Home / ಸಣ್ಣಕಥೆ

Browsing Tag: ಸಣ್ಣಕಥೆ

ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ – ಮನ ಒಮ್ಮೆ ಪುಲಕಿತವಾಯಿತು. ಯಾವಾಗಲೂ ಹೀಗೆ ಆಗದ ಮನ ಇವತ್ತೇಕೆ ಹೀಗೆ ಸ್ಥಿಮಿತ ಕಳಕೊಳ್...

ಮಕರ ಸಂಕ್ರಮಣದ ಮಹೋತ್ಸವದ ದಿವಸವದು, ಸೂರ್ಯನಾರಾಯಣನು ಉತ್ತರಾಯಣನಾಗಿ ಸೃಷ್ಟಿಶೋಭೆಯೆಂಬ ಮಹಾಪ್ರದರ್ಶನ ಸಮಾರಂಭವನ್ನು ಜಗತ್ತಿಗೆ ತೋರಿಸುವನಾದನು. ಈ ಅದ್ವಿತೀಯವಾದ ಪ್ರದರ್ಶನವನ್ನು ನೋಡಲಪೇಕ್ಷಿಸುವವರು ಪರಮ ರಮಣೀಯವಾದ ಬೆಂಗಳೂರು ಪಟ್ಟಣಕ್ಕೆ ಬಂದ...

ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು ತೋರಿಸಿದವು! ಸುಧಾ ಕಸಪೊರಕೆಯಿಂದ ಕಸ ಗೂಡಿಸುತ್ತಿದ್ದಳ...

ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ ಹಸಿರಾದ ಎಲೆ ಚಿಗುರು; ಒತ್ತು ಒತ್ತಾಗಿ ಬೆಳೆದ ಗಿಡಗಳಲ್ಲಿ ಬಣ್ಣ ಬಣ್ಣದ ಹೂವುಗಳು...

ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ ಮೇಲೆತ್ತಿ ಆ ಊರಿನ ಮೇಲೆ ಕಣ್ಣಾಡಿಸಿದ, ಅವನಿಗೆ ಆಶ್ಚರ್ಯ ಕಾದಿತ್ತು. ಇದು ನನ್ನ...

ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ ಕೆಳಗೆ ಗೃಹಪ್ರವೇಶ ಮಾಡಿ ಗೌರಮ್ಮ ಶಿವಪ್ಪನವರು ತಮ್ಮ ಭಾವಮೈದುನ ಬ...

ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು. ಹತ್ತಿ ಬಿಡಿಸಿ ಮನೆಯಕೋಣೆ ತುಂಬಿದೆ. ಇನ್ನೊಂದು ವಾರದಲ್ಲಿ ಬಟಾರಗಳಲ್ಲಿ ತು...

ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ ಬಂದು ಈಗ ಅವರ ಮನವೆಂಬ ಮನದಲ್ಲಿ ವಾಸಮಾಡಿತ್ತ...

ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ ಭುಜದ ಮೇಲೆ ಸದಾ ಸಂತಸದಿಂದ ಹರಟುತ...

ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ. ಏನಪ್ಪಾ, ಇವತ್ತು ಬೆಳಿಗ್ಗೇನೇ ಏನು ಗ್ರಹಚಾರ ಕಾದಿದೆಯೋ ಎಂದು ಮನದಲ್...

1...45678...13

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...