
ಅನುದಿನವು ಇಡು ಭಕ್ತಿಯನ್ನು ದೇವನಡಿಯಲ್ಲಿ ಅನುಸರಿಸು ಸನ್ಮಾರ್‍ಗವನೆ ನಿತ್ಯ ಮುದದಿ. ಎತ್ತಲುಂ ಕತ್ತಲೆಯು ಸುತ್ತಿಹುದು ದಾರಿಯನು ಕಿತ್ತುಬಿಡು ಭಯವನ್ನು, ಎತ್ತು ಪೌರುಷವಾ. ಅತ್ತಿತ್ತ ಕದಲದಿರು, ಚಿತ್ತವನು ಸ್ಥಿರಗೊಳಿಸು, ಎತ್ತರದೊಳಿದೆ ತಾರೆ, ...
ಮರಳಿ ಯತ್ನವ ಮಾಡು! ಮರಳಿ ಯತ್ನವ ಮಾಡು! ತೊರೆಯದಿರು ಮೊದಲು ಕೈ ಗೂಡದಿರಲು. ಹಿರಿದು ಧೈರ್‍ಯವ ಹಾಳು! ತೊರೆಯದಿರು, ತೊರೆಯದಿರು! ಮರಳಿ ಯತ್ನವ ಮಾಡು, ಸಿದ್ಧಿಸುವುದು. ಒಂದು ಸಲ ಕೆಟ್ಟುಹೋ ಯ್ತೆಂದು ನೀ ಅಂಜದಿರು ಕುಂದಿಲ್ಲ. ಕೈಗೂಡ -ದನಿತರಿಂದ ನ...
ಮಗುವೆ, ನಿನ್ನಯ ಮೈಗೆ ಗುರಿ ಇಟ್ಟು ಹೊಡೆವಾ ಬಗೆ ಬಗೆಯ ಬೇಡರಿಂದಲಿ ದೂರವಾಗು. ಹೊತ್ತನ್ನು ತಿಂಬ ಸೋಮಾರಿತನ ಬೇಡ! ಮತ್ತು ಹಿಡಿಸುತ ಮೈ ಕೊಲುವ ಕಳ್ಳು ಬೇಡ! ಕತ್ತು ಕೊಯ್ಕರ ಕೂಡೆ ನಂಟುಬೇಡತನ! ಉತ್ತಮೋತ್ತಮರಲ್ಲಿ ನಿನ್ನ ಹಗೆ ಬೇಡ! ಎತ್ತಿದ್ದ ಸಾಲ...
ಆಡಿನಾ ಮರೀ, ಆಡ ಬಾರೆಲೆ! ಓಡ ಬೇಡೆಲೆ, ನೋಡಿ ನನ್ನನು! ಅರಳಿ ಎಲೆಯನೂ, ಹಲಸಿನೆಲೆಯನೂ, ಹುರುಳಿ ಕಡಲೆಯಾ, ಕಲಸಿ ಕೊಡುವೆನು. ಮಾತನಾಡದೇ, ನನ್ನ ನೋಡದೆ, ಏತಕ್ಹೋಗುವೆ? ಆಡಿನಾ ಮಗೂ! ***** (ಕವಿಶಿಷ್ಯ)...
ಹಗಲೆಲ್ಲಾ ಕಳೆಯಿತು ಸೂರ್ಯನು ಮುಳುಗೆ; ಖಗ ಹಾರಿತು ಗೂಡಿನ ಒಳಗೆ; ಜಗವೆಲ್ಲಾ ಬೆಳಗಿತು ದೀಪವು ಬೆಳಗೆ, ಗಗನಾಂಗಣದಲ್ಲಿ ಉಡು ತೊಳಗೆ; ಮೃಗವೆಲ್ಲಾ ಅಲೆವವು ಬೆಟ್ಟದ ಕೆಳಗೆ; ಹೊಗುತಿರುವುದು ಕತ್ತಲೆ ಇಳೆಗೆ. ಓ-ಮಗುವೇ, ನೀ ಸಂಜೆಯ ಗಳಿಗೆಯಲಿ ನಗುತಲಿ...
ಜೋಗುಳ ಹಾಡನ್ನು ಲಾಲಿಸು, ಜೋ! ಜೋ! ತೂಗುವೆ ತೊಟ್ಟಿಲ, ಮಲಗಿರು, ಜೋ! ಜೋ! ಸುಮಲತೆಗಳ ಪರಿಮಳವ ಬಿತ್ತರಿಸಿ, ಕಮಲದ ಕೋಮಲ ಗಂಧವ ಬೆರಸಿ, ಮಂದ ಮಾರುತವು ಬೀಸುತ್ತಿರಲಿನಿಸು, ತಂದೆ, ತಂದಿಹೆನೊಂದು ಮುದ್ದಿನ ಕನಸು. ಮೊದಲೆವೆಗಳನು ಮುಕುಳಿಸೆನ್ನ ಸಿರಿ...
ತೂಗುವ ತೊಟ್ಟಿಲ ಜೋಗುಳ ಹಾಡಿ, ಕೂಗದೆ ಮಲಗೆನ್ನ ಮುದ್ದಿನ ಮೋಡಿ, ಜೋ ಜೋ ತುಂಬಿ ಪವಡಿಸಿತು ಎಸಳ ಹೂಗಳಲಿ, ಗೊಂಬೆ! ನಿನ್ನಯ ಕಣ್ಣಿನೆವೆ ಸೆರೆಗೊಳಲಿ, ರೆಂಬೆ ಚಿಗುರೊಳಡಗಿತು ಪಿಕದುಲಿಯು, ಸೋಂಬನಾಗಲಿ ನಿನ್ನ ತುಟಿ ಚಿಲಿಪಿಲಿಯು. ಜಲದಮೇಲ್ ಮಲಗುವ ಮ...
ನನ್ನ ಚಿಕ್ಕತಾಯಿ ನಮ್ಮಿಬ್ಬರನ್ನು ತನ್ನ ಮನೆಯಲ್ಲಿ ಬಿಟ್ಟು ಈ ಲೋಕದಿಂದ ದೂರಳಾದಳು. ಅವಳು ಸ್ಪರ್ಗಕ್ಕೆ ಹೋದಳೋ ನರಕಕ್ಕೆ ಬಿದ್ದಳೋ ನನ್ನಿಂದ ಹೇಳಲು ಸಾಧ್ಯವಿಲ್ಲ. ಸ್ವರ್‍ಗದ ಸೋಪಾನಗಳು ಸಾವಿರವಾದರೆ, ಅವನ್ನೆಲ್ಲಾ ಹತ್ತುವಷ್ಟು ದೇಹಶಕ್ತಿ ಅವಳಲ್...















