
ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್ ಹೋಗಬೇಕು, ನಾಳಿಗೆ ಹೋಗಬೇಕು ಹೇಳಿ ಯೆಷ್ಟೋ ದಿವಸ ಕಳದ ಹೋಯ್ತು....
ಅಜ್ಜವಿ-ಮೊಮ್ಮಗ ಇದ್ರು. ಅವ ಅಜ್ಜವಿಕಲ್ ಯೇನೆಂದ? “ತಾನು ಕಾಶಿಗೆ ಹೋಗಬತ್ತೆ. ಮೂರ ರೊಟ್ಟಿ ಸುಟಕೊಡು” ಅಂತ. “ಮಗನೇ, ಕಾಶಿಗೆ ಹೋದವರವರೆ, ಹೋದೋರ ಬಂದೋರಿಲ್ಲ. ನೀ ಕಾಶಿಗೆ ಹೋಗ್ವದೆ ಬೇಡ” ಅಂತು. ಆದ್ರೂ ಕೇಳದಿದ್ದೆ ...

















