Home / Kannada

Browsing Tag: Kannada

ಬಿಳಿಹಳದಿ ತೆಳುವಾದ ಮಕಮಲ್ಲಿನುಡಿಗೆ ಜುಳುಜುಳು ಕಳಕಳದೊಯ್ಯಾರ ನಡಿಗೆ ಸವಿದೆರೆ ತಿಳಿನಗೆ ತೇಲುನೋಟ ಮುಗಿಲನೆಡೆಗೆ ನೋವರಿಯದೇಕಾಂತದಾನಂದ ತೀರದಲಿ ಸಂತೋಷಸಾಗರಲೀನ ಪ್ರಶಾಂತ ಕಾನನ ಸಾವಿರದ ಸೆಲೆಯುಕ್ಕಿ ಹೊಳೆಯಾಗಿ ಹರಿದಿದೆ ಹರೆಯ ನೆಲ-ಮುಗಿಲು ಮರ ತ...

ಯಾಕೆ ಹರಿಯುತಿದೆ ಈ ನದಿ ಹೀಗೆ ದಡಗಳನ್ನೆ ದೂಡಿ ತನ್ನನು ಕಾಯುವ ಎಲ್ಲೆಗಳನ್ನೇ ಇಲ್ಲದಂತೆ ಮಾಡಿ ಹೀಗೆ ಹಾಯುವುದೇ ಮಲ್ಲಿಗೆ ಕಂಪು ಗಡಿಗಳನ್ನು ಮೀರಿ ತನ್ನಿರುವನ್ನೇ ಬಯಲುಗೊಳಿಸುವುದೆ ಬನದ ಆಚೆ ಸಾರಿ ಯಾರು ನುಡಿಸುವರು ಎಲ್ಲೋ ದೂರದಿ ಮತ್ತೆ ಮತ್ತೆ...

ಗೆಸ್ ಮಾಡ್ದಂಗೆ ಆತ್ ನೋಡ್ರಿ. ಗೋಡ್ರನ ಎಗೆನೆಸ್ಟ್ ಮಾಡ್ಕೊಂಡೋರ ಆಯಸ್ಸಾರ ಲೆಸ್ ಆಯ್ತದೆ ಇಲ್ಲ ಪವರ್ರಾನ ಮಿಸ್ ಆಯ್ತದೆ. ಆಹಿಂದ ಸಮಾವೇಸ ಮಾಡಿ ಬೀಗ್ತಿದ್ದ ಸಿದ್ರಾಮುದೀಗ ತ್ರಿಸಂಕು ಸ್ಥಿತಿ. ಆವಯ್ಯ ಕುಂಟಿಕ್ಯಂಡು ಓಡಾಡಾದು ನೋಡಿದ್ರಂತೂ ಕಳ್ಳು ...

ಮೋಡಿಕಾರ ಮುತ್ತಯ್ಯನ ಚೀಲದಿ ಅಯ್ದೆಂದರೆ ಅಯ್ದೇ ಒಡವೆಗಳು ಹುಲ್ಲು ಕಡ್ಡಿಗಳ ಕಟ್ಟೊಂದಿಹುದು ಇನಿತರಿಂದಲೆ ಬೆರಗಿನಾಟವನು ಹೂಡಿಹನು ವಿಧ ವಿಧದ ರೀತಿಯಲಿ ಅಯ್ದೊಡವೆಗಳ ಬೆರಸಿ ಚಿನ್ನವನು ಮಾಡಿಹನು ಮಣ್ಣುಗಳ ಮಾಡಿಹನು ರತ್ನ ವಜ್ರಾದಿಗಳ ತಾಮ್ರ ತವರಿದ...

ಅಂಬಾರ್ದಲಾವಿಗೆ ಶಾಂಭವಿ                 ||ಪ|| ಶುಂಭ-ನಿಶುಂಭರ ಸಂಹಾರ ಮಾಡಿದ ತುಂಬಿದ ಶಾರ ಮದೀನದೊಳಗ            ||ಅ.ಪ.|| ಕಾತೂನ ರೂಢಿಯೊಳು ಬೆಳೆದಳು ಪ್ರೀತಿಲಿಂದ ಭೂತಲಕೆ ಇಳಿದು ಜಗನ್ಮಾತೆ ಮೋರುಮ ಹಬ್ಬದೊಳಗೆ           ||೧|| ಆಸುರ...

ಒಂದೂರಿನಲ್ಲಿ ಒಬ್ಬ ಗೃಹಿಣಿಯಿದ್ದಳು. ಆಕೆಗೆ ಒಂದು ಕಥೆ ಗೊತ್ತಿತ್ತು.  ಒಂದು ಹಾಡು ಬರುತ್ತಿತ್ತು. ಆದರೆ ಅವಳು ತನಗೆ ಗೊತ್ತಿದ್ದ ಕಥೆಯನ್ನು ಯಾರಮುಂದೆಯೂ ಹೇಳಿದವಳಲ್ಲ. ತಾನು ಕಲಿತ ಹಾಡನ್ನು ಯಾರಮುಂದೆಯೂ ಹಾಡಿದವಳಲ್ಲ. ಆಕೆಯ ಮನಸ್ಸಿನಲ್ಲಿ ಸೆ...

ಆತನೊಬ್ಬ ಜಟ್ಟಿ. ಹಿಂದಿನ ರಾತ್ರಿ ಬೇಯಿಸಿದ ೯೯ ಕೋಳಿಮೊಟ್ಟೆ ತಿಂದು ಬಂದಿದ್ದ. ತನ್ನ ಮಿತ್ರನ ಕೈಲಿ ಜಂಬ ಕೊಚ್ಚಿಕೊಂಡ. ಗೆಳೆಯ ಕೇಳಿದು “ಇನ್ನೋದು ತಿಂದು ಸೆಂಚುರಿ ಬಾರಿಸಬಹುದಿತ್ತು. ಅಲ್ಲವಾ? “ಜಟ್ಟಿ” – ನೀನು ಹೇ...

ಹೊಸ ವರ್ಷ ಬಂದಂತೆ ಯಾರು ಬಂದಾರು ಗಿಡಮರಕೆ ಹೊಸವಸ್ತ್ರ ಯಾರು ತಂದಾರು ಹಾಡೆಂದು ಕೋಗಿಲೆಯ ಕೂಗಿ ಕರೆದಾರು ಮಾವಿನಾ ಚಿಗುರನ್ನು ತಿನಲು ಕೊಟ್ಟಾರು. ಏನೋ ನಿರೀಕ್ಷೆ ಸೃಷ್ಟಿಯಲ್ಲೆಲ್ಲ ಹೂಗಳ ಪರೀಕ್ಷೆ ದುಂಬಿಗಳಿಗೆಲ್ಲ ಬಂದನೊ ವಸಂತ ಬಂದಿಗಳೆ ಎಲ್ಲ ಹ...

ಹನಮಂತ ಹಾರಿದಾ ಲಂಕಾ ಸುಟ್ಟುಬಿಟ್ಟಾನೋ ಬಿಡು ನಿನ ಬಿಂಕಾ ||ಪ|| ರಾಮ ರಘುಪತಿ ಭಕ್ತಾ ಒಂದು ನಿಮಿಷದೂಳಗ ತಂದುಕೊಟ್ಟನೋ ಸೀತಾ ಹೌದೌದು ರಾಮರವದೂತಾ ||೧|| ರಾಮ-ಲಕ್ಷ್ಮರ ಮಾತು ಮಾರುತಿಗೆ ಹೇಳಿದ್ದು ಗೊತ್ತಿಲ್ಲದಾಯ್ತು ಉಂಗುರ ಕೊಟ್ಟಿದ್ದು ಗೊತ್ತು...

ಲಲಿತೆ ಬಾಲವಿದವೆ. ಮದುವೆಯಾದ ಮೂರು ತಿಂಗಳಿಗೆ ಗಂಡ ಸಿಡುಬಿನಲ್ಲಿ ಸತ್ತ. ಲಲಿತೆ ಕುಂಕುಮವಳಿಸಿದಳು. ಒಂದೆರಡು ತಿಂಗಳ ನಂತರ ಕಣ್ಣೀರನ್ನೊರೆಸಿ ಮುಖ ತೊಳೆದುಕೊಂಡು ತನ್ನ ವಿದ್ಯಾಭ್ಯಾಸವನ್ನು ಮುಂದುವರಿಸಿದಳು. ಅವಳು ಆಗ ತಾನೇ ಇಂಟಿರ್‌ ಮೀಡಿಯಟ್‌ ಪಾಸುಮಾಡಿದ್ದಳು. ಎಂ. ಬಿ. ಬಿ. ಎಸ್...

ತೆಂಕಣದಿ ಹದಿನಾರು ಮೈಲಿಗಳಾಚಿ ಬಾಂದಳಕೆ ಭುಜಗೊಟ್ಟು ನಿಂತಿರುವ ಸಿಂಹಗಡವೇ-ಇದೋ ನಿನಗೆ ತಲೆಬಾಗುವೆನು. ಶತಮಾನಗಳ ಹಿಂದೆ, ನರಜಾತಿಯಲಿ ಹರಿಯಂತೆ ಮೆರೆದ ವೀರಲೀಲಾಲೋಲ ಶಿವಪ್ರಭುವನು ಶಿರದಲಿ ಹೊತ್ತು ಮೆರೆಯಿಸಿದ ಸಿಂಹಗಡವೇ ಇದೋ-ನಿನಗೆ ವಂದಿಸುವೆನು. ಅಂದು ನಮ್ಮ ನಾಡಿನ ಧರ್‍ಮ-ನಮ್ಮ ಹ...

(ದುಡ್ಡೇ ಧರ್ಮ, ದುಡ್ಡೇ ನೀತಿ, ದುಡ್ಡೇ ನ್ಯಾಯ, ದುಡ್ಡೇ ದೊಡ್ಡಪ್ಪ. ದುಡ್ಡಿಗಾಗಿ ಯಾವ ಹೇಸಿಕೆಲಕಕ್ಕೂ ಹಿಂಜರಿಯದ ಕೆಲವು ಸ್ವಾರ್ಥಿಗಳು ಇರುತ್ತಾರೆ. ಸ್ವಾರ್ಥ ಸಾಧನೆಗಾಗಿ, ದುರಾಶೆಯನ್ನು ಈಡೇರಿಸಿಕೊಳ್ಳುವದಕ್ಕಾಗಿ, ಹೊತ್ತು ಸಾಧಿಸಿ ಕತ್ತೆಯ ಕಾಲನ್ನು ಕೂಡ ಹಿಡಿದು ಕೊಳ್ಳಲು ಅವರು...

ಕತ್ತಲ್ಗಡಲ ತಳದಲಿತ್ತು ಲೋಕ. ಕೋಟಿ ತಾರೆಗಳಿಂದ ಕಿಕ್ಕಿರಿದ ಗಗನತಲ, ನಿಶಾಸುಂದರಿಯ ವಜ್ರಖಚಿತ ನೀಲಾಂಬರದ, ಹರಡಿದ ಸೆರಗಿನಂತೆ ಶೋಭಿಸಿತ್ತು. ನೀರವ! ನಿಶ್ಚಲ! ಅನಿಲನು ಕೂಡ ದಿನವೆಲ್ಲ ಅಲೆದಲೆದು, ಸೊಕ್ಕಿ ಮೆರೆದು ಸೊರಗಿ ಸೋತು ಸುಮ್ಮನಿದ್ದ. ಒಂದು ಮನೆ. ಅದರ ಹೆಸರು “ಮಾಯಾಲಯ...

ಅವನ ಈಗಿನ ಸ್ಥಿತಿಗೆ ಭಗವದ್ಗೀತಾ, ಉಪನಿಷತ್ತುಗಳು, ಪುರಾಣ, ವೇದಗಳು, ಕುರಾನ್, ಬೈಬಲ್‌ಗಳೇ ಬಹು ಮಟ್ಟಿಗೆ ಕಾರಣವೆಂದು ಹೇಳಬಹುದು. ಅವನ್ಯಾವ ಗ್ರಂಥಗಳನ್ನೂ ಓದಿದವನಲ್ಲ. ಯಾವ ಧರ್ಮಕ್ಕೂ ಗಟ್ಟಿಯಾಗಿ ಅಂಟಿಕೊಂಡು ಬದುಕುವವನಲ್ಲ. ದೇವರಿದ್ದಾನೋ ಇಲ್ಲವೋ ಎಂಬುವುದವನಿಗೆ ಗೊತ್ತಿಲ್ಲ. ಹು...

ಮಧ್ಯಾಹ್ನ ಸೂರ್ಯನು ಆಕಾಶವೃಕ್ಷವನ್ನು ಏರಿದ್ದನು. ಅವನ ಉಷ್ಣವಾದ ಕಿರಣಗಳು ದೇವಗಿರಿಯ ರಾಜಮಾರ್ಗಗಳನ್ನು ತಪ್ತಮಾಡುತ್ತಲಿದ್ದುವು. ಅತ್ತಿತ್ತ ಮೇಯುತ್ತಿದ್ದ ಗೋವುಗಳು ವೃಕ್ಷಛಾಯೆಯನ್ನು ಆಶ್ರಯಿಸಿ, ವಿಶ್ರಾಂತಿಯಿಂದ ಮೆಲುಕಾಡುತ್ತಿದ್ದುವು; ಆಗಾಗ ಬಾಲಗಳನ್ನು ಬೀಸುತ್ತ, ಬೆನ್ನಮೇಲಿನ ...