ಅವರು: "ಮದುವೆ ಮಂಟಪದಲ್ಲಿ ಗಂಡು ಹೆಣ್ಣಿನ ಕೈ ಹಿಡಿದು ಅಗ್ನಿ ಪ್ರದಕ್ಷಿಣೆ ಮಾಡುತ್ತಾನಲ್ಲಾ ಏಕಿರಬಹುದು?" ಇವರು: "ಗಂಡನಾದವನು ಮುಂದೆ ಅಗ್ನಿ ಎದುರು ನಿಂತು ಅಡಿಗೆ ಬೇಯಿಸಿ ಹಾಕಬೇಕಲ್ಲಾ- ಆದಕ್ಕೆ!" ***
ಮಂತ್ರಿ: ಸಹಾಯ ಕೇಳಿಕೊಂಡುಬಂದ ಹಳ್ಳಿಯ ಯುವಕನಿಗೆ "ನಿನಗೆ ಎರಡು ಎಕರೆ ಜಮೀನು ಸರ್ಕಾರದಿಂದ ಕೊಡಿಸುತ್ತೇನೆ, ವ್ಯವಸಾಯ ಮಾಡಿಕೊಂಡು ಬದುಕಿಕೊ". ಯುವಕ: "ಯಾಕೆ ಬುದ್ದಿ, ಆತ್ಮಹತ್ಯೆ ಮಾಡಿಕೊಂಡು ಸಾಯ ಬೇಕೆಂತಲೋ?" ಪ್ರಶ್ನಿಸಿದ. *****