ಸ್ವಾಮಿ ಪುರಂದರರೆ ಮಾತೆಲ್ಲ ಸ್ಫಟಿಕ ಮಣಿಮಾಲೆ ಎನ್ನಿಸುವಂತೆ ಉಪನಿಷತ್ತಿನ ತಿರುಳೆ ಅರಳಿತೆನ್ನಿಸುವಂತೆ ಚಳಿಯ ಕೆನ್ನೆಯ ಬಿಸಿಲು ನೇವರಿಸಿತೆಂಬಂತೆ ನುಡಿದ ಋಷಿವರರೆ ಎಲ್ಲಿ ಪಡೆದಿರಿ ನೀವು ಇದ್ದಕಿದ್ದಂತೆಯೇ ನಭದೆತ್ತರಕೆ ನುಡಿವ ಇಂಥ ವರವ ? ಹೇಗೆ...
ತಾಯಿ ಹೆಂಡತಿ ಮಗಳು ಗೆಳತಿ ತೋರಿಕೆಯಲ್ಲಿ ಒಂದೆ ವೃಕ್ಷದ ಬೇರೆ ಬೇರೆ ಕೊಂಬೆ ಹಸಿಸೌದೆ ಬೆರಣಿ ಕಕ್ಕುವ ದಟ್ಟಹೊಗೆ ನಡುವೆ ನಿಧಾನ ಹಣಿಕುವ ಬೆಂಕಿ ಕುಡಿಯಂತೆ ಚಿಗಿತವಳು; ಇಷ್ಟಿಷ್ಟೆ ಗೆಲ್ಲುತ್ತ ಕುಡಿ ಕಾಂಡವಾಗುತ್ತ ತುತ್ತಲಾರದ...