Home / ಬಾಡದ ಹೂವು

Browsing Tag: ಬಾಡದ ಹೂವು

ನನ್ನ ಕವಿಯೆಂದೆನುವ ಮೆಚ್ಚುಮಾತೇಕೆ? ಪದದ ಸಮ್ಮಿಳನವೋ ಈ ನನ್ನ ಕವಿತೆ! ಎದೆಯ ಉಮ್ಮಳವಿದುವೆ, ಅದು ನಿನ್ನ ಕುರಿತೆ ಕೊರಗುತಿಹೆ ಕೊರಳಿದಕೆ ಹೊನ್ ಪದಕವೇಕೆ? ಇದು ಕವಿತೆಯಹುದೆನುವ ಮಾತು ಸರಿಯಲ್ಲ -ಕವಿಯು ನಾನಲ್ಲ- ಇದು ನಿನ್ನ ನೂರಾರು ಛಾಯೆಗಳ ಒರೆ...

ಒಮ್ಮೊಮ್ಮೆ ಎನಿಸಿವುದು ಜೀವವಾರಿದಮೇಲೆ ಸುಖಸ್ವಪ್ನಗಳ ಬಿಂಬ ಮೂಡುವುದು ಎಂದು, ಕೊಳದ ನೀರಲೆಯಳಿದು ಮೌನದಲಿ ಮಲಗಿರಲು ಸೌಂದರ್ಯದಾಗಸವ ಬಿಂಬಿಸುವ ತೆರದಿ! ಆದರೆಂತೋ ಏನೊ! ಅಂತಾದರೆನಿತುಸುಖ, ಬಾಳದು ಸ್ವಪ್ನವನು ಮರೆಯಬಹುದಾಗ! ಜೀವದೊಳಗಿಲ್ಲದುದ ಸಾವ...

ಹುಣ್ಣಿಮೆಯ ಚಂದ್ರಮನು ಮೋಡಗಳ ಬಲೆಯಿಂದ ಮೆಲ್ಲಮೆಲ್ಲನೆ ಜಾರಿ ಮುಂದೆ ಓಡುತಲಿರಲು ಉಷೆಯಕಡೆ ಕಾಲದಲ್ಲೋಲ ಸಾಗರದಿಂದ ಒಂದಾದಮೇಲೊಂದು ಅಲೆಬಂದು ಅಳಿದಿರಲು ಮೌನದಲಿ-ನಾನಿನ್ನು ಎಚ್ಚತ್ತು ಮಲಗಿರುವೆ! ಹಿಂದೊಂದು ದಿನ ಇಂಥ ರಾತ್ರಿಯಲೆ ನಾನೆನ್ನ ಒಲವಿನಕ...

ತಾರೆ ಬೆಳಗುತಲಿತ್ತು ಆಗಸದಿ ನಗುನಗುತ ಹುಲ್ಲು ಗರಿಕೆಯದೊಂದು ನೆಲದಿ ನಿಂತು ಮೇಲೆ ನೋಡುತಲವಳ ಬೆಳಕು ಬಿನ್ನಾಣಗಳ ಕಂಡು ಬೆರಗಾಗುತಲಿ ಕರೆಯಿತಿಂತು! “ಬಾರೆನ್ನ ಮನದನ್ನೆ-ತಾರಕೆಯೆ ಬಾರೆನ್ನ ಮನದ ಚಿಂತೆಯನಳಿಸಿ ಶಾಂತಿ ನೀಡು.” ಗರಿಕೆ...

ದುಡಿಯುತಿಹರೂ ನಾವೆ ಮಡಿಯುತಿಹರೂ ನಾವೆ ಜಗಕೆ ಅನ್ನವ ನೀಡುತಿಹರು ನಾವೆ! ತುತ್ತೊಂದು ಅನ್ನವನು ಬೇಡುತಿಹೆವು! ನಿಮಗಾಗಿ ಜೀವನವ ಸವೆಸುತಿಹೆವು! ಮೈಯ ದಂಡಿಪರಾವು ರಕ್ತ ಹರಿಸುವರಾವು ದಿನವು ಜನ್ಮವ ತೇಯುತಿಹರು ನಾವು! ಧನಿಕರಿಗೆ ಹೊನ್ನ ಬಣ ಕೂಡಿಸಿಹ...

ಉರುಳಿರುವ ತಾರೆಗಳಿಗಳುತ ನಿಲ್ಲುವರುಂಟೆ? ಮೂಡಿರಲು ಮೂಡಲಲಿ ಉದಯದರಳಿನ ಕಂಪು ಕಳೆದ ಕಾಲದ ತಂಟೆ ಇಂದೇಕೆ? – ಹೊಸ ತಂಪು ಹೃದಯದೊಳಗರಳಿರಲು, ಕಂಪು ಸವಿವುದಬಿಟ್ಟು ಅಳಿದ ಕನಸುಗಳನ್ನು-ಸತ್ವವಿಲ್ಲದ ಹೊಟ್ಟು ಅದು ಎಂಬುದನೆ ನೀ ನಂಬದೆಯೆ ಮೊಗೆಮ...

ಹೊಸ ಹರಯದಲಿ ಹೂವು ಅರಳುತ್ತ ಮೊಗೆಮೊಗೆದು ಮಾಧುರ್ಯವನು ಬೀರಿ ಹಿಗ್ಗಿನಲಿ ಕುಣಿಯುತಿರೆ ದೂರದಿಂ ಹಾರುತ್ತ ದುಂಬಿ ಅದರೆಡೆ ನಡೆದು ತನ್ನಿಚ್ಛೆ ಝೇಂಕರಿಸಿ ಹೂಂಕರಿಸಿ ಹೂವಿನೆಡೆ ದಿಟ್ಟಿಸುತ ಸುತ್ತೆಲ್ಲ ಸುತ್ತಿ ಸುಳಿದಾಡುವೊಲು, ಸಾವ ಛಾಯೆಯು ಬಂದು ...

ಅಮ್ಮನನು ಅಪ್ಪಿರುವ ಎಳೆಯ ಕಂದನ ತೆರದಿ ಮೈಸೂರ ಕಂಕುಳಲಿ ಕೊಡಗ ನಾಡು ಗಿರಿಶಿಖರ ಮಲೆಮೌನ, ಕಾಡುಕಳುಪುವ ಕಂಪು ತೊರೆಯನೀರಿನ ಗೀತ ಸೊಗದ ಬೀಡು! ಕಾವೇರಿ ಬರುತಿಹಳು ಕೊಡಗಿನಲಿ ಜನಿಸುತ್ತ ಅಂಕು ಡೊಂಕಿನ ಕೊಂಕು ಬಿಂಕದಿಂದ, ಸಂದೇಶ ತರುತಿಹಳು ಕೊಡಗ ನಾ...

ಕಂಗಳಿಂದಲಿ ನಿನ್ನ ನೆನಪದೂಡುವುದೆಂತು? ಬೇಡಬೇಡಂದರೂ, ಅಲೆಮೇಲೆ ಅಲೆ ಬಂದು ದಡವನೆಡೆಬಿಡದೆಯೇ ಮುತ್ತಿ ಮುತ್ತಿಕ್ಕುವೊಲು ಕಳೆದ ಕಾಲದಲಳಿದ ಕನಸುಗಳು ಹೊರಬಂದು ದುಗುಡ ಹರಡುತಲಿಹವು.  ದಡದ ಮೇಲಿನ ಮರಳು ಹನಿನೀರಿಗಾಗೊರಲಿ ಕೊರಗಿ ಬಿಸಿಯಾಗುವೊಲು ಹೃದ...

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...