
ಒಂದೂರಾಗ ಅತ್ತಿಗಿ ನಾದಿನಿ ಇದ್ದು ನಾದಿನಿ ನೀರು ಹೊಯ್ಕೊಂಡಿದ್ದಳು. ಐದರಾಗ ಅಣ್ಣ ತಂಗೀಗಿ ಕರಕೊಂಡು ಬರಲಿಕ್ಕ ಹೋದ. ಕರಕೊಂಡೂ ಬಂದ. ಅಡವ್ಯಾಗ ಒಂದು ಬಾಳೆಗಿಡ ಇತ್ತು. ಅದರ ಬುಡಕ್ಕ ಅಣ್ಣ ತಂಗಿ ಮನಕೊಂಡರು. ತಂಗಿ ನಿದ್ಯಾಗ ಗುರ್ ಹೊಡೆದಳು, ಹೊಟ್ಯ...
ಅನಾಥೆಯಾದ ಒಬ್ಬ ಮುದುಕಿಯಿದ್ದಳು ಒಂದೂರಿನಲ್ಲಿ. ಆಕೆಗೆ ಯಾರೂ ಇರಲಿಲ್ಲ. ದಿನಾಲು ರಾಟಿಯ ಮೇಲೆ ನೂಲುವಳು. ಬಂದಷ್ಟರಲ್ಲಿ ಉದರ ನಿರ್ವಾಹ ಸಾಗಿಸುವಳು. ರಾತ್ರಿ ಸಹ ನಿದ್ರೆ ಬರುವವರೆಗೆ ನೂಲುತ್ತ ಕುಳಿತುಕೊಳ್ಳುವಳು. ಒಂದು ದಿವಸ ರಾತ್ರಿ ಬಹಳ ಹೊತ್...
ಒಬ್ಬಾಕೆ ಹೆಣ್ಣು ಮಗಳಿದ್ದಳು. ಆಕೆ ನೀರು ಹೊಯ್ದುಕೊಂಡಿದ್ದಳು. ಅವರ ಮನೆಯಲ್ಲಿ ನಾಯಿಯೂ ಗಬ್ಬವಾಗಿತ್ತು. ತವರು ಮನೆಯವರು ಬುತ್ತಿತಂದರು. ನಾಯಿ ತನ್ನಲ್ಲೇ ಅಂದುಕೊಂಡಿತು – ಈಕೆ ಉಂಡ ಒಂದು ಅಗುಳಾದರೂ ನನಗೆ ಹಾಕಿದರೆ ಅದನ್ನೇ ನಾನು ತಿನ್ನು...
ಒಂದು ಗಂಡು ಒಂದು ಹೆಣ್ಣು ಭೂಮಿಯ ಮೇಲೆ ಮೊದಲು ಹುಟ್ಟಿದರು. ಅವರಿಂದ ಆರಂಭವಾಯಿತು ಮಾನವ ಸಂತಾನ ಬೆಳೆಯಲಿಕ್ಕೆ. ಹೆಣ್ಣು-ಗಂಡು ಮಕ್ಕಳು ಹುಟ್ಟಿದರು. ಮಕ್ಕಳಿಂದ ಮಕ್ಕಳಾದರು. ಮೊಮ್ಮಕ್ಕಳು ಮರಿಮಕ್ಕಳು ಆದರು. ಮೊಮ್ಮಕ್ಕಳ ಮರಿಮಕ್ಕಳೂ ಹುಟ್ಟಿಕೊಂಡರ...
ಗಂಡ ಹೆಂಡಿರು ಕೂಡಿಕೊಂಡು ನೆರೆಯೂರಿನ ಸಂತೆಗೆ ಹೋಗಿ, ತಮಗೆ ಬೇಕಾದ ಅರಿವೆ ಅಂಚಡಿ, ಕಾಳುಕಡ್ಡಿ ಕೊಳ್ಳುವುದರಲ್ಲಿ ತೊಡಗಿದರು. ಜವಳಿಸಾಲಿನಿಂದ ಕಿರಾಣಿ ಸಾಲಿನ ಕಡೆಗೆ ಸಾಗಿದಾಗ ಅಲ್ಲೊಬ್ಬ ಕುರುಡ ಮುದುಕನು ಹೊರಟಿದ್ದನು. ಆತನ ಕಣ್ಣು ಕಾಣದೆ ಮುಳ್ಳ...
‘ಊರಿಗೆ ಬಂದ ಪ್ರಖ್ಯಾತ ಕೀರ್ತನಕಾರನೊಬ್ಬನ ಕೀರ್ತನ ಮಾಡಿಸಬೇಕೆಂದು, ಪ್ರಮುಖರು ಎತ್ತುಗಡೆ ನಡೆಯಿಸಿದರು. ಕೀರ್ತನಕಾರನು ಮೊದಲೇ ಸೂಚಿಸಿದಂತೆ ಶ್ರೋತೃವೃಂದಲ್ಲಿ ಕುಳಿತ ಗಿಡ್ಡಗಿಡ್ಡ ಜನರನ್ನೆಲ್ಲ ಎಬ್ಬಿಸಿ ಕಳಿಸಲಾಗಿತ್ತು. ಕುಳಿತವರೆಲ್ಲರೂ ಉದ್ದನ...
ಒಂದಾನೊಂದು ಊರಲ್ಲಿ ಅಕ್ಕ ತಮ್ಮ ಇದ್ದರು. ಅಕ್ಕನ ಗ೦ಡ ತೀರಿಕೊಂಡಿದ್ದನು. ಆಕೆಗೊ೦ದು ಹೆಣ್ಣು ಮಗು ಇತ್ತು. ತಾಯಿತಂದೆಗಳು ತಮ್ಮನು ಚಿಕ್ಕವನಿರುವಾಗಲೇ ದೇಹವಿಟ್ಟಿದ್ದರು. ಅವನಿಗೆ ಅಕ್ಕನೇ ಹತ್ತಗಡೆಯವಳು. ಹೀಗೆ ದಿನ ಕಳೆಯುವಷ್ಟರಲ್ಲಿ ಅಕ್ಕನೂ ಅಗಲ...














