ಲಿಂಗಮ್ಮನ ವಚನಗಳು – ೭

ವ್ಯಾಪಾರವ ಬಿಟ್ಟು, ತಾಪತ್ರಯವನೆ ಹಿಂಗಿ. ಲೋಕದ ಹಂಗನೆ ಹರಿದು, ಬೇಕು ಬೇಡೆಂಬುದನೆ ನೂಕಿ, ತಾ ಸುವಿವೇಕಿಯಾದಲ್ಲದೆ, ಜ್ಯೋತಿಯ ಬೆಳಗ ಕಾಣಬಾರದೆಂದರು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****

ಲಿಂಗಮ್ಮನ ವಚನಗಳು – ೬

ನಿಮ್ಮ ಪಾದವಿಡಿದು, ಮನ ನಿರ್ಮಳವಾಯಿತು. ನನ್ನ ತನು ಶುದ್ಧವಾಯಿತು. ಕಾಯ ಗುಣವಳಿಯಿತು. ಕರಣಗುಣ ಸುಟ್ಟು ಭಾವಳಿದು ಬಯಕೆ ಸವೆದು, ಮಹಾದೇವನಾದ ಶರಣರ ಪಾದವಿಡಿದು, ನಿಜಮುಕ್ತಳಾದೆನಯ್ಯ ಅಪ್ಪಣಪ್ರಿಯ ಚನ್ನಬಸವಣ್ಣಾ. *****

ಲಿಂಗಮ್ಮನ ವಚನಗಳು – ೫

ನೆನವುತ್ತಿದೆ ಮನ. ದುರ್ವಾಸನೆಗೆ ಹರಿವುತ್ತಿದೆ. ಕೊನೆಕೊಂಬೆಗೆ ಎಳೆವುತ್ತಿದೆ. ಕಟ್ಟಿಗೆ ನಿಲ್ಲದು- ಬಿಟ್ಟರೆ ಹೋಗದು. ತನ್ನ ಇಚ್ಫೆಯಲಾಡುವ ಮನವ ಕಟ್ಟಿಗೆ ತಂದು, ಗೊತ್ತಿಗೆ ನಿಲ್ಲಿಸಿ, ಬಚ್ಚಬರಿಯ ಬೆಳಗಿನೊಳಗೆ ಓಲಾಡುವ ಶರಣರ ಪಾದದಲ್ಲಿ ನಾ ಬೆಚ್ಚಂತಿದ್ದೆನಯ್ಯ ಅಪ್ಪಣಪ್ರಿಯ...

ಲಿಂಗಮ್ಮನ ವಚನಗಳು – ೩

ಮನ ಮರವೆಗೆ ಮುಂದುಮಾಡಿತ್ತು. ತನು ಕಳವಳಕ್ಕೆ ಮುಂದುಮಾಡಿತ್ತು. ಆಸೆರೋಷವೆಂಬವು ಅಡ್ಡಗಟ್ಟಿದವು. ಕೋಪ ಕ್ರೋಧವೆಂಬವು ಮುಂದುವರಿದವು. ಇದರೊಳಗೆ ಜಗದೀಶ್ವರನೆನಿಸಿಕೊಂಬವರ ನುಡಿಯ ಓಸರಿಸುವದು ನಮ್ಮ ಅಪ್ಪಣಪ್ರಿಯ ಚನ್ನಬಸವಣ್ಣಾ. *****

ಲಿಂಗಮ್ಮನ ವಚನಗಳು – ೨

ಮದ ಮತ್ಸರ ಬಿಡದು. ಮನದ ಕನಲು ನಿಲ್ಲದು. ಒಡಲ ಗುಣ ಹಿಂಗದು. ಇವ ಮೂರನು ಬಿಡದೆ ನಡಿಸುವನ್ನಕ್ಕ, ಘನವ ಕಾಣಬಾರದು. ಘನವ ಕಾಂಬುದಕ್ಕೆ, ಮದಮತ್ಸರವನೆ ಬಿಟ್ಟು, ಮನದ ಕನಲ ನಿಲಿಸಿ, ಒಡಲ ಗುಣವನೆ ಹಿಂಗಿಸಿ,...

ಲಿಂಗಮ್ಮನ ವಚನಗಳು – ೧

ಮಚ್ಚಬೇಡ.  ಮರಳಿ ನರಕಕ್ಕೆರಗಿ, ಕರ್ಮಕ್ಕೆ ಗುರಿಯಾಗಬೇಡ. ನಿಶ್ಚಿಂತನಾಗಿ ನಿಜದಲ್ಲಿ ಚಿತ್ತವ ಸುಯಿಧಾನವ ಮಾಡಿ, ಲಿಂಗದಲ್ಲಿ ಮನ ಅಚ್ಚೊತ್ತಿದಂತಿರಿಸಿ, ಕತ್ತಲೆಯನೆಕಳೆದು, ಬಚ್ಚಬರಿಯ ಬೆಳಗಿನೊಳಗೆ ಓಲಾಡಿ ಸುಖಿಯಾಗೆಂದರು ನಮ್ಮ ಅಪ್ಪಣ್ಣಪ್ರಿಯ ಚನ್ನಬಸವಣ್ಣಾ. *****

ಲಿಂಗಮ್ಮನ ವಚನಗಳು – ೮

ಅಯ್ಯ, ಈ ಮಹಾಘನವ ಕಾಂಬುದಕ್ಕೆ, ಹಸಿವು ಕೆಡಬೇಕು. ತೃಷೆಯಡಗಬೇಕು. ವ್ಯಸನ ನಿಲ್ಲಬೇಕು. ನಿದ್ರೆ ಹರಿಯಬೇಕು. ಜೀವ ಬುದ್ಧಿ ಹಿಂಗಬೇಕು. ಮನ ಪವನ ಬಿಂದು ಒಡಗೂಡಬೇಕು. ಚಿತ್ತ ಒತ್ತಟ್ಟಿಗೆ ಹೋಗದಿರಬೇಕು. ಹೊತ್ತು ಹೊತ್ತಿಗೆ ಎತ್ತರವನೇರಿ, ಬೆಚ್ಚು...