Home / Simpi Linganna

Browsing Tag: Simpi Linganna

ಕುರುಬ ಬೀರನು ಕುರಿ ಕಾಯುತ್ತ ಒಂದು ಹಳ್ಳದ ದಂಡೆಗೆ ಬಂದನು. ಅಲ್ಲಿಯ ನೀರು ನೆರಳು ನೋಡಿ, ಕುರುಬನು ತನ್ನ ಕುರಿಗಳಿಗೆ ದಡ್ಡಿಹಾಕಲು ತಕ್ಕ ಸ್ಥಳವೆಂದು ಬಗೆದನು. ಅದರಂತೆ ದಡ್ಡಿಹಾಕಲು ತೊಡಗಿದನು. ಅಷ್ಟರಲ್ಲಿ ಅತ್ತಕಡೆಯಿಂದ ಶಿವಪಾರ್ವತಿ ಬಂದರು. &...

ನಾಲ್ವರು ಅಣ್ಣತಮ್ಮಂದಿರಿದ್ದರು. ಅವರದು ಸಾಹುಕಾರ ಮನೆತನ. ಸಾಲಿ ಓದಿದ್ದರು. “ಈಸು ದಿನ ನಾವು ಸಲುಹಿದೆವು. ಇನ್ನು ತಮ್ಮ ಹಾದಿ ತಾವು ಹಿಡೀಲಿ” ಎಂದು ತಾಯ್ತಂದೆಗಳು ನಾಲ್ಕೂ ಮಕ್ಕಳಿಗೆ ನಾಲ್ಕು ಸಾವಿರ ರೂಪಾಯಿ ಮತ್ತು ನಾಲ್ಕು ಕುದು...

ಎಲೆಲ್ಲೆಲ್ಲಿ ನೋಡಿದರೂ ಎಲ್ಲಾರೂ ಕಾಣಿಸ್ತಾರೆ, ನಾನೇ ಮಾತ್ರ ಕಾಣ್ಸೋದಿಲ್ಲ| ನಾನಿದ್ದದ್ದೇ ಸುಳ್ಳೋ? ಹೇಳಾಕಿಲ್ಲ. ಇದ್ದೇನೆಂದ್ರೂ-ಇದ್ದಾಂಗಿಲ್ಲ| ಏಸು ವರ್ಷ ಕಳೆದ್ರೂ ಬೆಳದ್ಹಾಂಗಿಲ್ಲ | ಬುದ್ಧಿಯಂತೂ ಬರಲೇ ಇಲ್ಲ| ಹೋಗಿದ್ರೇ ಬರಬೇಕಲ್ಲ| ಹೋದ ಬ...

ಒಂದೂರಲ್ಲಿ ಕಲ್ಲಣ್ಣ ಮಲ್ಲಣ್ಣ ಎಂಬ ಇಬ್ಬರು ಗರಡಿಯಾಳುಗಳು, ಸಮ ವಯಸ್ಕರು, ಸಮಾನಶೀಲರು ಆಗಿದ್ದರು. ಅವರ ಸ್ನೇಹವೇ ಸ್ನೇಹ, ಹಾಲು ಸಕ್ಕರೆ ಬೆರೆತಂತೆ. ದಿನಾಲು ಗರಡಿ ಮನೆಯಲ್ಲಿ ಕೊಡಿಯೇ ಸಾಮು – ಬೈಠಕುಗಳಲ್ಲದೆ ಲೋಡು ತಿರುಹುವುದು, ಮಲ್ಲಕಂ...

ಎಡಗೈಯಲ್ಲಿ ಸಿಂಬೆ, ಬಲಗೈಯಲ್ಲಿ ಕೊಡ ಹಿಡಕೊಂಡು ಸಂಗವ್ವನು ನೀರು ತರಲು ಹೊಳೆಗೆ ಹೊರಟಿದ್ದಾಳೆ. ಆ ದಾರಿಯು ಅರಮನೆಯ ಮುಂದೆ ಹಾದು ಹೋಗುವದು. ಕಿತ್ತೂರದೊರೆಯು ಅರಮನೆಯಲ್ಲಿ ಕುಳಿತಲ್ಲಿಂದಲೇ ಸಂಗಮ್ಮನನ್ನು ಕಂಡು ಎದ್ದು ಬಂದು ಕೇಳಿದನು – &#...

ಜೀವನದ ನೆನಹುಗಳ ಮನದಿ ಮೆಲುಕಾಡಿಸಲು ನೀನಿತ್ತ ವಚನಗಳ ನುಡಿಗೆಕುಲುಕಾಡಿಸಲು || ವಚನ ದೇಗುಲದಲ್ಲಿ ಕಂಗೊಳಿಸುತಿದೆ ಶಿಲ್ಪ ವಚನವೊಂದರಲಿ ಕಂಡುಬರುತಿದೆ ಕಲ್ಪ || ವಚನವೆಂದರೆ ಒಂದು ಗೊಂಚಲಿನ ಸವಿದ್ರಾಕ್ಷಿ ನುಡಿನುಡಿಗು ರಸದುಂಬಿ ಬೀಗಿನಿಂತಿದೆ ಸಾಕ...

ಮೋಡಿಕಾರ ಮುತ್ತಯ್ಯನ ಚೀಲದಿ ಅಯ್ದೆಂದರೆ ಅಯ್ದೇ ಒಡವೆಗಳು ಹುಲ್ಲು ಕಡ್ಡಿಗಳ ಕಟ್ಟೊಂದಿಹುದು ಇನಿತರಿಂದಲೆ ಬೆರಗಿನಾಟವನು ಹೂಡಿಹನು ವಿಧ ವಿಧದ ರೀತಿಯಲಿ ಅಯ್ದೊಡವೆಗಳ ಬೆರಸಿ ಚಿನ್ನವನು ಮಾಡಿಹನು ಮಣ್ಣುಗಳ ಮಾಡಿಹನು ರತ್ನ ವಜ್ರಾದಿಗಳ ತಾಮ್ರ ತವರಿದ...

ಒಂದೂರಿನಲ್ಲಿ ಒಬ್ಬ ಗೃಹಿಣಿಯಿದ್ದಳು. ಆಕೆಗೆ ಒಂದು ಕಥೆ ಗೊತ್ತಿತ್ತು.  ಒಂದು ಹಾಡು ಬರುತ್ತಿತ್ತು. ಆದರೆ ಅವಳು ತನಗೆ ಗೊತ್ತಿದ್ದ ಕಥೆಯನ್ನು ಯಾರಮುಂದೆಯೂ ಹೇಳಿದವಳಲ್ಲ. ತಾನು ಕಲಿತ ಹಾಡನ್ನು ಯಾರಮುಂದೆಯೂ ಹಾಡಿದವಳಲ್ಲ. ಆಕೆಯ ಮನಸ್ಸಿನಲ್ಲಿ ಸೆ...

ಮರದ ಕೊಂಬೆಗೆ ಒಂದು ತೊಟ್ಟಿಲವ ಕಟ್ಟಿಹುದು ತೊಟ್ಟಿಲಲಿ ಆಡುತಿದೆ ಕೈಕಾಲುಗಳ ಬಿಚ್ಚಿ ಈಗ ಕಣ್ದೆರೆದಿರುವ ಹೊಚ್ಚ ಹೊಸ ಎಳೆಯ ಕೂಸು || ಮರದ ಮೇಲ್ಬದಿಯಲ್ಲಿ ಮರಜೇನು ಹುಟ್ಟಿಹುದು ದೇವರಾಯನ ಕರುಣೆ ಯಿಂದ ಹುಟ್ಟಿಗೆ ಸಣ್ಣ ಹುಗಿಲು ಕೊರೆದಿಹುದಲ್ಲಿ ಹನ...

ಪಾಪಾತ್ಮ ರಾಜನ ರಾಜ್ಯದಲ್ಲಿ ಸಂಪತ್ತು ಬಹಳವಿತ್ತು. ಅದೆಲ್ಲ ಅರಮನೆ, ದಂಡು, ಪರಿವಾರ ಅವುಗಳಿಗೇ ಖರ್ಚಾಗಿ ಬಿಡುತ್ತಿತ್ತು. ಆದರೆ ರಾಜನಿಗೆ ಹಣವನ್ನು ಕೂಡಹಾಕಬೇಕೆಂಬ ಹವ್ಯಾಸ ಬಹಳ. ಅದಕ್ಕಾಗಿ ಅವನು ಹೆಂಡತಿ, ಮಕ್ಕಳು, ರಾಜ್ಯ ಬಿಟ್ಟುಕೊಟ್ಟು ಕೈಯಲ...

1...56789

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...