Home / ಅಲೆಮಾರಿ

Browsing Tag: ಅಲೆಮಾರಿ

ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ. ಏನಪ್ಪಾ, ಇವತ್ತು ಬೆಳಿಗ್ಗೇನೇ ಏನು ಗ್ರಹಚಾರ ಕಾದಿದೆಯೋ ಎಂದು ಮನದಲ್...

ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು ಇಲ್ಲಿ ನಿಲ...

“ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ ಕಸುಬುಗಾರಿಕೆಯನ್ನು ಪುನಃ ಶುರುಮಾಡಿದೆಯೋ, ನಿನ್ನ ಚರ್ಮ ಸುಲಿದು ಈ ಜೈಲಿನ...

“The best of you is he who behaves best towards the members of his family” (The Holy Prophet) ವಾರದ ಸಂತೆ. ಬೆಳಿಗ್ಗೆ ೯ ಗಂಟೆ ಅಗುವುದರೊಳಗೆ ಪೇಟೆ ಇಡೀ ಜನಜಂಗುಳಿಯಿಂದ ತುಂಬ ತೊಡಗಿತು. ಜನರ ನೂಕು ನುಗ್ಗಲಿನಿಂ...

ತೆಂಗಿನ ತೋಟದಲ್ಲಿ ಬಾಗಿಕೊಂಡು ಹಣ್ಣಾಗಿ ಉದುರಿದ ಅಡಕೆಗಳನ್ನು ಒಂದೊಂದಾಗಿ ಹೆಕ್ಕಿ, ಸನಿಹದಲ್ಲಿದ್ದ ಪ್ಲಾಸ್ಟಿಕ್ ಚೀಲಕ್ಕೆ ತುಂಬಿಸುತ್ತಿದ್ದಂತೆ ಪಕ್ಕದಲ್ಲಿ ಸರಕ್ಕನೆ ಹರಿದು ಹೋದ ಕೇರೆ ಹಾವಿನಿಂದಾಗಿ ಒಮ್ಮೆ ವಿಚಲಿತರಾದರು ಮುದಿ ದಂಪತಿಗಳು. &#...

ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ – ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ – ಗೆಳತಿಯರಾಗಿರೋಣ’. ಅವಳ ಮಾತು ಅವನಿಗೆ ಅರ್ಥವಾಯಿತೋ, ಅಲ್ಲ ಕೇಳುವ ವ್ಯವ...

ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ ಹತ್ತಿರದ ಸಣ್ಣ ಮೈದಾನದ ಕಲ್ಲು ಬೆಂಚಿನ ಮೇಲೆ ಅವನು ಯಾವಾಗಲೂ ಸಂಜೆ ...

ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ ಸಹ ಉದ್ಯೋಗಿಗಳಿಂದ ...

ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ ಬದಿಯಲ್ಲಿದ್ದ ಬೂದಿರಾಶಿಯ ಪಕ್ಕದಿಂದ ಗರಗಸದ ಹುಡಿಯನ್ನು ಕ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...