Home / ದೆವ್ವದ ಜೊತೆ ಮಾತುಕಥೆ

Browsing Tag: ದೆವ್ವದ ಜೊತೆ ಮಾತುಕಥೆ

ಯಾವ ಘೋಷ ಇದು ಇದಕ್ಕಿದ್ದಂತೆ ಈ ಕನಕಾಂಬರಿ ಸಂಜೆಯಲಿ ? ತೇಲಿ ಹಾಯುತಿದೆ ಪರಿಮಳದಂತೆ ತುಂಬಿ ಹರಿವ ಈ ಗಾಳಿಯಲಿ ತಾಳಮೃದಂಗದ ಬಡಿತ ಹಬ್ಬುತಿದೆ ಹೃದಯಕೆ ಲಗ್ಗೆಯ ಹೂಡುತಿದೆ ಮೋಹಕ ಗಾನದ ಕಂಠದೇರಿಳಿತ ಜೀವಕೆ ಮರುಳನು ಕವಿಸುತಿದೆ ಯಾವ ಅಲೌಕಿಕ ಶ್ರುತಿ...

ಕಿವಿ ಬಿರಿವ ಬೊಬ್ಬೆ, ಭೋರಿಡುವ ಜನಸಾಗರ. ಓವರಿಗೆ ಎರಡೆರಡು ಫೋರುಗಳ ಗುಡುಗು ನಡುವೆ ಸಿಕ್ಸರ್ ಸಿಡಿಲು, ಸೃಷ್ಟಿಯಾಗುತ್ತಿದೆ ಮಿಂಚಿನೋಟದ ಕವಿತೆ ಮೈದಾನದಲ್ಲೆ ಕಣ್ಣಿದಿರು! ಕಣ್ಣು ಹರಿದಲ್ಲೆಲ್ಲ ಬಾವುಟದ ಆವುಟ ಕುಣಿದು ಧೀಂಕಿಡುವ ಸಹಸ್ರಾರು ಭಕ್ತ...

ಇಂದ್ರಿಯಕ್ಕಿರುವುದೆಲ್ಲ ಅರ್ಧಸತ್ಯದ ಪ್ರಾಪ್ತಿ, ಪೂರ್ಣ ದಕ್ಕವುದಿಲ್ಲ ಪಂಚಭೂತಕ್ಕೆ; ಅರ್ಧಸತ್ಯದ ನೋಟ ಅಜ್ಞಾನಕ್ಕಿಂತ ಕೀಳು, ಪಾಲಾಗಿರುವ ಕಾಳು, ಬೆಳೆದು ಪಡೆಯುವ ಶಕ್ತಿ ಕಳೆದು ಹೋಗಿರುವ ಹೋಳು, ತೆರೆಸರಿಸಿ ದಾಟಿ ಒಳನುಗ್ಗಿ ಪಡೆಯುವುದಕ್ಕೆ ಸಾಧ...

ನಟ್ಟಿರುಳು ಚಳಿ ಮೌನ, ಸಣ್ಣಗೆ ಅಳುವ ದೀಪ ಕೋಣೆ ಮೂಲೆಯ ಕಡ್ಡಿಚಾಪೆ ಮೇಲೆ ನಿದ್ದೆಯಿಲ್ಲದೆ ಹಸಿದ ಹೊಟ್ಟೆಯಲ್ಲಿ ಹೊರಳುವ ತಾಯಿ ಕಪ್ಪಿಟ್ಟ ಮುಖ, ಸುಕ್ಕುಕೆನ್ನೆ, ನಿಟ್ಟುಸಿರು ಚಿಂತೆ ಮಡುನಿಂತಂತೆ ಕಣ್ಣು ಯೋಚಿಸುತ್ತಾಳೆ ತಾಯಿ ಯುದ್ಧಕ್ಕೆ ನಡೆದ ಮ...

ನಿನ್ನೆ ಹಾಕಿದ್ದೆ ಓಟು ಮತ್ತೆ ಬಂದಿರಿ ಇವತ್ತು! ಏನು ಆಟವೆ ಸ್ವಾಮಿ ? ಮುಂದೆ ಹೋಗಿ, ಬೇಡುವುದಕ್ಕೂ ಒಂದು ಹೊತ್ತು ಗೊತ್ತಿಲ್ಲವೆ? ನಗುತ್ತಿದ್ದಾರೆ ಎಲ್ಲ, ಮುಂದೆ ಹೋಗಿ. ಅಲ್ಲಿ ಕಾರ್ಗಿಲ್ಲಿನಲ್ಲಿ ಉತ್ತರದೆತ್ತರದಲ್ಲಿ ಯಜ್ಞ ನಡೆಯುತ್ತಿದೆ ಗೊತ್...

ಹನಿ ಹಾಕಲು ಹೊರಟ ಸಂಜಿ. ಮಳೆ ಬಿದ್ದೂ ಕುಣಿಯದ ನವಿಲು. ಅರ್ಧ ಆಕಾಶವನ್ನೆ ಮುಚ್ಚಿದೆ ಮುಗಿಲು. ಸಮೆದ ಬೆಣಚು ಕಲ್ಲಿನ ತುಂಡು ಚಿಕ್ಕಿ, ಬಾನಿನಲ್ಲಿಲ್ಲ ಒಂದೇ ಒಂದು ಹಕ್ಕಿ ಸ್ತಬ್ಧ ಗಿಡಮರ, ಥಂಡಿಗಾಳಿ, ನೇಸರನಿಲ್ಲದ ಸಭೆ ಬೇಸರವೋ ಬೇಸರ. ಏನು ಸಾಧಿಸ...

ಸೆಟೆದು ನಿಂತಿದ್ದಾನೆ ಹದಿನಾಲ್ಕು ಹರೆಯದ ಹುಡುಗ ಎರಗಲಿರುವ ಗರುಡ, ಬಾಣ ಖ್ಯಾತ ವಾತ್ಸ್ಯಾಯನರ ಋಷಿಕುಲದ ಹೆದೆಯೇರಿ ಜಿಗಿಯಲರ್ಹತೆಯಿದ್ದ ಜಾಣ. ಹೋಮಧೂಮದ ಗಾಳಿ ವೇದಘೋಷದ ಪಾಳಿ ಎಂದೂ ತಪ್ಪಿರದ ಮನೆ ಈಗ ಖಾಲಿ. ತಾಯಿ, ಎಳೆತನದಲ್ಲೇ ಗಾಳಿಗಾರಿದ ಬೆಳಕ...

ಇಲ್ಲಿ ದೂರದ ಪಶ್ಚಿಮಾರ್ಧದಲ್ಲಿ ಅಮೆರಿಕದ ಪಲ್ಲಂಗದಲ್ಲಿ ನಟ್ಟಿರುಳಲ್ಲಿ ಬಿಟ್ಟು ಬಂದದ್ದರ ಕನವರಿಕೆ, ಭಾರತದ ಬೆಳಕಲ್ಲಿ ಹೊಳೆದ ಬಾಲ್ಯದ ಬೆರಗು ಮಧುರ ಮರುಕಳಿಕೆ; “ಅನುಭವವು ಸವಿಯಲ್ಲ ಅದರ ನೆನಪೇ ಸವಿಯು ಅದ ಕದ್ದು ಮೇಯದೇ ಮನವು ?”...

ಎಲ್ಲೇ ಹೋಗಲಿ ನೀರು ಕೆಳಹರಿಯುವುದೇಕೆ? ಎಷ್ಟೇ ಒತ್ತಿದರು ಚಿಲುಮೆ ಮೇಲುಕ್ಕುವುದೇಕೆ ? ಮತ್ತೆ ಮತ್ತೆ ಕಡಿದರು ಮರ ಸಿಟ್ಟು ಸೆಡವು ಮಾಡದೆ ಎಂದಿನ ಹಾಗೇ ಮತ್ತೆ ಫಲ ನೀಡುವುದೇಕೆ ? ನೀರಿಗೆ ಸ್ವಧರ್ಮ ಮುಖ್ಯ ಹರಿಯುವುದೇ ಧ್ಯೇಯ, ಚಿಲುಮೆಗು ಮರಕ್ಕು ...

“ದೇವರೆಂದರೇನು ಅಜ್ಜ, ದೇವರೆಂದರೇನು ? ಹೇಳು ಅವನು ಯಾರು, ಏನು, ತಿಳಿಯಬೇಕು ನಾನೂ” “ಬಾನು ಬುವಿಯ ಕೈಗೆ ಕೊಟ್ಟ ಬೆಳಕಿನೂರೆಗೋಲು, ಜೀವ ಎಂದೊ ಕುಡಿದು ಮರೆತ ತಾಯಿಯೆದೆಯ ಹಾಲು, ಕಲ್ಲು ಮಣ್ಣು ಬಳಸದೇನೆ ಕಟ್ಟಿಕೊಂಡ ಮನೆ. ಏಸ...

ಚಾಮುಂಡಿ, ದುರ್ಗಿ, ಕಾಳಿ, ಶಂಕರಿ, ಮಾರಿ ಮೊದಲಾದ ದೇವಿಗಳಿಗೂ : ಆಂಜನೇಯ, ವಲ್ಲಭರಾಯ, ನರಸಿಂಹ ಮೊದಲಾದ ದೇವರುಗಳಿಗೂ ನಮ್ಮೂರಲ್ಲಿ ಏನೂ ಕೊರತೆಯಿಲ್ಲ. ಇಲ್ಲೊಂದು ಶಂಕರಿ ದೇವಾಲಯ ಬಹುಕಾಲದಿಂದಲೂ ಇದೆ. ಅದನ್ನು ಕಟ್ಟಿಸಿದವರು ಯಾರೆಂಬುದೇ ಗೊತ್ತಿಲ್ಲ. ಪ್ರತಿ ಶನಿವಾರ ಅಭಿಷೇಕ, ಶುಕ್ರ...

ರಾಜ ನಿಮಗೆ ಗೊತ್ತೆ? ಇಲ್ಲ? ಆತ ನನ್ನ ಸ್ನೇಹಿತ, ಆಪ್ತ ಸ್ನೇಹಿತ. ಅವನಿಗೂ ಕತೆ ಬರೆಯುವ ಹುಚ್ಚಿದೆ. ಆದರೆ ಬರೆದು ಸಂಪಾದಿಸಿ ಬದುಕುವ ಹಟವಿಲ್ಲ. ಹಾಗೆಂದೇ, ತಕ್ಕಮಟ್ಟಿಗೆ ಸಂಪಾದನೆ ಇರುವ ಬೇರೆ ಉದ್ಯೋಗದಲ್ಲಿದ್ದಾನೆ! ರಾಜ ಬರೆದಿರುವ ಒಂದು ಕಥೆ ನನ್ನಲ್ಲಿದೆ. ಓದಿ ನೋಡುತ್ತೀರಾ? ನಿಮ...

ಅಂದು ನಾನು, ನಮ್ಮ ತಾತ, ನನ್ನ ತಂಗಿ ಎಲ್ಲರೂ ಕಣದಲ್ಲಿ ಕುಳಿತುಕೊಂಡು ಹರಟೆ ಹೊಡೆಯುತ್ತಿದ್ದೆವು. ಸುಗ್ಗಿಯ ಕಾಲವಾದ್ದರಿಂದ ರೈತರು ಮತ್ತು ಆಳುಗಳು ಕಣದಲ್ಲಿ ಕೆಲಸ ಮಾಡುತ್ತಿದ್ದರು. ನಮ್ಮ ತಾತನು ಆ ಮಾತು ಈ ಮಾತು ಆಡುತ್ತಿದ್ದರೂ, ಆತನ ಒಂದು ಕಣ್ಣು ಮಾತ್ರ ಕೆಲಸಗಾರರ ಮೇಲೆಯೇ ಇರುತ್...

ರಾಜಗೃಹದ ಬಳಿಯ ಗೃಧ್ರಕೂಟ ಪರ್ವತ. ಪರಮಾತ್ಮನಾದ ಬುದ್ಧದೇವನ ಪವಿತ್ರ ಪಾದಧೂಳಿಯಿಂದ ಪುನೀತವಾದ ಗಿರಿವರದ ನೆತ್ತಿ. ನೆತ್ತಿಯ ನೆಲೆಯಲ್ಲಿ ಎರಡು ಗುಹೆಗಳು. ಅಲ್ಲಿ ಇಬ್ಬರು ಬೌದ್ಧ ಸನ್ಯಾಸಿಗಳು ಧ್ಯಾನಶೀಲಾನುಷ್ಠಾನಾದಿಗಳಿಂದ ನಿರ್‍ವಾಣವನ್ನು ಸಾಧಿಸುತ್ತಿದ್ದರು. ಇಬ್ಬರೂ ಅಕ್ಕ ಪಕ್ಕದ ...

ವ್ಹಾಲೆಂಟಾಯಿನ್ ಡಿಗ್ಬಿಯು ಭೋಜನವನ್ನು ತೀರಿಸಿಕೊಂಡು ‘ಹಾವಾನಾ ಸಿಗರ’ (ತಂಬಾಕದ ಸುರುಳೆ) ಸೇದುತ್ತೆ ತನ್ನ ಆರಾಮ ಕುರ್ಚಿಯಲ್ಲಿ ಯಥಾಸುಖವಾಗಿ ಕುಳಿತು ಏನೇನೋ ವಿಚಾರ ಮಾಡುತ್ತಿದ್ದನು. ಸುಗಂಧಿತವಾದ ಸಿಗರದ ಹೊಗೆಯು ಕಾಮಿನಿಯ ಕೇಶಕಲಾಪದಂತೆ ಸುರುಳೆ ಸುರುಳೆಯಾಗಿ ಅಂತರಿಕ್ಷದಲ್ಲಿ ಗಾಳ...

೨-೨-೧೯೩೦ “ಹೆಣ್ಣಿನಿಂದ ಮಾನವನಿಗೆ ಎಂದೂ ತೊಂದರೆಯು. ಅವಳು ಚೆಲುವೆಯಾದರೆ, ಅವಳನ್ನು ಪಡೆಯಬೇಕೆಂಬಾಸೆಯನ್ನು ಇತರರಲ್ಲಿ ಉಂಟು ಮಾಡುವಳು; ಅವಳ ಗಂಡನು ಪ್ರೇಮ ಸಂಶಯಕ್ಕೆ ಸಿಲುಕುತ್ತಾನೆ. ಅವಳು ಕುರೂಪಿಯಾಗುವಳೆ, ಅವಳ ಗಂಡನು ಇತರರನ್ನು ನೋಡಿ ಅಸೂಯೆ ಪಟ್ಟು, ಆ ಅಸೂಯೆಯಿಂದ ತೊಂ...