Home / Short Stories

Browsing Tag: Short Stories

“ಒಂದಿಷ್ಟೂ ಕರುಣೆಯಿಲ್ಲದವಳು ಅಂತೀರಲ್ಲಾ ನನ್ನ? ನಿಮಗೊಂದಿಷ್ಟು ಮುಂದಿನ ವಿಚಾರ ಯಾಕೆ ಬರಲೊಲ್ಲದೂ ಅಂತೇನೆ ನಾನು! ನಾಗು ನಿಮ್ಮ ತಂಗೀನೂ ಹೌದು; ಗಂಡನ್ನ ಕಳಕೊಂಡು ನಿರ್ಗತಿಕಳಾಗಿ ಕೂತಿರೋದೂ ನಿಜ; ನಾವೇನಾದರೂ ಕೈಲಾದಷ್ಟು ಸಹಾಯಮಾಡಬೇಕೆಂಬ...

ಒಣಿಯು ತಿರುಗುವೆಡೆ ಕೆರೆಯೇರಿಯ ಮೇಲಿರುವ ಆ ದೀಪ ಸ್ತಂಭಕ್ಕೆ ‘ನಂದಾದೀಪ’ ಎನ್ನುವ ಹೆಸರು ವಿಲಕ್ಷಣವಾಗಿ ಕಾಣುವುದಿಲ್ಲವೆ? ಆದರೆ ಹಲವು ವೇಳೆ ವಿಲಕ್ಷಣವಾದ ಹೆಸರೇ ಲಕ್ಷಣವಾಗಿದೆ. ಲಕ್ಷಣವಾಗಿ ತೋರುವ ಹೆಸರೇ ಪರ್ಯಾಲೋಚಿಸಿದರೆ ವಿಲಕ್ಷಣ. ಇದಕ್ಕೊಂದ...

ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು ತೋರಿಸಿದವು! ಸುಧಾ ಕಸಪೊರಕೆಯಿಂದ ಕಸ ಗೂಡಿಸುತ್ತಿದ್ದಳ...

-೧- ಅಣ್ಣ, ನಾನು ಬರೆದ ಹಿಂದಿನ ಕಾಗದವು ನಿನಗೆ ತಲಪಿರಬಹುದು, ಅದಕ್ಕೆ ನೀನು ಪ್ರತ್ಯುತ್ತರವನ್ನು ಬರೆಯುವ ಮೊದಲೇ ಈ ಕಾಗದವನ್ನು ನೋಡಿ ನಿನಗೆ ಆಶ್ಚರ್ಯವಾಗಲೂ ಬಹುದು. ಆಶ್ಚರ್ಯದ ವಿಷಯವೇ ಇರುವುದರಿಂದ ನಿನಗಿದನ್ನು ಬರೆಯುತ್ತಿರುವೆನು. ನಮ್ಮ ಮನೆ...

ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ ಬಂದು ಈಗ ಅವರ ಮನವೆಂಬ ಮನದಲ್ಲಿ ವಾಸಮಾಡಿತ್ತ...

ಮದುವೆಯೇ ಬೇಡವೆನ್ನುತ್ತಿದ್ದ ಕಿಟ್ಟಿಣ್ಣ ಆ ಹಳ್ಳಿಯ ಜಮೀನ್ದಾರರ ಮಗಳನ್ನು ಮದುವೆಯಾಗಲೊಪಿದ್ದೇ ತಡ- ಒಮ್ಮೆ ಕಿಟ್ಟು ಮದುವೆ ಮಾಡಿಕೊಂಡು ಸಂಸಾರ ಹೂಡಿದರೆ ಸಾಕು ಎಂದಿದ್ದ ಅಣ್ಣನೂ ಒಪ್ಪಿದ. ಎಲ್ಲ ಸಿದ್ದತೆಗಳೂ ಭರದಿಂದ ನಡೆದವು. ಹಾಂ, ಹುಂ ಎನ್ನುವ...

ಮಾತಿನ ತೆರೆ ಒಂದು “ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ ಇದು ಇರದಿದ್ದರೆ ನನಗೆ ಸಮಾಧಾನವೇ ಇಲ್ಲ. ಪ್ರತಿಯೊಂದು ಕಾರ್ಯವನ್ನು ಆರಂಭಿಸುವಾಗ...

-೧- ೮-೪-೧೯೨೪ ರಘು, ಇಲ್ಲಿಂದ ಹೊರಟು ಹೋದ ಮೇಲೆ ಕಾಗದಗಳನ್ನೇ ಬರೆಯುತ್ತಿಲ್ಲವೇಕೆ? ನೀನು ಹೋದಂದಿನಿಂದ ನಿನ್ನ ಕಾಗದಗಳಾದರು ನೋಡುತ್ತಿರುವುದೇ ನನಗೆ ಕೆಲಸವಾಗಿದೆ. ನೀನು ಇಲ್ಲಿದ್ದಾಗ ನನ್ನೊಡನೆ ಹೇಳಿದ ಮಾತುಗಳನ್ನೆಲ್ಲಾ ಮರೆತಂತಿದೆ. ರಘು, ಯಾವ...

“ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು…! ನಾಲ್ಕು ಜನ ನೋಡಿದರೆ ಏನು ಅಂದಾರು?” ಅನ್ನಲಿ ಏನೇ ಅನ್ನಲಿ ನಾನು ಯಾವ ಜನಕ್ಕೂ ಹೆದರುವದಿಲ್ಲ ನನ್ನ ತಲೆ ಈ ದಿನ ಒಡೆದು ಹೋಗಲಿ! ...

ಆರು ವರ್ಷದ ಹುಡುಗ, ಕಲ್ಲು ಮುಳ್ಳಿನ ಏರುತಗ್ಗಿನ ಊರ ದಾರಿ ನಡೆದು ಸೋತಿದ್ದಾನೆ. ಆತನ ತಲೆಯ ಮೇಲೊಂದು ಬಾಳೆಯ ಕಂದು ಹೊರಲಾರದ ಹೊರೆಯದು ಅವನಿಗೆ. ಹೊತ್ತು ಕುತ್ತಿಗೆ ಸೋತಾಗ ಅದನ್ನು ಬಲ ಹೆಗಲ ಮಲೇರಿಸುವನು. ಅನಂತರ ಎಡ ಹೆಗಲ ಮೇಲೆ. ಅಲ್ಲಿಯೂ ನೋವಾ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...