Home / Lakshminarayana Bhatta

Browsing Tag: Lakshminarayana Bhatta

ಎಷ್ಟೋ ಸಂಕ್ರಾಂತಿಗಳ ಬಣ್ಣದ ಕಮಾನುಗಳ ಹಾದು ಬಂದಿದ್ದೇನೆ ಬಡಿದು ರೆಕ್ಕೆ ಸುಟ್ಟೂ ಸಂದಿದ್ದೇನೆ ಪ್ರಸ್ತುತಕ್ಕೆ ಬಂಡೆಗಳ ಮೇಲೆ ಬಿದ್ದರು ಏನು ಸಂದಿಗಳ ಮಣ್ಣಲ್ಲಿ ಬೇರಿಳಿಸಿ ಎದ್ದ ಬೀಜ ಹೋರಾಟಗಳ ಕಥೆಯ ನುಡಿವ ಗಾಯ ಸಹಸ್ರ ಮಾಗಿ ಮಲಗಿರುವ೦ಥ ಚಿತ್ತ ...

ಹಳಿಯಬೇಡ ಕಾಮವನ್ನು ಹಾಗೆ ಹೀಗೆಂದು ಹಳಿಯುವಂತೆ ಹೆತ್ತ ತಾಯನ್ನೇ ಹೋಗು ಹೋಗೆಂದು. ನಿನ್ನನ್ನು ಕರೆಸಿದ್ದು ಗರ್ಭಕ್ಕೆ ಇರಿಸಿದ್ದು, ಹೊರಬಂದಮೇಲೂ ಮೈ ಸೇರಿ ಪರಿಪರಿ ಮೆರೆಸಿದ್ದು ಸುತ್ತಲ ಬದುಕಲ್ಲಿ ಸರಿಗಮ ಹರಿಸಿ ಬಾಳೆಲ್ಲ ಪಟ್ಟೆ ಪೀತಾಂಬರ ಎನಿಸಿ...

ಇರುಳ ಗೂಳಿಯು ಜಿಗಿದು ಉಗಿದ ಬೆಳಕಿನ ಚಿಂದಿ ಮುದುರಿ ಬಿದ್ದಿದೆ ಬುವಿಯ ತಿಪ್ಪೆಮೇಲೆ. ಮುರಿದ ಷರಟಿನ ಗುಂಡಿ ಬಿದಿಗೆ ಚ೦ದಿರ ದೂರ ಸಿಡಿದು ಬಿದ್ದಿದೆ ಮಬ್ಬು ತೇವದಲ್ಲಿ *****...

ಚೈತ್ರ ಎಷ್ಟು ಬಂದವೋ ಕದವ ಬಡಿದು ನಡೆದವೋ ಹಕ್ಕಿ ಕೊರಳು ಕರೆಗಂಟೆಯ ಒತ್ತಿ ಒತ್ತಿ ದಣಿದವೋ ತೆರೆಯ ಬರದ ಬಾಗಿಲೇ, ನೆಲ ಹಾಯದ ನೇಗಿಲೇ ಇದ್ದರಾಯ್ತೆ ಬದುಕು ಬರಿದೆ ? ನುಡಿಯಬೇಕು ಮದ್ದಲೆ ಇರುವುದೇಕೆ ಕೊರಡು ಹೀಗೆ ಹೊರಚೆಲ್ಲದೆ ಬೆಂಕಿ, ಕೂಡಿ ಕಳೆದು...

ಬಣ್ಣದ ಕೊಕ್ಕಿನ ಬಾನಾಡಿ ಹಕ್ಕಿಗೆ ಮಣಿಗಿಳಿಯುವ ತನಕ ಬಾಳೆ ಇಲ್ಲ; ಬಳ್ಳಿ ಗಿಡ ಮರ ಎಲ್ಲ ಬೀಜದಲೆ ಇದ್ದರೂ ನೆಲದೊಳಗೆ ಕೃಪೆಯಿರದೆ ಸುಳ್ಳೇ ಎಲ್ಲ. ಬಣ್ಣದ ಕೊಕ್ಕಿನ ಬಾನಾಡಿ ಹಕ್ಕಿಗೆ ಹಗಲಲ್ಲಿ ದಣಿವು ಆಲಸ್ಯ ಜೊಂಪು; ನಡುರಾತ್ರಿಯಲಿ ಚಿತ್ತ ಬೆತ್ತಲ...

ಮರೆಯಲ್ಲಿ ನಿಂತು ಮಣಿದಿಗಂತಗಳನ್ನು ಬರೆಯುವ ಸತ್ಯದ ತರಣಿಯೇ, ನನ್ನ ಹರಣದ ನಿಜಗೆಳೆಯ ಇನ್ನಾರು ? ನೀನೇ. ಈ ಮೊಗ್ಗು ಅರಳಿದ್ದು, ಹಂಬಲಕ್ಕೆ ಹೊರಳಿದ್ದು, ಮೆಚ್ಚಿದ ದುಂಬಿಯ ಹುಚ್ಚಿಗೆ ಕಾಯಿಬಿಟ್ಟು ಫಲಿಸಿದ್ದು ನಿನ್ನರಸಿ ಅಭಿನಯಿಸಿದ ಮಧುನೃತ್ಯದ ಒ...

ನನ್ನ ನೆನಪಿನ ಯಾತ್ರೆ ನಿನ್ನದರ ಥರವಲ್ಲ ಅದಕ್ಕಿಲ್ಲ ಸರಳಗತಿ ದಾರಿನೆರಳು ; ಮೊಸಳೆ ಹಲ್ಲಿನ ಕಲ್ಲುದಾರಿ, ಕನ್ನಡಿ ಚೂರು ಮಂಡೆ ಮೇಲೇ ಬಾಯಿಮಸೆವ ಬಿಸಿಲು. ಮಡಿದ ನಿನ್ನೆಗಳೆಲ್ಲ ಒಡೆದ ದೊನ್ನೆಗಳಲ್ಲಿ ಸುರಿದ ಮರುಧರೆಯ ಅಮೂಲ್ಯ ನೀರು ; ಕೊಲ್ಲಲೆಳಸು...

ಹೊಳೆಸಾಲಿನ ಮರಕ್ಕೆ ನಿಂತ ನೆಲವೇ ವರ ; ಇಳಿಸುತ್ತದೆ ಬೇರನ್ನು ಅಳಕ್ಕೆ, ಅಗಲಕ್ಕೆ ನೀರಿನ ಯೋಚನೆ ಎಲ್ಲಿದೆ ಅದಕ್ಕೆ ? ಹೊಳೆಸಾಲಿನ ಮರದ ತಲೆತುಂಬ ಫಳಫಳ ಎಲೆ, ಕೆಳಗೆ ನದಿಯುದ್ದ ಏರಿಳಿಯುವ ಜುಳು ಜುಳು ಅಲೆ. ನೀರಿನ ವಿಶಾಲ ಕನ್ನಡಿ ಹೊಳೆಯುತ್ತ ಬಿದ...

ದಾವಾನಲ ಧಾರಿಣಿ ಜಲ ಆಗಸ ಅನಿಲದಲಿ, ಮಾಯದ ಗಾಯದ ಮಣ್ಣಿನ ಕಾಯದ ಹಂಗಿನಲಿ, ಸಾರದ ಸೇರದ ಎಂದೂ ಆರದ ಘನತರಣಿ, ಇರುಳಾಳುವ ಮನದಾಳಕೆ ಸುರಿ ಕಿರಣವ ಕರುಣಿ. ಎದೆಯಾಳದಿ ಎವೆತೆರೆದಿವೆ ಗತಭವಗಳು ಹೊರಳಿ, ಎಂದಿನ ಸ್ಮರಣೆಯ ಅರಣಿಯೊ ಹೊಗೆಯಾಡಿದೆ ನರಳಿ, ಮೇಲ...

ಹತ್ತು ದಿನದಿಂದ ಊರಲ್ಲಿ ರಚ್ಚಿಟ್ಟು ರಾಚುತ್ತಿದೆ ಮಳೆ ಬಡಿದಂತೆ ನೆಲಕ್ಕೆ ಏಕಕಾಲಕ್ಕೆ ಸಹಸ್ರಮೊಳೆ! ಊರಿನ ಕೆನ್ನೆಗೆ ಪಟಪಟ ಬಾರಿಸಿ ರೇಗಿಸಿ ಛೇಡಿಸಿ ಕೂಗಿ ತರಿಸುತ್ತಿದೆ ಎಲ್ಲರ ಎದೆಯಲ್ಲೂ ದಿಗಿಲು ತಿಂಗಳ ಹಿಂದೆ ಮಾತೇ ಬರದೆ ಉಗ್ಗುತ್ತಿದ್ದ ಕಪ್...

1...3334353637...49

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...