
ಉಂಬವರೆಲ್ಲ ಒಂದೇ ಪರಿಯೇ ತಮ್ಮ ತಮ್ಮ ಬಾಯಿಚ್ಛೆಯಲ್ಲದೆ ಇಕ್ಕುವರಂದಕ್ಕೆ ಉಂಡಡೆ ತನಗೇ ಸಿಕ್ಕೆಂದೆ ಮಾರೇಶ್ವರಾ [ಸಿಕ್ಕೆಂದೆ-ತೊಡಕು ಎಂದೆ] ಮಾರೇಶ್ವರೊಡೆಯನ ವಚನ. ಎಲ್ಲರೂ ಒಂದೇ ಬಗೆಯಲ್ಲಿ ಉಣ್ಣುತ್ತಾರೇನು? ಇಲ್ಲ. ಅವರವರ ಬಾಯಿಯ ಇಚ್ಛೆ ಏನನ್ನು,...
ಇಬ್ಬರಿಗೊಂದಂಬ ತೊಡುವೆ ಗಡ ಕಾಮಾ ಅರಿದರಿದು ಬಿಲುಗಾರನಹೆಯೋ ಎಸೆದಿಬ್ಬರು ಒಂದನೀ ಹರು ಗಡ ಇದು ಹೊಸತು ಚೋದ್ಯವೀ ಸರಳ ಪರಿ ನೋಡಾ ಎನಗೆಯೂ ಉರಿಲಿಂಗದೇವಗೆಯೂ ತೊಟ್ಟೆಸು ನಾವಿಬ್ಬರೊಂದಾಗೆ ಬಿಲ್ಲಾಳಹೆ ಎಸೆಯಲೋ ಕಾಮ [ಚೋದ್ಯ-ಆಶ್ಚರ್ಯ, ಹರು – ತೆಗೆದು...
ಇನ್ನೇವೆನಿನ್ನೇವೆನಯ್ಯಾ ಎನ್ನ ಮನವೆಂಬ ಮರ್ಕಟನ ದಾಳಿ ಘನವಾಯಿತ್ತು ಎನ್ನ ನಿಂದಲ್ಲಿ ನಿಲಲೀಯದು ಕ್ಷಣದಲ್ಲಿ ಪಾತಾಳಕ್ಕೆ ಐದುತ್ತಿದೆ ಕ್ಷಣದಲ್ಲಿ ಆಕಾಶಕ್ಕೆ ಐದುತ್ತಿದೆ ಕ್ಷಣದಲ್ಲಿ ದಿಗ್ದೆಸೆಗೆ ಐದುತ್ತಿದೆ ಕೂಡಲಸಂಗಮದೇವಾ ಈ ಮನವೆಂಬ ಮರ್ಕಟನ ದಾ...
ಇನಿಯಂಗೆ ತವಕವಿಲ್ಲ ಎನಗೆ ಸೈರಣೆಯಿಲ್ಲ ಮನದಿಚ್ಛೆಯನರಿವ ಸಖಿಯರಿಲ್ಲ ಇನ್ನೇವೆನವ್ವಾ ಮನುಮಥವೈರಿಯ ಅನುಭಾವದಲ್ಲಿ ಎನ್ನ ಮನ ಸಿಲುಕಿ ಬಿಡದು ಇನ್ನೇನ ಮಾಡುವೆನೆಲೆ ಕರುಣವಿಲ್ಲದ ತಾಯೆ ದಿನ ವೃಥಾ ಹೋಯಿತ್ತಾಗಿ ಯೌವನ ಬೀಸರವಾಗದ ಮುನ್ನ ಪಿನಾಕಿಯ ನೆರಹ...
ಇದಿರೆನ್ನ ಹಳಿವವರು ಮತಿಯ ಬೆಳಗುವರು ಮನದ ಕಾಳಿಕೆಯ ಕಳೆವವರೆನ್ನ ನಂಟರು ದುರಾಚಾರದಲ್ಲಿ ನಡೆವವರು ಕನ್ನಡಿ ಎನಗೆ ಹೇಯೋಪಾದಿಯ ತೋರುವವರು ಇದು ಕಾರಣ ನಾನನ್ಯ ದೇಶಕ್ಕೆ ಹೋಗೆನು ಸಕಳೇಶ್ವರದೇವರ ತೋರುವರೊಳರು ಇಲ್ಲಿಯೆ [ಕಾಳಿಕೆ-ಕಲ್ಮಶ, ತೋರುವರೊಳರು...
ಆಳುತನದ ಮಾತನೇರಿಸಿ ನುಡಿದಡೆ ಆಗಳೆ ಕಟ್ಟಿದೆನು ಗಂಡುಗಚ್ಚೆಯ ತಿಗುರನೇರಿಸಿ ತಿಲಕವನಿಟ್ಟು ಕೈದುವ ಕೊಂಡು ಕಳನೇರಿದ ಬಳಿಕ ಕಟ್ಟಿದ ನಿರಿ ಸಡಿಲಿಸಿದಡೆ ಇನ್ನು ನಿಮ್ಮಾಣೆ ಕಾಣಾ ಚೆನ್ನಮಲ್ಲಿಕಾರ್ಜುನಾ [ತಿಗುರನೇರಿಸಿ-ಪರಿಮಳ ಲೇಪಿಸಿ, ಕೈದುವ-ಆಯುಧವ...
ಆಸೆಯೆಂಬ ಕೂಸನೆತ್ತಲು ರೋಷವೆಂಬ ತಾಯಿ ಮುಂದೆ ಬಂದಿಪ್ಪಳು ನೋಡಾ ಇಂತೆರಡಿಲ್ಲದೆ ಕೂಸನೆತ್ತಬಲ್ಲಡೆ ಆತನೆ ಲಿಂಗೈಕ್ಯನು ಗೊಹೇಶ್ವರ ಅಲ್ಲಮನ ವಚನ. ಮನಸ್ಸಿನಲ್ಲಿ ಹುಟ್ಟುವ ಆಸೆ ಮತ್ತು ರೋಷಗಳಿಗೆ ಇರುವುದು ತಾಯಿ ಮಕ್ಕಳ ಸಂಬಂಧ. ಒಂದನ್ನು ಬಿಟ್ಟು ಒಂ...
ಆವ ಕಾಯಕವಾದಡೂ ಸ್ವಕಾಯಕವ ಮಾಡಿ ಗುರು ಲಿಂಗ ಜಂಗಮದ ಮುಂದಿಟ್ಟು ಒಕ್ಕುದ ಹಾರೈಸಿ ಮಿಕ್ಕುದ ಕೈಕೊಂಡು ವ್ಯಾಧಿ ಬಂದಡೆ ನರಳು ಬೇನೆ ಬಂದಡೆ ಒರಲು ಜೀವ ಹೋದಡೆ ಸಾಯಿ ಇದಕ್ಕಾ ದೇವರ ಹಂಗೇಕೆ ಭಾಪು ಲದ್ದೆಯ ಸೋಮಾ [ಒಕ್ಕುದ-ಲದ್ದೆ-ಹುಲ್ಲಿನ ಹೊರೆ] ಲದ್ದ...
ಆರೂ ಇಲ್ಲವೆಂದು ಆಳಿಗೊಳಲುಬೇಡ ಕಂಡೆಯಾ ಏನ ಮಾಡಿದಡೂ ಆನಂಜುವಳಲ್ಲ ತರಗೆಲೆಯ ಮೆಲಿದು ಆನಿಹೆನು ಸರಿಯ ಮೇಲೊರಗಿ ಆನಿಹೆನು ಚೆನ್ನಮಲ್ಲಿಕಾರ್ಜುನಯ್ಯಾ ಕರ ಕೇಡನೊಡ್ಡಿದಡೆ ಒಡಲನು ಪ್ರಾಣವನು ನಿಮಗರ್ಪಿಸಿ ಶುದ್ಧಳಹೆನು [ಆರೂ-ಯಾರೂ, ಆಳಿಗೊಳಲುಬೇಡ-ದುಃ...
ಆರೇನೆಂದಡೂ ಓರಂತಿಪ್ಪುದೆ ಸಮತೆ ಆರು ಜರಿದವರೆನ್ನ ಮನದ ಕಾಳಿಕೆಯ ಕಳೆದರೆಂಬುದೆ ಸಮತೆ ಆರು ಸ್ತೌತ್ಯವ ಮಾಡಿಹರೆನ್ನ ಜನ್ಮಜನ್ಮದ ಹಗೆಗಳೆಂಬುದೆ ಸಮತೆ ಇಂತಿದು ಗುರುಕಾರುಣ್ಯ ಮನವಚನಕಾಯದಲ್ಲಿ ಅವಿತತವಿಲ್ಲದಿರ್ದಡೆ ಕಪಿಲಸಿದ್ಧಮಲ್ಲಿಕಾರ್ಜುನಾ ನಿನ್...















