‘ಅಸ್ಪೃಶ್ಯ ಚಂಡಾಲ ಪಂಚಮ ಹೊಲೆಯ’ರೆಂದು ದೂರವಿಟ್ಟಿಹೆವಲ್ಲ ನಮ್ಮ ಸಮ ಸೋದರರ? ಅನ್ಯತ್ರವಿಲ್ಲದಿಹ ಹೊಲೆಯದೇನವರ? ನಾವೆ ಮಾಡಲು ಹೇಸುವೆಮ್ಮ ಸೇವೆಯನಿಂದು ಅವರು ಮಾಡುತಲಿಹುದೆ ಅವರಿಗಂಟಿದ ಹೊಲೆಯೆ? ಸಲ್ಲದಿಲ್ಲದ ಸತ್ತ ಶಾಸ್ತ್ರದಾಧಾರವನು ಕೊಟ್ಟು, ಅವರಿಗೆ ಹುಟ್ಟು ಹೊಲೆಯ...
ಶ್ರಾವಣದ ಶನಿವಾರ ನಮ್ಮ ತಂದೆಯು ನಾವು ಅಣ್ಣತಮ್ಮಂದಿರೆಲ್ಲ ಹಣೆಗೆ ನಾಮವ ತಿದ್ದಿ, ತಾಳ ತಂಬೂರಿ ಮದ್ದಲೆ ವಾದ್ಯಗಳ ಜೊತೆಗೆ ಎಲ್ಲ ದೇವರ ನಾಮಗಳ ಬಲ್ಲ ರೀತಿಯಲಿ ಹಾಡುತ್ತ, ‘ಸಂಚಾರ’ ಹೊರಟು, ಮನೆ ಮನೆಗೂ ಹೋಗಿ...