Home / ಚಿತ್ರಕೂಟ

Browsing Tag: ಚಿತ್ರಕೂಟ

ಬೆಟ್ಟದ ನೆತ್ತಿಗೆ ಕಿರೀಟವಿಟ್ಟ ಬಿಸಿಲು ಕಪ್ಪಗೆ ದೂರದಲ್ಲಿ ನೆಲಕ್ಕೆ ಜಾರಿದ ಮುಗಿಲು ಮತ್ತೆ ಮತ್ತೆ ಮೇಲೆ ಚಿಗಿವ ಆಲದ ಬಿಳಲು ಹೊಳೆಸುತ್ತವೆ ಹಠಾತ್ತನೆ ನಿನ್ನ ಮುಖ ಕೈಕಾಲು ಹೊಳೆದ ಗಳಿಗೆ ಮೈಯುದ್ದ ಬೆಳೆದು ನೀ ಪರವಶ ನಾನು ಗಳಿಗೆಯಲ್ಲೆ ಸರಸರನೆ ...

ಉಗಿಯುತ್ತಿದೆ ಊರು ಓಡಿ ಮೋರಿಯಲ್ಲಿ ಮಲಗು ಅರಸುತ್ತಿದೆ ಕಲ್ಲು ದೊಣ್ಣೆ ಬಿಲಗಳಲ್ಲಿ ಅಡಗು ನಿಂತ ನೆಲವೆ ನುಂಗುತ್ತಿದೆ ಬೆಂತರ ಬೆನ್ನಟ್ಟುತ್ತಿದೆ ನಿರ್ಜನ ರಾತ್ರಿಗಳಲ್ಲಿ ಒಂಟಿ ಕೂತು ಕೊರಗು. ಮುಕ್ತ ಇವನು ಮಾನದಿಂದ ಸರಿತಪ್ಪಿನ ಜ್ಞಾನದಿಂದ ಉಂಡ ಮ...

ಒಳಬನ್ನಿ ಗೆಳೆಯರೆ ಇದು ಒಬ್ಬ ಕವೀಂದ್ರನ ಗೋರಿ ಹುಸಿದಿದ್ದರೆ ಕಸಿದಿದ್ದರೆ ಮಾತಿಗೆ ತಪ್ಪಿ ತಪಿಸಿದ್ದರೆ ಕಣ್ಣದೀಪ ಕಂಡವರ ಕಷ್ಟಕ್ಕೆ ಉರಿದು ಎಂದಾದರೂ ಎರಡು ಹನಿ ಬೆಳಕ ಬಸಿದಿದ್ದರೆ ರಾತ್ರಿ ರಾಮಾಯಣ ಹಗಲು ಭಾರತ ಬಾಳೆಲ್ಲ ರಗಳೆ ಹೂಡಿದ ಒಂದು ಬೃಹತ...

ದೀಪಗಳ ದಾರಿಯಲಿ ನಡುನಡುವೆ ನೆರಳು, ನೆರಳಿನಲಿ ಸರಿವಾಗ ಯಾವುದೋ ಬೆರಳು ಬೆನ್ನಿನಲ್ಲಿ ಹರಿದಂತೆ ಭಯಚಕಿತ ಜೀವ ತಣ್ಣನೆಯ ಒಡಲಲ್ಲಿ ಬೆದರಿರುವ ಭಾವ. ಆಸೆ ಕನಸುಗಳೆಲ್ಲ ತೀರಿದುವು ಕುಸಿದು, ಭಾಷೆಗೂ ಸಿಗದಂಥ ಭಯದ ಮೆಳೆ ಬೆಳೆದು, ಕಪ್ಪು ಮೋರೆಯ ಬೇಡ ಕ...

ಹುಡುಗನಾಗಿದ್ದ ದಿನಗಳ ನೆನಪು : ಆಗ ನಮ್ಮೂರ ಹೊಳೆ ತುಂಗೆ ಶಾಂತನಿರ್ಮಲ ಅಂತರಂಗೆ; ಹೊರಗಿನ ಬಿಸಿಲು ಒಳಗೆ ಬಿಂಬಿಸಿ ತಳದ ತನಕ ನದಿಯ ಮನಸ್ಸು ಸ್ವಚ್ಛ ಪ್ರತ್ಯಕ್ಷ ಸಂಪದ್ಯುಕ್ತ ಜಲದ ರೇಸಿಮೆಹಾಳೆ ಸೀಳಿ ಹಾಯುವ, ಹಾಗೆ ಹೀಗೆ ಹೇಗೋ ಹೊರಳಿ ಉರಿಯ ಚಿಮ್...

ಬೆಳಿಗ್ಗೆ ಪ್ರಗತಿಶೀಲರ ಸಭೆಯಲ್ಲಿ ಎಚ್ಚರಿಸಿದರು ಕವಿ : “ಬಾನು ಭೂಮಿ ಒಂದೆ ಸಮ, ಹಳ್ಳ ಕಡಲು ಒಂದೆ ಸಮ ಒಂದೆ ಸಮ ಒಂದೆ ಸಮ, ಕೊರಡು ಮರ ಒಂದೆ ಸಮ” ಗುಡುಗಿದರು ಕವಿ ಮಧ್ಯಾಹ್ನ ಮೈಸೂರಿನ ಕುಕ್ಕೂಟ ಸಭೆಯಲ್ಲಿ : “ವೈದಿಕ ಸಂಸ್ಕ...

ಎಲ್ಲ ಬಿಟ್ಟು ಇದು ಇಲ್ಲಿಗೆ ಬಂತೆ? ಅಕ್ಕಿ ತುಂಬ ಬರಿ ಕಲ್ಲಿನ ಸಂತೆ ಕಾಲ ಚಪ್ಪಲಿ ಕಿರೀಟವ ಜಾಗ ಬಯಸಿ ಕುರುಡುಬುದ್ದಿಗೆ ಕ್ರೌರ್‍ಯ ಪರಾಕು ಸಲ್ಲಿಸಿ ಹುದುಕಿಟ್ಟಿದೆ ನಿನ್ನ ಹಟ್ಟಿಗೊಂದು ಹೆಸರ ಎರಗುವ ಮಂಚೆ ಎರಚಲು ಮುಖಕ್ಕೆ ಕೆಸರ. ತಾಳಿಕೊ ಮರಿ ತ...

ದೀಪ ಹಚ್ಚಿ ಹೃದಯ ಬಿಚ್ಚಿ ದೈವದ ಪಾದಕ್ಕೆ ಹಣೆ ಹಣೆ ಚಚ್ಚಿ ಬೇಡಿದೆವು ಅಂದು : ಇವಗೊದಗಲಿ ಹಿರಿತನ ಮೇಲೇಳಲಿ ಮನೆತನ ಮೈ ತುಂಬಲಿ ಕ್ಷೀಣಿಸಿದ ಮನೆಭಾಗ್ಯ ಎಂದು. * * * ನೀ ಬಂದೆ ನಮ್ಮ ನಡುವೆ ನಿಂದೆ ಏನೇನೋ ನಿರೀಕ್ಷೆ ತಂದೆ. ನೀ ನಿಂತ ನೆಲ ಬೆಳೆ ಚ...

ಕಲ್ಲಿನಂತಿದ್ದ ಹಲ್ಲನ್ನು ಕಾಣದ ಕ್ರಿಮಿಗಳು ತಿಂದು ಬೆಳಕಿನ ದಳದಂಥ ಹಲ್ಲು ಹುಳಿತು ಕಪ್ಪಾಗಿ ಹೋಯಿತು. ಕಬ್ಬು ಸಿಗಿದ ಯಂತ್ರ ಕಡಲೆಪುರಿಗೆ ಬೆದರಿ ನಿಂತರೆ ನೋವು, ಕೂತರೆ ನೋವು ಮುಖ ಬಾತು ಮೂತಿ ಕುಂಬಳಕಾಯಾಯಿತು. ಕಂಡ ಸ್ನೇಹಿತರೆಲ್ಲ ಕಷ್ಟಪಟ್ಟು ...

ಅರೆ ನಿದ್ದ ಅರೆ ಅರಿವು, ಮಂಪರು ದಾರಿ ಹಿಡಿದು ತೆವಳಿ ಹೋದರೆ ಕೆಳಗೆ ಬೆದರಿಸುವ ಪಾತಾಳ; ತರ್ಕದ ಸೊಕ್ಕು ಮುರಿದು ಗಣಿತವನೆ ಮಣಿಸಿರುವ ಜನ ತಿಕ್ಕಲು ಕುಣಿತ; ಏನೇನೊ ನೋಡಿ ಏನೇನೊ ಹಾಡುವ ಕನಸ ಕೈಗಾರಿಕಾಶಾಲೆ; ಕಂಡದ್ದ ಕಲೆಸಿ ಕಾಣದ್ದ ಕಣ್ಣಿಗೆ ತೆರ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...