Home / ಪೆದ್ದಂ ಕತೆಗಳು

Browsing Tag: ಪೆದ್ದಂ ಕತೆಗಳು

ಹೊಲದ ಹಸಿರಿನ ಮೇಲೆ ಹೊಂಬಿಸಿಲು ಬಿದ್ದಿತ್ತು. ಅಲ್ಲಲ್ಲಿ ತಿಳಿನೀರಿನ ಕನ್ನಡಿ ಹೊಳೆಯುತ್ತಿತ್ತು. ಒಂದೇ ಒಂದು ಬೆಳ್ಳಗಿನ ಗೂಳಿ ಮೇಯುತ್ತಿತ್ತು. ಇಬ್ಬರು ಕವಿಗಳು ಹೊಲದಂಚಿನ ಬಾಳೆಯ ತೋಟದಲ್ಲಿ ನಿಂತು ಈ ಚೆಲುವನ್ನು ಸವಿಯುತ್ತಿದ್ದರು. ಒಬ್ಬನಿಗೆ ...

ಚೌಕು ರಸ್ತೆಯ ಬದಿಗೆ ನಿಂತು ಹಣ್ಣು ಮುದುಕಿ ಬೇಡುತ್ತಿದ್ದಳು. “ಅಪ್ಪಾ, ಸ್ವಾಮೀ….” ಎಂದು ಕೈ ಚಾಚಿ ಕರೆಕರೆದು ಬಾಯಿ ಒಣಗಿದರೂ ಮೂರೂಸಂಜೆಯೊಳಗೆ ಆರುಕಾಸು ಹುಟ್ಟಲಿಲ್ಲ. ಮುದುಕಿಯ ದೃಶ್ಯ ಕರುಣಾಜನಕವಾಗಿತ್ತು. ಸಮೀಪದ ಮನೆಯ ಮಹಡಿಯಿ...

“ಎಲ್ಲಿ ಹೋಗಿ ಸತ್ತನೋ ಏನೋ ತಿಮ್ಮ, ಎಂಟು ಗಂಟೆಯಾದರೂ ಬರಲೇ ಇಲ್ಲ. ಏ….” ಎಂದು ಒಳಗೆ ಶ್ರೀಮತಿ ಲಕ್ಷ್ಮೀದೇವಿಯವರು ಎಂಟು ಗಂಟೆಯಾದರೂ ಬರದಿದ್ದ ಆಳಿನ ಮೇಲೆ ಕೋಪಿಸಿಕೊಂಡರು. ಚಹಕ್ಕೆ ಒಳಗಿನಿಂದ ಕರೆಬರಲಿಲ್ಲವೆಂದು ಲಕ್ಷ್ಮೀಪತಿರಾಯರ...

ಮಹಾರಾಣಿಯ ಎದುರಿಗೆ ಕ್ಯಾಮೆರಾ ಸಜ್ಜಾಗಿ ನಿಲ್ಲಿಸಿ “ಸ್ವಲ್ಪ ಬಲಕ್ಕೆ… ಹ್ಞ… ಸರಿ… ಸ್ಟೆಡಿಪ್ಲೀಜ್.. ಸ್ವಽಽಲ್ಪ ಹೀಗೆ…. ಇನ್ನಿಷ್ಟು ಕಣ್ಣೀರು ಪ್ಲೀಜ್… ಕೊಂಚ ಜೋರಾಗಿ ಅಳಬೇಕು ಮ್ಯಾಡಮ್…. ಸರಿ ಸರಿ ಸ...

ಕವಿವರ್‍ಯ ಭೃಗು ಅವರ ಹೆಸರು ಕೇಳದವರು ಯಾರು? ಅವರ ಮಗನಿಗೆ ಮಾತ್ರ ತಂದೆಯ ಕವಿತ್ವದ ಬಗ್ಗೆ ಎಳ್ಳಷ್ಟೂ ವಿಶ್ವಾಸವಿಲ್ಲ. “ನಮ್ಮಪ್ಪನಂಥವರೆಲ್ಲ ಕವಿಗಳಾದರೆ ತೀರಿತು!” ಎಂದು ಅವನು ನಿಸ್ಸಂಕೋಚವಾಗಿ ಹೇಳುತ್ತಾನೆ. ಅವನಿಗೆ ಕತೆ ಕಾದಂಬರಿಗಳೆಂದರೆ ತುಂ...

(ಕೇಳಿದ ಕತೆ) ಮೀನ ಮಾರಿ ಮರುಳುವಾಗ ಕತ್ತಲಾಯಿತು. ಪರಿಚಿತರಾದ ಯೆಂಕಟ ಆಚಾರ್ರ ಮನೆಯ ಅಂಗಳದಲ್ಲೇ ‘ಹಮ್ಕೊಂಡು’ ‘ಹೊತ್ತಾರೆ’ ಹೋದರಾಯಿತೆಂದು ಅವರು ನಿಶ್ಚಯಿಸಿದರು. ಆಚಾರಿಯ ಮನೆಯಲ್ಲಿ ಅಂದು ಸತ್ಯನಾರಾಯಣವಾಗಿತ್ತು. ಬ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ?...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತ...

ನನ್ನ ಜನ್ಮ ಗ್ರಾಮಕ್ಕೆ ಹೋಗದೆ ನಾಲ್ಕಾರು ವರುಷಗಳಾಗಿದ್ದವು. ಮೇ ತಿಂಗಳ ಬೆವರನ್ನು ತೋಟದ ಅಬ್ಬಿಯಲ್ಲಿ ತೊಳೆದು ತಂಪಾಗಿ ಒಂದು ಮಾಸ ಕಳೆದು ಬರುವ ಎಂದು ಹಳ್ಳಿಗೆ ಹೋಗಿದ್ದೆ. ಮನೆಗೆ ತಲುಪಿದ ಮರುದಿನವೇ ತಂಗಿಯ ಮನೆಗೆ ಹೋಗುವದು ನನ್ನ ಪದ್ಧತಿ. ನಮ್...

ಮೂಲ: ವಿ ಎಸ್ ಖಾಂಡೇಕರ ಎದುರದಡದಿ ನಿಂದು ಬಿದಿರಕೊಳಲ ತನ್ನ| ಅಧರದಿ ನುಡಿಸುವ ಚದುರ ರಂಗನ ಕಂಡೆ|| ಅದೇ ಶಾಲೆಬಿಟ್ಟು ಬಂದು ಕುಸುಮೆಯು ರಾಗದ ಪೆಟ್ಟಿಗೆಯನ್ನು ಬಾರಿಸುತ್ತ ಹಾಡುತ್ತಿದ್ದಳು. ಸಂಗೀತದಿಂದ ದಣುವು ಪರಿಹಾರವಾಗುವದೆನ್ನುವರು. ಆದರೆ ನಡುಮನೆಯಲ್ಲಿ ಬಿಳಿಯ ಪತ್ತಲವನ್ನೊಂದು ...

ನಿರಂಜನ ಬಹಳ ಜನ ಹೆಂಗಸರನ್ನು ನೋಡಿದ್ದ. ಆದರೆ, ಅವನ ದುರದೃಷ್ಟ-ಅವನು ನೋಡಿದವರೆಲ್ಲ ಸರಿಸಿದ ಸೆರಗಿನವರು, ಸಡಿಲಿಸಿದ ನಿರಿಯವರು. ಮೇಲಾಗಿ ಅವನು ಸುಂದರನೇನೋ ಹೌದು. ಆದರೆ ಗಂಡಸಿನ ಸೌಂದರ್ಯವಲ್ಲದು, ಹೆಂಗಸಿನ ಸೌಂದರ್ಯ, ಸಾಲದುದಕ್ಕೆ “ಎಲ್ಲ ಹೆಂಗಸರೂ ಹೀಗೆಯೆ ಬಾ ಎನ್ನುವುದು ...

ಭೋಜನ ಭೀಮಾಚಾರರ ಮಕ್ಕಳೇತಾನೆ ಆ ವೇದಾಂತ ಡಿಂಡಿಮ ರಾಜಾಚಾರ್‍ಯರು. ಭೀಮಾಚಾರ್‍ಯರು ತಮ್ಮ ಬಿರುದನ್ನು ಸ್ವಪ್ರಯಾಸದಿಂದಲೇ ಸಂಪಾದಿಸಿದರು. ತಮ್ಮ ಮಕ್ಕಳಲೊಬ್ಬನಾದರೂ ಸರಸ್ವತಿಯ ಕೈಹಿಡಿಯಲೆಂದು ಆಶೆಬಿಟ್ಟು ರಾಜಾಚಾರ್‍ಯರನ್ನು ಬಿರುದೊಣ್ಣೆಯ ವಶಕ್ಕೆ ಕೊಟ್ಟರು. ಇತ್ತಲಾಗಿ ರಾಜಾಚಾರ್‍ಯರಿ...

ಶಠಗೋಪ ಹದಿನಾರಾಣೆ ಶ್ರೀವೈಷ್ಣವ. ಒಂದುದಿನ ಅವನ ಅತ್ತಿಗೆ ಅಡುಗೆಯ ಕೆಲಸದಲ್ಲಿದ್ದು ವೀಳೆಯದೆಲೆಯ ವರ್ತನೆಯವಳು ಬಂದಾಗ ಎಲೆ ತೆಗೆಯಲು ಶಠಗೋಪನಿಗೆ ಹೇಳಿದಳು. ಶಠಗೋಪನು ಹೊರಗೆ ಬಂದು, ಎದುರಿಗಿದ್ದ ವೀಳೆದೆಲೆಯವಳನ್ನು ನೋಡಿದ. ಅವಳು ಸಾಧಾರಣದ ಹೆಣ್ಣು. ರತಿಯಲ್ಲ, ಚಪ್ಪನ್ನಾರು ದೇಶದಲ್ಲ...

ಕೋರ್‍ಟಿನಿಂದ ಬಂದ ಮೀರಾ ಬಳಲಿದವಳಂತೆ ಕುಸಿದು ಕುಳಿತಳು. ದೇಹ ಬಳಲಿದ್ದರೂ ಸಂತಾಪದಿಂದ ಎದೆ ಕುದಿಯುತ್ತಿತ್ತು. ಎದೆಯಲ್ಲಿ ಕುದಿತ, ಮುಖ ಕಣ್ಣುಗಳನ್ನು ಕೆಂಪು ಮಾಡಿ, ಇಡೀ ದೇಹ ಕೋಪದಿಂದ ಕಂಪಿಸುವಂತೆ ಮಾಡಿತ್ತು. ಕಾಲಲ್ಲಿದ್ದ ಚಪ್ಪಲಿಗಳನ್ನು ಕೂಡಾ ಕಳಚದೇ, ಕೈಯಲ್ಲಿದ್ದ ಪರ್ಸ್, ಪುಸ...

ಮಳೆ ಎಂದರೆ ಅಂತಹ ಇಂತಹ ಮಳೆಯಲ್ಲ. ಕೈ ಹೊರುವುದನ್ನು ಮೈ ಹೊರಲಿ ಎಂದು ಎಲ್ಲಾ ಬಟ್ಟೆ ಬರೆಗಳನ್ನೂ ಮೈಯ ಮೇಲೆಯೇ ಹಾಕಿಕೊಂಡಿದ್ದೆ. ಹಿಡಿದುಕೊಂಡಿದ್ದ ಛತ್ರಿ, ಹೊದ್ದಿದ್ದ ಜಮಖಾನೆ, ಉಟ್ಟಿದ್ದ ಎರಡು ಗಾಂಧಿಪಂಚೆ, ತೊಟ್ಟಿದ್ದ ಕಾಕಿಚೆಡ್ಡಿ, ಇಷ್ಟೆಲ್ಲಾ ನೆನೆದುದಲ್ಲದೆ, ಕಟ್ಟಿದ್ದ ಕಾಚ ...