Home / Srinivasa Murthy MR

Browsing Tag: Srinivasa Murthy MR

ರಾಜಕೀಯ ಮುಖಂಡರು ಆವಲಹಳ್ಳಿಯಲ್ಲಿ ನಡೆದ ಉಪಾಧ್ಯಾಯರ ಸಂಘದ ಸಭೆ ರೇಂಜಿನಲ್ಲೆಲ್ಲ ದೊಡ್ಡ ಜಾಗಟೆಯನ್ನು ಬಾರಿಸಿದಂತಾಯಿತು. ಅದರ ಕಾರ್ಯಕಲಾಪಗಳು, ಔತಣದ ವೈಖರಿ, ಇನ್ಸ್ಪೆಕ್ಟರು ಸಲಿಗೆಯಿಂದ ಉಪಾಧ್ಯಾಯರೊಡನೆ ಮಿಳಿತರಾಗಿ ಅವರ ಕಷ್ಟ ಸುಖಗಳನ್ನು ವಿಚಾ...

ಆವಲಹಳ್ಳಿಯಲ್ಲಿ ಸಭೆ ಹಿಂದೆಯೇ ನಿಶ್ಚೈಸಿದ್ದಂತೆ ಆವಲಹಳ್ಳಿಯಲ್ಲಿ ಉಪಾಧ್ಯಾಯರ ಸಂಘದ ಸಭೆಯನ್ನು ಸೇರಿಸಲು ಏರ್ಪಾಟು ನಡೆದಿತ್ತು. ರಂಗಣ್ಣನು ಹಿಂದಿನ ದಿನ ಸಾಯಂಕಾಲವೇ ಆವಲಹಳ್ಳಿಗೆ ಬಂದು ಮೊಕ್ಕಾಂ ಮಾಡಿದನು. ಸಭೆಯಲ್ಲಿ ಕಾರ್ಯಕ್ರಮಗಳಲ್ಲ ಚೆನ್ನಾಗ...

ಮೇಷ್ಟ್ರು ಮುನಿಸಾಮಿ ಮಾರನೆಯ ದಿನ ಬೆಳಗ್ಗೆ ರಂಗಣ್ಣನು, ‘ಶಂಕರಪ್ಪ ! ನೀವೂ ಗೋಪಾಲ ಇಬ್ಬರೂ ನೆಟ್ಟಗೆ ಜನಾರ್ದನಪುರಕ್ಕೆ ಹಿಂದಿರುಗಿ ಹೋಗಿ, ನನ್ನ ಸಾಮಾನುಗಳನ್ನೆಲ್ಲ ಜೋಕೆಯಿಂದ ತೆಗೆದುಕೊಂಡು ಹೋಗಿ. ನಾನು ದಾರಿಯಲ್ಲಿ ಕೆಲವು ಸ್ಕೂಲುಗಳನ್ನು ಭೇಟ...

ದೊಡ್ಡ ಬೋರೇಗೌಡರು ಪ್ರಾಥಮಿಕ ಮತ್ತು ಮಾಧ್ಯಮಿಕ ವಿದ್ಯಾಭ್ಯಾಸಗಳ ಸಮಸ್ಯೆ ಬಹಳ ದೊಡ್ಡದೆಂದು ರಂಗಣ್ಣನಿಗೆ ತಿಳಿದುಬಂತು. ಮೇಲಿನವರು ಬರಿಯ ವರದಿಗಳನ್ನು ತಯಾರು ಮಾಡುವುದರಲ್ಲಿಯೂ ಹೊರಗಿನ ಪ್ರಾಂತದವರಿಗೆ – ಅದರಲ್ಲಿಯೂ ಮುಖ್ಯವಾಗಿ ಇಂಗ್ಲಿಷ...

ಬೋರ್ಡು ಒರಸುವ ಬಟ್ಟೆ ಸುತ್ತಮುತ್ತಲಿನ ಕೆಲವು ಪಾಠಶಾಲೆಗಳನ್ನು ನೋಡಿಕೊಂಡು ರಂಗಣ್ಣ ಜನಾರ್ದನಪುರಕ್ಕೆ ನಾಲ್ಕು ದಿನಗಳ ನಂತರ ಹಿಂದಿರುಗಿದನು. ರೇಂಜಿನಲ್ಲಿ ಹಲವು ಸುಧಾರಣೆಗಳಾಗಬೇಕೆಂಬುದು ಅವನ ಅನುಭವಕ್ಕೆ ಬಂದಿತು. ತನಗೆ ತೋರಿದ ವಿಷಯಗಳನ್ನೆಲ್ಲ...

ಮೇಷ್ಟ್ರು ರಂಗಪ್ಪ ರಂಗಣ್ಣ ರೇಂಜಿನಲ್ಲಿ ಅಧಿಕಾರ ವಹಿಸಿ ನಾಲ್ಕು ತಿಂಗಳಾದುವು. ಸುಮಾರು ನಲವತ್ತು ಐವತ್ತು ಪಾಠಶಾಲೆಗಳ ತನಿಖೆ ಮತ್ತು ಭೇಟಿಗಳಿಂದ ಪ್ರಾಥಮಿಕ ವಿದ್ಯಾಭ್ಯಾಸದ ಸ್ಥಿತಿ ತಕ್ಕ ಮಟ್ಟಿಗೆ ಅವನಿಗೆ ಪರಿಚಯವಾಯಿತು. ಹಲವು ಕಡೆಗಳಲ್ಲಿ ಪಾಠ...

ಕಂಬದಹಳ್ಳಿಗೆ ಭೇಟಿ ಮಾರನೆಯ ದಿನ ಪ್ರಾತಃಕಾಲ ಆರು ಗಂಟೆಗೆಲ್ಲ ರಂಗಣ್ಣನು ಸ್ನಾನಾದಿ ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಉಡುಪುಗಳನ್ನು ಧರಿಸುವುದಕ್ಕೆ ತೊಡಗಿದನು, ಬೈಸ್ಕಲ್ ಮೇಲೆ ಪ್ರಯಾಣ ಮಾಡಬೇಕಾದ್ದರಿಂದ ಸರ್ಜ್‍ಸೂಟು ಬೇಡವೆಂದು ಬದಿಗೊತ್ತಿ ಚ...

ಜಂಬದ ಕೋಳಿ ಜನಾರ್ದನ ಪುರದ ಹಳೆಯ ಇನ್ಸ್‍ಪೆಕ್ಟರಿಗೆ ಮೇಷ್ಟರುಗಳೆಲ್ಲ ಬೀಳ್ಕೊಡುವ ಔತಣವನ್ನು ಏರ್ಪಾಟು ಮಾಡಿದ್ದಾರೆ. ಹಳೆಯ ಇನ್‍ಸ್ಪೆಕ್ಟರು ಒಂದು ಸಾಮಾನ್ಯ ಪಂಚೆಯನ್ನು ಉಟ್ಟು ಕೊಂಡು, ಒಂದು ಚೆಕ್ಕು ಕೋಟನ್ನೂ, ಸರಿಗೆಯಿಲ್ಲದ ರುಮಾಲನ್ನೂ ಹಾಕಿಕ...

ಕನಸು ದಿಟವಾಯಿತು ಸೂರ್ಯೋದಯವಾಯಿತು. ನಿತ್ಯ ಕರ್ಮಗಳನ್ನು ಮುಗಿಸಿಕೊಂಡು ಕಾಫಿ ಸೇವನೆಯನ್ನು ಮಾಡುತ್ತಾ ರಂಗಣ್ಣನು ಹೆಂಡತಿಗೆ ಕನಸಿನ ಸಮಾಚಾರವನ್ನು ತಿಳಿಸಿದನು. ಆಕೆ- ಸರಿ, ಇನ್ನು ಈ ಹುಚ್ಚೊಂದು ನಿಮಗೆ ಹತ್ತಿತೆ ? ಸಾಕು, ಕಾಫಿ ಕುಡಿದು ಬಿಟ್ಟು...

ತಿಮ್ಮರಯಪ್ಪನ ಕಥೆ ರಂಗಣ್ಣ ಎರಡು ತಿಂಗಳು ಕಾಲ ರಜ ತೆಗೆದು ಕೊಂಡು ಬೆಂಗಳೂರಿಗೆ ಬಂದು ವಾಸಮಾಡುತ್ತಿದ್ದನು. ಶಿವಮೊಗ್ಗದಲ್ಲಿ ಪಿತ್ತವೇರಿಸುವ ತುಂಗಾಪಾನವನ್ನು ನಿತ್ಯವೂ ಮಾಡಿ, ಕಿವಿ ಮೂಗು ಬಾಯಿಗಳಿಗೆಲ್ಲ ಮುಸುರುವ ಸೊಳ್ಳೆಗಳ ಗಾನವನ್ನು ಹಗಲಿರಳೂ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...