Home / Abbas Melinamani

Browsing Tag: Abbas Melinamani

ಸ್ಫರದ್ರೂಪಿ ಯವಕನೊಬ್ಬ ಪ್ರತಿಷ್ಠಿತ ಕಂಪನಿಯೊಂದರಲ್ಲಿ ಉನ್ನತ ಅಧಿಕಾರಿಯಾಗಿದ್ದ. ಅವನು ತನ್ನ ತಾಯಿ ತಂದೆ ಸಂಬಂಧಿಕರೊಂದಿಗೆ ಬಂದು ಆ ಚೆಲುವಾದ ಹುಡುಗಿಯನ್ನು ನೋಡಿದ. ಅವಳ ಮಾತು, ಅರ್ಹತೆಗಳೆಲ್ಲ ಅವನಿಗಿಷ್ಟವಾದವು. ಹುಡುಗಿಯೂ ಅವನನ್ನು ಮೆಚ್ಚಿಕ...

ಉಗ್ರಪ್ಪ ನಾಲ್ಕನೆಯ ಬಾರಿ ಸಾರ್ವತ್ರಿಕ ಚುನಾವಣೆಯಲ್ಲಿ ಗೆದ್ದು ಹ್ಯಾಟ್ರಿಕ್ ಸಾಧಿಸಿದ್ದ. ಅಭಿಮಾನಿಗಳು ಅತ್ಯಂತ ವೈಭವದಿಂದ ಅವನ ವಿಜಯೋತ್ಸವ ಆಚರಿಸಿದರು. ತೆರೆದ ವಾಹನದಲ್ಲಿ ಊರ ತುಂಬ ಮೆರೆಸಿದರು. ಗೆಲುವಿನಿಂದ ಬೀಗಿಕೊಂಡಿದ್ದ ಉಗ್ರಪ್ಪನ ಬಳಿಗೆ...

ಕಾರ್ಯಾಲಯದಲ್ಲಿ ಶಿಕ್ಷಣಾಧಿಕಾರಿಗಳು ಕಡತ ನೋಡುವಲ್ಲಿ ಮಗ್ನರಾಗಿದ್ದರು. ಹೊರಗೆ ಕೂಗಾಟ ಕೇಳಿಸಿತು. “ಧಿಕ್ಕಾರ…. ಧಿಕ್ಕಾರ…. ಹಲ್ಕಾ ಶಿಕ್ಷಕನಿಗೆ ಧಿಕ್ಕಾರ.” ಧ್ವನಿ ಜೋರಾಗಿತ್ತು. ಸಾಹೇಬರು ಎದ್ದು ಹೊರಗೆ ಬಂದರು. ಆ...

ದೊಡ್ಡ ಟ್ರಾನ್ಸ್‌ಪೋರ್ಟ್ ಕಂಪನಿಯ ಟ್ರಕ್ ಡ್ರೈವರನೊಬ್ಬ ಮನೆ ಕಟ್ಟಿಸಿದ. ಗೃಹ ಪ್ರವೇಶಕ್ಕೆ ಬಹಳಷ್ಟು ಜನ ಬಂದಿದ್ದರು. ಮಧ್ಯಾಹ್ನ ಬಂದವರಿಗೆಲ್ಲ ಸುಗ್ರಾಸ ಭೋಜನ. ಮತ್ತೆ ರಾತ್ರಿ ತನ್ನ ಖಾಸಾ ಜನರಿಗೆ ಭಾರೀ ಹೊಟೇಲಿನಲ್ಲಿ ಭರ್ಜರಿ ಪಾರ್ಟಿ ಏರ್ಪಡಿ...

ಅವರು ಕೋಟ್ಯಾಧೀಶ ಮನುಷ್ಯ. ಹತ್ತಾರು ಬಿಸಿನೆಸ್ಸುಗಳಿಂದ ಭಾರಿ ವರ್ಚಸ್ಸು ಗಳಿಸಿದ್ದರು. ದುಡ್ಡು ಅವರಲ್ಲಿ ಕೊಳೆಯಾಗಿ ಬಿದ್ದಿದೆಯೆಂದು ಜನ ಮಾತಾಡಿಕೊಳ್ಳುತ್ತಿದ್ದರು. ಆ ವ್ಯಕ್ತಿಯದು ತುಂಬು ಸಂಸಾರ. ನಾಲ್ಕು ಜನ ಗಂಡು ಮಕ್ಕಳು. ನಾಲ್ಕು ಜನ ಹೆಣ್...

ಬಿರು ಬೇಸಿಗೆ ಒಂದು ಮಧ್ಯಾಹ್ನ ಪಾಟೀಲ್ ಸರ್‍ ಭೇಟಿಯಾದರು. ಹೊರ ಜಿಲ್ಲೆಯ ಹಳ್ಳಿಯ ಶಾಲೆಯೊಂದರಲ್ಲಿ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ನೇಮಕವಾದ ನಂತರ ಅವರು ಕಂಡದ್ದು ಅದೇ ಮೊದಲು. ಉಭಯಕುಶಲೋಪರಿ ತರುವಾಯ ಹೊಟೇಲಿಗೆ ಹೋಗಿ ಕಾಫಿಗೆ ಆರ್ಡರ್‍ ಕೊಟ್ಟು ಪ...

ಕುಟುಂಬದ ಯಜಮಾನನೊಬ್ಬ ಹರಕೆಯೊಂದನ್ನು ಹೊತ್ತಿದ್ದ. ಬಹಳ ದಿನದ ಹರಕೆಯದು. ಮೆನಯ ಕುಲದೇವರಿಗೆ ಕುರಿಯೊಂದನ್ನು ಅವನು ಬಲಿಕೊಡಬೇಕಾಗಿತ್ತು. ಅದಕ್ಕಾಗಿ ಅವನು ಕುರಿಮರಿಯೊಂದನ್ನು ಸಾಕುತ್ತ ಬಂದಿದ್ದ. ಕುರಿ ಸೊಪ್ಪು ಮೇಯ್ದು ದಷ್ಟಪುಷ್ಟವಾಗಿತ್ತು. ಕು...

ಮೂರು ದಿನಗಳಿಂದ ಅಮೀನೂರು ಜೀವಶವದಂತೆ ಉಸಿರಾಡತೊಡಗಿತ್ತು. ಗಾಳಿಗೆ ಬೀಸಲೋ ಬೇಡವೋ ಎನ್ನುವ ಸಂಧಿಗ್ಧತೆ. ಧಗಧಗ ಎನ್ನುವ ಸೂರ್ಯ ಭೂಮಿಯನ್ನು ಕಾದಹಂಚಿನಂತೆ ಮಾಡಿದ್ದ. ರಸ್ತೆಗಳಲ್ಲಿ ಮನುಷ್ಯರನ್ನು ಕಾಣದೆ ಬಿಡಾಡಿ ನಾಯಿ, ದನ ಮತ್ತು ಹಂದಿಗಳು ದಿಗಿಲ...

ವ್ಯವಸ್ಥೆಯ ವಿರುದ್ಧ ತನ್ನದು ನಿರಂತರ ಹೋರಾಟವೆಂದು ಆ ಹೋರಾಟಕ್ಕಾಗಿ ತನ್ನ ಜನರನ್ನು ಸಜ್ಜುಗೊಳಿಸುವೆನೆಂದು ಹೇಳುತ್ತಲೇ ಪ್ರಸಿದ್ಧಿಗೆ ಬಂದ ತಿಪ್ಪೇಶಿಯ ಸೃಜನಶೀಲತೆ ಲೋಕವನ್ನು ಬೆರಗುಗೊಳಿಸಿತ್ತು. ಅವನ ಕಾವ್ಯ ನಾಟಕಗಳು ಸಮಾಜದ ಜ್ವಲಂತ ಸಮಸ್ಯೆಗಳ...

ಬುದ್ಧನ ಜೀವನ ಕುರಿತಾದ ಹೊಸ ನಾಟಕದ ತಾಲೀಮು ಶುರುವಾಗಿತ್ತು. ನಿರ್ದೇಶಕ, ಸಂಗದೊಡೆಯರು, ಸಹಕಲಾವಿದರು ಆ ನಟನ ಮೇಲೆ ತಮ್ಮ ಗಮನವನ್ನು ಕೇಂದ್ರೀಕರಿಸಿದ್ದರು. ಯಾಕೆಂದರೆ ಅವನು ಬುದ್ಧನ ಪಾತ್ರವನ್ನು ನಿರ್ವಹಿಸುತ್ತಿದ್ದ. ಅದ್ಭುತ ಅಭಿನಯಕ್ಕೆ ಹೆಸರಾ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...