Home / ಒಲವೇ ವಿಸ್ಮಯ

Browsing Tag: ಒಲವೇ ವಿಸ್ಮಯ

ಕಾರಾಗೃಹದ ಮೂಲೆಯಲ್ಲಿ ಕುಳಿತಿದ್ದ ಶಂಕರ್ ಪಾಂಡೆಗೆ ಮನದಲ್ಲಿ ಕತ್ತಲೆ ಆವರಿಸಿತ್ತು. ನೊಂದು ಬೆಂದು ಅವನ ಹೃದಯ ಬೇಸತ್ತಿತ್ತು. ವಿದ್ಯಾರ್‍ಜನೆಯಲ್ಲಿ ತೊಡಗಿ ಸ್ನಾತಕೋತ್ತರ ಪದವಿ ಪಡೆದಿದ್ದ ಪಾಂಡೆ ಇಂದು ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆಯನ್ನು ಅನ...

ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು ಹೋಗುತ್ತಿದ್ದವು. ಕರಿಬಿಳಿ ಮಿಶ್ರಿತ ಆ ಜ...

ಎರಡನೆಯ ಹೆರಿಗೆಯಲ್ಲಿ ಅಸು ನೀಗಿದ ಮಗಳು ಕಮಲಳನ್ನು ಕಳಕೊಂಡ ತೊಂಬತ್ತು ವರ್ಷದ ಜಯಮ್ಮನಿಗೆ ಸಹಿಸಲಾಗದ ಸಂಕಟವಾಗಿತ್ತು. ಹೆಣ್ಣು ಮಗುವಿಗೆ ಜನ್ಮವಿತ್ತು ತನ್ನ ಇಹದ ಯಾತ್ರೆಯನ್ನು ಮುಗಿಸಿ ಹೋದ ಮಗಳಿಗಾಗಿ ಅಳಬೇಕೋ ಇಲ್ಲ ಚಿಕ್ಕ ಹಸುಳೆಗಾಗಿ ಮರುಗಬೇಕ...

ಮುಂಗಾರು ಮಳೆಗಳು ಸರಿಯಾಗಿ ಬಾರದೇ ಭುವನೇಶ್ವರದ ಹಳ್ಳಿಯ ಜನರಲ್ಲಿ ಒಂದು ರೀತಿಯ ಕಳವಳವಾಗಿತ್ತು. ಮಳೆ ಬಂದರೆ ಬೆಳೆ, ಬೆಳೆ ಆದರೆ ಬಾಳು ಎಂದು ಬದುಕುತ್ತಿದ್ದ ಅವರಿಗೆ ಏನು ಮಾಡಬೇಕೆಂದು ತೋಚದೆ ಕೈ ಮೇಲೆ ತಲೆ ಹೊತ್ತು ಕುಳಿತಿದ್ದರು. ಕಡಲ ತೀರದ ಒರ...

ಹರಿಹರಯದ ಆ ಸಂದರ ಹುಡುಗಿ ದಿನವೂ ಅರಳೀ ಕಟ್ಟೆಗೆ ಬಂದು ಯಾರಿಗಾಗಿ ಕಾಯುತ್ತಾಳೆ? ಎಂದು ಯೋಚಿಸುವಾಗ ಅವಳ ಪ್ರಿಯತಮ ಬಂದು ಕುಳಿತ. ಅವನು ಅವಳ ತೊಡೆ ಏರಿದ ಕೈಸವರಿದ ಮತ್ತೆ ಭುಜವನ್ನು ಅಲುಗಾಡಿಸಿ ಕೆನ್ನೆ ಸವರಿದ. ಇದೆಲ್ಲಾ ಬಹಿರಂಗವಾಗಿ ಎಲ್ಲರೆದುರ...

ವಿಲಿಯಂ ಜೋನ್ಸ್ ಭಾರತದ ದೇವನಹಳ್ಳಿ ವಿಮಾನ ನಿಲ್ದಾಣದಲ್ಲಿ ಇಳಿದಾಗ, ಅವನ ಮನವನ್ನು ಕಾಡುತ್ತಿದ್ದ ಪ್ರೀತಿ ಅವನ ಹೆಂಡತಿ ಮಕ್ಕಳೊಂದಿಗೆ ಅವನನ್ನು ಅತಿಯಾಗಿ ಹಚ್ಚಿಕೊಂಡಿದ್ದ ಅವನ ಪ್ರೀತಿಯ ನಾಯಿ ಟಾಮ್. ಪ್ರಾಜೆಕ್ಟ್ ಮೇಲೆ ಮೂರು ತಿಂಗಳು ಭಾರತಕ್ಕೆ...

ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. “ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ ನಮ್ಮ ಬಡತನ ಹೋಗಿ ನಾವು ಸುಖವಾಗಿರಬಹು...

ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ “ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ” ಎಂದು. ಅಲಹಾಬಾದಿನ ವಿದುರ್‌ಕಾ ಹಳ್ಳಿಯ ಈ ಮಾಸ್ತರೆಂದರೆ ಮಕ್ಕಳ...

ಮನೆ ಮಗಳು “ಸೋನಿ” ಉಡಿ ತುಂಬುವ ಸಮಾರಂಭ. ಬೆಳಗಾವಿ ಜಿಲ್ಲೆಯ ಸದಲಗಾ ಪಟ್ಟಣದ ಪೀರ ಗೌಡಾ ಪಾಟೀಲ ಹಾಗೂ ಅವರ ತಮ್ಮ ಮಹದೇವ ಪಾಟೀಲರಿಗೆ ಎಲ್ಲಿಲ್ಲದ ಸಂಭ್ರಮವಾಯಿತು. ದಕ್ಷಿಣ ಕನ್ನಡದವರು ‘ಬಸುರಿ ಊಟ’, ಉತ್ತರ ಕರ್ನಾಟಕದವರ ‘ಉಡಿ ತುಂಬ...

ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ ಹಸಿರಾದ ಎಲೆ ಚಿಗುರು; ಒತ್ತು ಒತ್ತಾಗಿ ಬೆಳೆದ ಗಿಡಗಳಲ್ಲಿ ಬಣ್ಣ ಬಣ್ಣದ ಹೂವುಗಳು...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...