
“ತಿಣಕದಿರು ಸುಖದ ಸಂಪಾದನೆಗೆ -ಒಂದಿನಿಸು ನಗೆ, ಇನಿಸು ದುಃಖ ವಿಸ್ಮೃತಿ, ಇನಿಸು ಲೋಕಾನು- ಭವವು, ರಸಿಕತೆ ಇನಿಸು, ತಾಳ್ಮೆಯಿರೆ ಇನಿಸಾನು; ಹಲಸು ಕಾತಂತೆ ರಸಭಾವ ರೋಮಾಂಚಿತಸು. ಹಸು ಕರುವಿನೆಡೆಗೆ ಕೆಚ್ಚಲುದೊರೆದು ಬರುವಂತೆ, ಅಂಬೆಗರೆಯಲು...
ಬಾಗಿ ಬಾಗದ ಹಠದ ದಿಟದ ಸಾಧನೆಯ ಸಾ- ಹಸದಲ್ಲಿ, ಜೋಕೆ ತೂಕಗಳಿಂದ ವಿಷವ ಹಿಳಿ- ದೆಳೆದು, ಜೀವನದ ಸವಿ ಬೆರಿಸಿ, ರಸವನ್ನು ತೊರೆ- ಯಿಸಲೆಳಸಿ, ನಿನ್ನ ಜೀವನ ಚಂದ್ರಕಲೆ ಮಿತ್ರ- ತಾಪವನ್ನು ನುಂಗಿ ನಗೆಗೂಡಿ, ಬಡತನ ನೀಗಿ, ತಾಯಿ ನೆಲವನೆ ಸುತ್ತಿಯೊಳಗೊಂ...
ಮನದ ಬಯಲಲಿ ಬವಣೆಗೊಂಡೆ, ಬಿಸಿಲಿನ ಝಳದೆ ಹುಲ್ಲೆ ಹಂಗಿಸುವ ಹುಸಿನೀರ ಕಾಂಬೊಲು ಕಂಡೆ- ನೀರ, ನೇಹಿಗ, ನಂಟ, ಬಂಟ, ಸಂವಾದಿ, ಗುರು, ಶಿಷ್ಯ, ಪ್ರೀತಿಯ ಚಾತಿಗಾರ! ಎಲ್ಲಿರುವೆ ರಸ- ಸಿದ್ಧ ಗೋರಕ್ಷನುಕ್ಕಿಲೆ ಹೊಯ್ದರೂ ಮುಕ್ಕು ತುಕ್ಕರಿಯದಿದ್ದ ಮೈಕವಚ...
ರವಿ ಶಶಿಯ ಮತ್ತೆ ನೀನಿತ್ತ ಬೆಳಕಲಿ ಗುರುತಿ- ಸುವೆ, ಗುರುವೆ ! ಗುರು ಬುಧರ ಹಾಸಂಗಿಯಲ್ಲಿ ಲೆತ್ತ- ವಾಡುತಿರೆ ಹೊತ್ತು, ಚಿಕ್ಕೆಯ ಪಟ್ಟದಲ್ಲದರ ಲೆಕ್ಕವನು ಗುಣಿಸಿ ಎಣಿಸುವೆ, ಮಲೆಯ ಬನಬನವ ತರಿವ ಮೂಡಲಗಾಳಿ, ಹಸಿರು ಬಯಲಿಗೆ ತರುತ- ಲಿರುವ ಪಡುವಲ ...














