್ಲ! ಪುಸ್ತಕಕ್ಕೆ ಗೆದ್ದಲ ಹತ್ಯಾಽವು ಕನ್ನಡ ಬರೆಯೋದು ಓದೋಽದು ಮಾಡೋದಿಲ್ಲ ನೀವು ಇಂಗ್ಲಿಷ್ ಪುಸ್ತಕ ಪತ್ರಿಕೆ ಮನಿ ತುಂಬ ಹರಿವಿದ್ದೀರಲ್ಲ! ನೀವು ಇಂಗ್ಲೀಷಿನವರ ಸಂಬಂಧಿಕರೇಽನು ಮತ್ತಽ? ಆರೇ ನಿಮ್ಮ ಟಿ.ವಿ. ಹೊಳ್ಯಾಕತ್ತತ್ಯಲ್ಲ ಎಷ್...
ನನ್ನೆದೆಯ ಬಾಗಿಲನು ಮುಚ್ಚಿ ನಿದ್ರಿಸುತಿದ್ದೆ ಜೀವನದಿ ತಿರುಳಿಲ್ಲವೆಂಬ ಭ್ರಮೆಯೊಳಗೆ ದೇವ ನೀನೈತಂದು ಬಾಗಿಲನು ಬಡಿಯೆ ನಾ ಸಿಡುಕಿನಿಂದಲೇ ಕೇಳ್ದೆ “ಯಾರು ಅದು” ಎಂದು! ೧ ಮೌನದಲಿ ಮತ್ತೊಮ್ಮೆ ಶಬ್ದ ಮಾಡಲು ನೀನು ನಾನೆದ್ದೆ ಕೋಪದ...
ಪ್ರಿಯ ಸಖಿ, ವ್ಯವಹಾರದ ಈ ಜಗತ್ತಿನಲ್ಲಿ ಸಾಹಿತ್ಯವೂ ವ್ಯಾಪಾರವಾಗುತ್ತಿರುವುದನ್ನು ನೋಡುತ್ತಿದ್ದೇವೆ. ತಾನು ಬರೆದ ಸಾಹಿತ್ಯದಿಂದ ತನಗೆ ಸಿಗುವ ಆತ್ಮತೃಪ್ತಿಗಿಂತ, ತನಗೆ ಸಿಗುವ ಹಣ, ಕೀರ್ತಿಯೇ ಮಾನದಂಡವೆನ್ನುವ ಸಾಹಿತಿಗಳನೇಕರು ಇದ್ದಾರೆ. ಇಂತಹವ...
ಕೈ ಕೈ ಎಲ್ಹೋಯ್ತು? ಕಸದ ಮೂಲೆಗ್ಹೋಯ್ತು. ಕಸ ಏನ್ ಕೊಟ್ಟಿತು? ಹಸಿ ಗೊಬ್ಬರ ಕೊಟ್ಟಿತು. ಗೊಬ್ಬರ ಏನ್ ಮಾಡ್ದೆ? ತೋಟದ ಮರಕ್ ಹಾಕ್ದೆ? ಯಾವ ಮರಕ್ ಹಾಕ್ದೆ? ತೆಂಗು ಬಾಳೇಗ್ ಹಾಕ್ದೆ. ತೆಂಗು ಏನ್ ಮಾಡಿತು? ತೆಂಗಿನ ಕಾಯಿ ನೀಡಿತು. ಬಾಳೆ ಏನ್ ಕೊಟ್ಟ...
(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...
ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...
ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...
ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...
ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...
ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....














