ಎಳೆತನದಿನಿ೦ದುವರೆಗೀ ಜಗದ ಬೆರಗ ನಾ- ನಳಿಯದಂತಿರಿಸಿಹವು ವಸ್ತು ವ್ಯಕ್ತಿ ಅಲ್ಪವಿವು ಸಾಮಾನ್ಯವೆನೆ ಪ್ರಕಟಗೈಯುತ್ತ ತಮ್ಮತುಲ ಸುಖದುಃಖವೀವ ಶಕ್ತಿ. ತನಗೆ ತನ್ನರಿವಷ್ಟೆ; ಮಿಕ್ಕುದರ ತಿಳಿವೆಲ್ಲ ಭ್ರಮೆಯೆನಿಸುವೀ ತೋರ್ಕೆಯರಿವರಾರು? ನೆಚ್ಚಿದರ ವಂಚಿಸುವ ವಿಷಯಗಳ ಸಂಚಿನೊಳು ಮುದದ ಹದುಳವ ಭವದಿ ಪಡೆವರಾರು? ಅದರ...

  ಮಾನಾಪಮಾನ ನಿನ್ನವಮ್ಮಾ ಎನಗೇನು ಶ್ವಾನನಂತೆ ಬೊಗಳುತಿಹರು ಹೀನ ಜನರೆಲ್ಲರಿವರು ||ಪ|| ಸದಾ ನಿನ್ನ ಧ್ಯಾನದೊಳಿರಲು ಮದಾ ಬಂದಿತೆಂಬುವರಿವರು ಕದನವ ಮಾಡುವರಿವರು ನಿಧಾನವ ತಿಳಿಯದೆಯವರು ಇದು ನಿನ್ನ ಮನಸ್ಸಿಗೆ ಮೃದುವಾದರೊಳಿತಮ್ಮಾ ||೧|| ನಿ...

ತರವಲ್ಲ ತಗಿ ನಿನ್ನ ತಂಬೂರಿ ಸ್ವರ ಬರದೆ ಬಾರಸದಿರು ತಂಬೂರಿ ||ಪ|| ಸರಸ ಸಂಗೀತದ ಕುರುಹುಗಳರಿಯದೆ ಕರದೊಳ್ಹಿಡಿಬಾಡ ತಂಬೂರಿ ||ಅ.ಪ.|| ಮಧ್ಯದೊಳೇಳು ನಾದದ ತಂಬೂರಿ ಅದ್ನ ತಿದ್ದಿ ನುಡಿಸಬೇಕು ತಂಬೂರಿ ಸಿದ್ಧ ಸಾಧಕರ ಸುವಿದ್ಯೆಕ್ಕ ಒದಗುವ ಬುದ್ಧಿವ...

ಕೋಡುಗನ ಕೋಳಿ ನುಂಗಿತ ನೋಡವ್ವ ತಂಗಿ                    ||ಪ|| ಆಡು ಆನೆಯ ನುಂಗಿ ಗೋಡೆ ಸುಣ್ಣವ ನುಂಗಿ ಆಡಲು ಬಂದ ಪಾತರದವಳ ಮದ್ದಳೆ ನುಂಗಿತ                    ||೧|| ಒಳ್ಳು ಮನಕಿಯ ನುಂಗಿ ಬೀಸುಕಲ್ಲು ಗೂಟವ ನುಂಗಿ ಕುಟ್ಟಲು ಬಂದ ಮುದಕ...

ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ! ಸತ್ತಂತಿಹರನು ಬಡಿದೆಚ್ಚರಿಸು; ಕಚ್ಚಾಡುವರನು ಕೂಡಿಸಿ ಒಲಿಸು. ಹೊಟ್ಟೆಯ ಕಿಚ್ಚಿಗೆ ಕಣ್ಣೀರ್ ಸುರಿಸು; ಒಟ್ಟಿಗೆ ಬಾಳುವ ತೆರದಲಿ ಹರಸು! ಬಾರಿಸು ಕನ್ನಡ ಡಿಂಡಿಮವ, ಓ ಕರ್ನಾಟಕ ಹೃದಯ ಶಿವ! ಕ್ಷಯ...

ಮಧುಮಾಸದ ಮೊದಲ ದಿನಗಳು. ಎಲ್ಲಿ ನೋಡಿದರೂ ತಾಯಿಯ ವಿವಿಧ ವಿಲಾಸ……. ಪುಷ್ಪಶೃಂಗಾರ!! ವರ್‍ಣವೈಖರಿ!! ಮಧುಪಾನದಿಂದ ಮೈಮರೆತು ಮೊರೆಯುತಿಹೆ ಉನ್ಮತ್ತ ಭೃಂಗ ಸಂಕುಲದ ಎಣೆಯಿಲ್ಲದ ಪ್ರಣಯ ಕೇಳಿ! ಸಹಸ್ರಸಹಸ್ರ ಖಗಕಂಠಗಳಿಂದೆ ದಿಕ್ಕುದಿಕ್ಕಿಗೆ ಪಸರಿಸುತಿಹ ಸುಮಧುರ ಗಾನ ತರಂಗ...

ಈ ಮಾಹಾತ್ಮ್ಯೆ ಯಾವ ಪುರಾಣದಲ್ಲಿದೆ? ಎಲ್ಲಿ ಯಾರು ಹೇಳಿದ್ದು? ಯಾರು ಕೇಳಿದ್ದು? ಯಾವ ಇಷ್ಟಾರ್ಥಸಿದ್ದಿಗಾಗಿ? ಎಂದೆಲ್ಲ ಪ್ರಶ್ನೆಗಳನ್ನು ನೀವು ಕೇಳಬಹುದು. ಉತ್ತರ ಹೇಳುತ್ತಾ ಹೋದರೆ ಪೀಠಿಕಾ ಪ್ರಕರಣವೇ ಉದ್ದ ಬೆಳೆದು ಮಹಾತ್ಮ್ಯೆಯನ್ನು ಕೇಳುವಷ್ಟರಲ್ಲಿ ನಿಮಗೆ ಹಾಕಳಿಗೆ ತೊಡಗಿ ತೂಕಡ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...