Home / Govind Pai

Browsing Tag: Govind Pai

ಸುಮ್ಮನೇಕೆನ್ನನೆಲೆ ವಿಧಿಯೆ ಕಾಡಿಸುವೆ?- ಬೇಡಿದುದ ಕೊಡೆ, ಬೇಡದುದನಾಯ್ದು ಕೊಡುವೆ! ಆರದುದನಾಪೆನೆಂದೇಕೆ ತಡಬಡುವೆ? ಕೇಳುವೊಡನೀವೆನೆಂದೇಕ ಬೇಡಿಸುವೆ? ೪ ಆದೊಡಂ ಕೇಳೆನಗೆ ನಿನ್ನಿಂದು ಬೇಡ- ಅವಳನೆನ್ನಿಂದೊಯಿದ ಇಂದೆನಗೆ ಬೇಕೆ? ಇನ್ನವಳ ಕಾಣಿಸದ ನ...

ಶ್ರೀಮದಮಲ ವಚಃಪರಿಧಿಯಾ ದೀ ಮಹಾಕೃತಿಯಿಂದೊಲವು ಮಿಗೆ ವ್ಯೋಮದಲಿ ವಿಧು ವೇಡಿಸಿದ ಪರಿವೇಷದಿಂದೆರೆವ| ಕೌಮುದಿಯೊಲೀ ಕನ್ನಡದೊಳಾ ಸೀಮಮೆನೆ ನೆಲಸಿಹುದಿದಂ ನೆಗ ಳ್ದಾ ಮಹಾಕವಿ ನಿನಗೆ ಕನಿಗಳ ಕವಿಯೆ ವಂದಿಸುವೆ ||೧|| ಮೊದಲ ಮಗನಾ ಶುಕನು ಭಾಗವ ತದ ಪುರಾ...

‘ನಮ್ಮ ಸೊಡರನುರಿಸುವಿರೇಂ ಮಿಣುಕಲಿಂತು ಬರಿಯೆ? ಪರರ ಬೆಳಕನಳುಪುವಿರೇಂ? ಸುಡದೆ ನಿಮ್ಮ ಗರಿಯೆ?’- ಜಂಕಿಸಿತಿಂತುಡು ಸಂಕುಳ ಹೊಂಚುವ ಮಿಂಚುಹುಳಂಗಳ ಬೇಸಗೆ ಕೊನೆವರಿಯೆ. ೭ ‘ಕುರುಡಾದಿರೆ ಬೆಳಕಿನಿಂದ? ನಿಮ್ಮ ಬೆಳಕಿದಲ್ಲ; ನಿಮ...

‘ನಾರಿ ನಾನೆಂದಕಟ ರೂಪಗೋಸಾಯಿ೧ ನನಗೀಯನೆನುವನೇಂ ದರ್ಶನದ ಭಾಗ್ಯಂ? ಹೆಮ್ಮೊಗನ ನೋಡದೇನವನ ವೈರಾಗ್ಯಂ? ಏತರೀ ವ್ರತವೊ!’ – ಎಂದಳು ಮಿರಾಬಾಯಿ ೪ ‘ಇವನಾದೊಡಂ ಗಂಡೆ? ಗೋಕುಲದೊಳೆಲ್ಲ ಹೆಂಗಸಲ್ಲದೆ ಗಂಡಸಿಲ್ಲಿ ಬರಸಲ್ಲ! ಅರ...

ಬೇಕೆಂಬುವ ಬಡತನವ ನ್ನೇಕೆ ಕರೆದುಕೊಳುವೆ? ಬೇಡದೆ ಬಹ ಬಲುಧನವ ನ್ನೇಕಕಟಾ ಕಳೆವೆ? ಹಗಲ ಕುಮುದದಿಂದುಭಿಕ್ಷೆ, ಶಿಶಿರಾಂತದ ಸುಮೋಪೇಕ್ಷೆ ನೆರೆಯಲೆಂದುಮಳವೆ? ೭ ಬೇಕೆನೆ ನೀನೊಮ್ಮೆ ಬಳಿಕ ಬೇಕೆನುವೆಲ್ಲವಂ- ಬೇಡುವುದಿನ್ನೇಕೆ ತುಳುಕ ಲಂಬುಧಿ ಸಲಿಲವಂ? ...

ತಾಯೆ ಬಾರ, ಮೊಗವ ತೋರ, ಕನ್ನಡಿಗರ ಮಾತೆಯೆ! ಹರಸು ತಾಯೆ, ಸುತರ ಕಾಯೆ, ನಮ್ಮ ಜನ್ಮದಾತೆಯೆ! ನಮ್ಮ ತಪ್ಪನೆನಿತೊ ತಾಳ್ವೆ, ಅಕ್ಕರೆಯಿಂದೆಮ್ಮನಾಳ್ವೆ; ನೀನೆ ಕಣಾ ನಮ್ಮ ಬಾಳ್ವೆ, ನಿನ್ನ ಮರೆಯಲನೆಮ್ಮೆವು- ತನು ಕನ್ನಡ, ಮನ ಕನ್ನಡ, ನುಡಿ ಕನ್ನಡವೆಮ್...

ಯಾವಳೊಬ್ಬ ಹಾಲುಗಿತ್ತಿ ಹಾಲ ಕೊಡವ ತಲೆಯೊಳೆತ್ತಿ ಹೊಳೆಯಾಚೆಗೆ ಕಡೆಯಲೊತ್ತಿ ಕಡಕೆ ಬಂದಳು ೪ ತಡವಿನಿಸಿರೆ ಕಡವ ತೆರೆಯೆ, ಕೊಡವನಿಳಿಸಿ ನೀರನೆರೆಯೆ, ಹಾಲಿನರಕೆ ನೆರೆದು ನೊರೆಯೆ ತುಂಬಿತಾ ಕೊಡಂ ೮ ಅವಸರದಿಂ ದೋಣಿ ಹತ್ತಿ ಕುಳಿತಳಾಕೆ ೧ಬಾಣಿಗೊತ್ತಿ;...

ರಾಗ ಯಮುನಾಕಲ್ಯಾಣಿ-ತಾಳ ಧುಮಾಳಿ ಯಾವ ಭಾಗ್ಯದಿಂದಿಲ್ಲಿಗೆ ಬಂದೆ? ನಿನ್ನ ಕಂಡು ಧನ್ಯನಾದೆ ತಂದೆ! ಇನ್ನಾದಡಮೆನಿಸೆನ್ನೆದೆಯಿಂದೆ- ಜಯ ಜಯ ಪಂಢರಿನಾಥ ವಿಠೋಬಾ! ||೧|| ತುಕಾರಾಮ ನಾಮದೇವರಿಲ್ಲಿ ಕುಣಿದ ರಂಗಸಿಲೆಯಿಂ ೧ಸೆಲೆವಲ್ಲಿ ನಿನ್ನ ನಾಮಮೆದೆಯೊ...

[Theodor Korner ಎ೦ಬ ಜರ್ಮನ್‌ ಕವಿಯ `Gebet wahrend der Schlacht’ (Prayer during the battle) ಎಂಬ ಕವಿತೆಯಿಂದ ಪ್ರೇರಿತವಾದುದು] ಕರೆವೆ ನಾ ನಿನ್ನನೊಡೆಯಾ! ನಿನ್ನ ಹೆಸರಂ ಕೊಂಡು ನಿಂದೆನಿದೊ ಸಿಡಿಗುಂಡು ನೂರ್ಮೆ ಮಾರ್ಮೊರಸೆ ಕಾರ್ಮ...

ಮರಣತ ಪರಮೆನ್ನ ಜಿಜ್ಞಾಸೆಯೊಡೆಯಾ- ಹುಟ್ಟ ಹೊರವಟ್ಟು ಬಾಳ್ವೆಯ ಮುಟ್ಟೆ ಕಡೆಯಾ, ಮುಂತಡೆವರೇ ಕಡದಿ ಕತ್ತಲೆಯ ತಡಿಯಾ? ೩ ಆವಂಬಿಗಂ ಬರುವ ಪರಿಸೆಯಂ ಕಾಯ್ವಂ? ಎಂತೆಲ್ಲಿಗೆನ್ನೆಗಂ ತೊರೆಯಾಚೆ ಹಾಯ್ವಂ? ಅಲ್ಲಿಂದ ಮುಂದವರನಾರೆಲ್ಲಿಗೊಯ್ವಂ? ೬ ಕಡವಿಹವೆ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...