Home / ಸಣ್ಣಕಥೆ

Browsing Tag: ಸಣ್ಣಕಥೆ

ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ ವಾಗಿ ನಿದ್ರೆ ಗೈದಿದ್ದರು. ಬದಿಯಲ್ಲಿಯೇ Bed Lamp ತನ್ನ ಕರ್...

ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ ಸಹ ಉದ್ಯೋಗಿಗಳಿಂದ ...

ಗರ್ಭಿಣಿಯರ ನೋವು ಚೀರಾಟಗಳಿಗೆ ಡಾಕ್ಟರ್ ಸರಳಾಳ ಕಿವಿಗಳೆಂದೋ ಕಿವುಡಾಗಿ ಬಿಟ್ಟಿವೆ. ಸರಳ ಮಾಮೂಲಿ ಎಂಬಂತೆ ಆ ಹಳ್ಳಿ ಹೆಂಗಸರನ್ನು ಪರೀಕ್ಷಿಸಿದ್ದಳು. ಹೆಂಗಸು ಹೆಲ್ತಿಯಾಗಿದ್ದರೂ ಒಂದಷ್ಟು ವೀಕ್ ಇದ್ದಾಳೇಂತ ಯಾರಿಗಾದರೂ ಮೇಲ್ನೋಟಕ್ಕೆ ಅನ್ನಿಸುವಂ...

ಮುಂಗೋಳಿ… ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ… ವಂದೇ ಸಮ್ನೆ ಅಳುತ್ತಾ, ವುರೀಲೋ… ಬ್ಯಾಡೋ… ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ ಕಡ್ದೆಂಗೆ,...

ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ. ಹುಡುಗಿ ಕಂದುಬಣ್ಣದ ವರಾದರೂ ಲಕ್ಷಣವಾಗಿದ್ದಳ...

ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು, ಅವುಗಳ ಎಡ ಬಲಕ್ಕೆ ನೀಳವಾಗಿ ನಿಂತುಕೊಂಡ ಹುಣಿಸೆ -ಬೇವಿನ ಮರಗಳು, ...

ಕುಳಿತವನು ಅಲುಗದಂತೆ ತದೇಕ ಚಿತ್ತದಿಂದ ಕಡಲನ್ನು ನೋಡುತ್ತಿದ್ದ. ಹಾಗೇ ಕುಳಿತು ಅರ್ಧಗಂಟೆ ಕಳೆದಿತ್ತು. ಮೊಲದ ಬಾರಿಗೆ ಕಡಲ ಕಂಡವನ ಚಿತ್ತ ಕಲಕುವುದೇಕೆಂದು ಕುಳಿತಲ್ಲೇ ಅವನನ್ನು ಬಿಟ್ಟು ತಿರುಗಾಡಿ ಬಂದೆ. ಸೂರ್ಯ ಮರೆಯಾಗುತ್ತಿದ್ದ. ಕ್ಷಣಕ್ಷಣವೂ...

ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು. ಓದಿದ್ದರೂ ನೆನಪಿ...

ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ, ಸಹಜ ಶಿವಯೋಗ ಶಿಬಿರ, ವಿಶೇಷ ಪೂಜೆ ಪ್ರಾರ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...