ಪುಂಸ್ತ್ರೀ – ೫
ಜಲದೊಳರಳಿತು ಪ್ರೇಮಕಮಲ ಸೌಭದೇಶದ ಗಡಿಯವರೆಗೆ ಅವಳನ್ನು ಕರೆತಂದ ಹಸ್ತಿನಾವತಿಯ ರಥ ಅಲ್ಲಿ ನಿಂತಿತು. ಹಸ್ತಿನಾವತಿಯಿಂದ ಸೌಭಕ್ಕೆ ಎರಡು ದಿನಗಳ ಪಯಣ. ಎರಡು ರಾತ್ರೆಗಳನ್ನು ಛತ್ರಗಳಲ್ಲಿ ಕಳೆದು, ಅವುಗಳ ಸನಿಹದಲ್ಲೇ ಇದ್ದ ಅಶ್ವಶಾಲೆಗಳಲ್ಲಿ ಕುದುರೆಗಳನ್ನು ಬದಲಾಯಿಸಿ...