ಮಾಣಿಕವ ಕಂಡವರು ತೋರುವರುಂಟೇ? ಮುತ್ತ ಕಂಡವರು ಅಪ್ಪಿಕೊಂಬುವರಲ್ಲದೆ, ಬಿಚ್ಚಿ ತೋರುವರೇ? ಆ ಮುತ್ತಿನ ನೆಲೆಯನು ಮಾಣಿಕ್ಯದ ನೆಲೆಯನು ಬಿಚ್ಚಿ ಬೇರಾಗಿ ತೋರಿ ರಕ್ಷಣೆಯ ಮಾಡಿದ ಕಾರಣದಿಂದ, ಬಚ್ಚ ಬರಿಯ ಬೆಳಗಿನೊಳಗೋಲಾಡಿ ನಿಮ್ಮ ಪಾದದೊಳಗೆ ನಿಜಮುಕ್ತಳಾದೆನಯ್ಯ...
ಅಯ್ಯ ನಾನು ಬಂದ ಭವಾಂತರದಲ್ಲಿ ನೀವು ಕಡೆ ಹಾಯಿಸಿದಿರೆಂಬುದನರಿಯೆ. ಕಂಗಳಿಗೆ ಕನ್ನಡಿಯ ತೋರಿದರು. ನಿಮ್ಮ ಕಾಣದೆ ಇದ್ದೆನಯ್ಯ. ಅದು ಕಾರಣದಿಂದ ಮನಕೆ ಪ್ರಾಣವಾಗಿ ಬಂದು ನಿಂದಿರಿ. ತನುವಿಂಗೆ ರೂಪಾಗಿ ಬಂದು ಸುಳಿದಿರಿ. ನಿಮ್ಮ ಸುಳುಹ...