
ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ ಕರ್ಫ್ಯೂ ತೆಗೆದವರೆ. ಆದ್ರೂವೆ ಎಲ್ಲೆಡೆ ಸದ್ದಡಗೈತೆ. ಯಾರ ಮನೆಬಾಗಿಲುಗಳ...
ಓದುತ್ತಿದ್ದಂತೆ ಮನೋಹರನ ಉಸಿರು ಬಿಗಿಯಾಯಿತು. ನಾಡಿಯಲ್ಲೆಲ್ಲ ನೆತ್ತರು ಧುಮ್ಮಿಕ್ಕೆ ಹರಿಯುತ್ತಿರುವ ಅನುಭವ. ಎಲ್ಲವನ್ನೂ ಮತ್ತೊಮ್ಮೆ ಜೀವಿಸಿದಷ್ಟು ಆಯಾಸ. ಡೆಸ್ಕಿ ನಿಂದ ಸಿಗರೇಟು ಎತ್ತಿಕೊಂಡ. ಸೇದಬಾರದು ಎಂದಿದ್ದರು ಡಾಕ್ಟರರು. ಉದ್ವೇಗಗೊಳ್ಳ...
























