Home / ಸಣ್ಣಕಥೆ

Browsing Tag: ಸಣ್ಣಕಥೆ

ಮಾರಯ್ಯನನ್ನು ಅವನ ಹಳ್ಳಿಯಲ್ಲಿ ಹಲವರು ಹಲವು ಹೆಸರುಗಳಿಂದ ಕರೆಯುತ್ತಿದ್ದರು. ಹಾಗಾಗಿ ಅವನ ನಿಜವಾದ ಪೂರ್ತಿ ಹೆಸರು ಮಾರಯ್ಯನೆಂಬುವುದು ಸಮಯ ಬಂದಾಗ ಅವನಿಗೆ ಒತ್ತಿ ಹೇಳಬೇಕಾಗಿ ಬರುತ್ತಿತ್ತು. ಅಂತಹ ಸಂದರ್ಭಗಳು ಬರುತ್ತಿದ್ದದ್ದು ತೀರಾ ಅಪರೂಪ. ...

ಆಲೀ…….. ಏ ಆಲೀ…….. ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ ಮುಟ್ಟಿಸದಿದ್ದರೆ, ಚಕ್ಕರ್ ಉಸ್ಮಾ...

ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ ಗೆಳೆಯ ಬಸವರಾಜ್ ಬಿರಾದರ್‌ನ ಲಗ್ನಕ್ಕಾಗಿ ಕೆಂಭಾವಿಗೆ ಬಂದಿದ್ದ...

ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ ಟಾಮ್. ಪ್ರಾಜೆಕ್ಟ್ ಮೇಲೆ ಮೂರು ತಿಂಗಳು ಭಾರತಕ್ಕೆ...

ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ ಮಗಳಾದ ಲಲಿತಾ ಗೌರಿ...

ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ ಮಾತನಾಡಲು ಬರುತ್ತಿತ್ತು....

ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. “ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ ನಮ್ಮ ಬಡತನ ಹೋಗಿ ನಾವು ಸುಖವಾಗಿರಬಹು...

“ಒಳ್ಳೇದು, ಅವನನ್ನು ಒಳಗೆ ಬರಹೇಳು” ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ ಗುಮಾಸ್ತನು, ನಿಂತಲ್...

ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ ನನಗೆ ಗೊಂದಲ ಉಂಟಾಯಿತು. ಅವನು ನನ್ನನ್ನು ನೋಡಿದ ದೃಷ್ಟಿಯು ಈ ಸಂಶಯಕ್ಕೆ ಎ...

ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ ಜನ ಕಾರ್‍ಯಧುರಂಧರರು ಇಂಗ್ಲಿಶ್ ಸರಕಾರ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...