Home / ಸಣ್ಣ ಕತೆ

Browsing Tag: ಸಣ್ಣ ಕತೆ

ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು ಹೋಗುತ್ತಿದ್ದವು. ಕರಿಬಿಳಿ ಮಿಶ್ರಿತ ಆ ಜ...

ಹಿರಿಯರು-ಹೊನ್ನೂರುಗಳ ನಡುವೆ ಐದಾರು ಮೈಲು ಅ೦ತರ. ಒ೦ದು ಊರಿಂದ ಮತ್ತೊಂದು ಊರಿಗೆ ಹೋಗಬೇಕಾದರೆ ಚೆನ್ನಾಗಿ ನಡೆಯುವವನಿಗೂ ಎರಡು ತಾಸು ಹಿಡಿಯುತ್ತಿತ್ತು. ಯಾಕಂದರೆ ದಾರಿಯು ಎರಡು ಮೂರು ಮೊರಡಿಗಳನ್ನು ಸುತ್ತುವರಿದು ಏರಿ ಇಳಿದು ಹೋಗು ವಂತಹದು, ಕಲ...

ಡಾನ್ ಉರ್‍ಬಾನೋನ ಮಗ, ಡಿಮಾಸ್‌ನ ಮೊಮ್ಮಗ, ಚರ್‍ಚಿನಲ್ಲಿ ನಾಟಕಗಳನ್ನು ಹೇಳಿಕೊಡುತ್ತಿದ್ದನಲ್ಲ, ಇನ್‌ಫ್ಲೋಯೆಂಜಾ ಬಂದಾಗ ‘ಶಪಿತ ದೇವತೆ ನರಳುವಳು,’ ಅನ್ನುವ ಹಾಡು ಹೇಳುತ್ತಲೇ ತೀರಿಕೊಂಡ ಉರ್‍ಬಾನೋ ಗೋಮೆಝ್‍ನನ್ನು ನೆನೆಯಬೇಕು. ಬಹಳ ಕಾಲ, ಹದಿನೈ...

ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್ ಹೋಗಬೇಕು, ನಾಳಿಗೆ ಹೋಗಬೇಕು ಹೇಳಿ ಯೆಷ್ಟೋ ದಿವಸ ಕಳದ ಹೋಯ್ತು....

ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ ಸಮೀಪಕೇಯ್ ನಾಕ್ ಮಾರ್ ಹೆರ್‍ಗೆ ಹಳ್ಳದೆ. ಅಲ್ಲಿ ವಂದ್ ಹೊಂಡ ಮ...

ಉಡುಪಿಯ ಅನಂತೇಶ್ವರ ದೇವಸ್ಥಾನದ ಪೌಳಿಯಲ್ಲಿ ಜನರದೊಂದು ಗುಂಪು. ಗಂಡಸು ಹೆಂಗಸರೆಂದು ಸುಮಾರು ಐವತ್ತು ಮಂದಿ ಗಂಟುಮೂಟೆಗಳನ್ನು ಕಟ್ಟಿ ಕೊಂಡು ಕುಳಿತಿರುವರು. ಅವರ ಬಳಿಯಲ್ಲಿ ಅವರ ಬಂಧುಬಾಂಧವರಿಷ್ಟಮಿತ್ರರ ವರ್ಗಕ್ಕೆ ಸೇರಿದವರನೇಕರು ಕುಳಿತು ಮಾತಾ...

ಕರ್ನಾಟಕದಲ್ಲಿ ನಮ್ಮ ಮನೆತನವು ಪ್ರತಿಷ್ಠಿತವಾದದ್ದು. ವರ್ಷಾ ನಮಗೆ ಇನಾಮು ಭೂಮಿಗಳಿಂದ ಎರಡು- ಮೂರು ಸಾವಿರ ರೂಪಾಯಿಗಳ ಉತ್ಪನ್ನ. ನಮ್ಮ ತಂದೆಯವರಾದ ರಾವಬಹಾದ್ದೂರ ಅನಂತರಾಯರು ಡೆಪುಟಿ ಕಲೆಕ್ಟರರಾಗಿ ಪೆನ್ಶನ್ನ ತೆಗೆದುಕೊಂಡಿದ್ದರಿಂದ ನಮ್ಮಲ್ಲಿ ...

ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್ ಬರೀ ಊಟದ ಬಿಲ್ ಕೊಡಲಾರದೇ ಓದುವುದು ಒಜ್ಜೆಯಾಗ...

ಇದು ಬಹಳ ವರ್ಷಗಳ ಹಿಂದಿನ ಕತೆ, ಒಂದೂರಿನಲ್ಲಿ ಒಬ್ಬ ಕೊಡಗನೂ ಒಬ್ಬ ಕೊಡಗಿತಿಯೂ ಇದ್ದರು. ಅವರಿಗೆ ಒಬ್ಬ ಮಗಳಿದ್ದಳು. ಅವಳ ಹೆಸರು ಪೊನ್ನಮ್ಮ. ಪೊನ್ನಮ್ಮ ಬಹಳ ಚೆಂದದ ಹುಡುಗಿ ಅವಳ ತಾಯಿಯು ಮನೆಗೆಲಸ ಮಾಡುವಾಗ ಚಿಕ್ಕ ಪೊನ್ನಮ್ಮ ಅಂಗಳದಲ್ಲಿ ಆಟವಾಡ...

ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ ಹೇಳಬೇಕು. ದೂರ ಮಾಡಬೇಕು ಎಂದು ಎಷ್ಟು ತೀರ್‍ಮಾ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...