Home / ನಾಯಕ ಮತ್ತು ಇತರರು

Browsing Tag: ನಾಯಕ ಮತ್ತು ಇತರರು

ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ ಮಬ್ಬಾಗುತ್ತಿದೆ, ಕೆಲಸ ನ...

ಒಬ್ಬ ಸಾಹಿತಿಯನ್ನು ನೋಡುವ ಕುತೂಹಲ ಯಾರಿಗಿಲ್ಲ? ಪಕ್ಕದೂರಿನ ಹೈಸ್ಕೂಲಿನಲ್ಲಿ ಕಾದಂಬರಿಕಾರ ಅ.ರ.ಸು.ರವರ ಕಾರ್ಯಕ್ರಮವಿದೆಯೆಂಬ ಸುದ್ದಿ ಕೇಳಿ ನಾವು ನೋಡಲು ಹೋದೆವು. ಅ.ರ.ಸು.ರವರ ಕೃತಿಗಳನ್ನು ನಾವಾರೂ ಹೆಚ್ಚಾಗಿ ಓದಿರಲಾರೆವು. ಓದಿದ್ದರೂ ನೆನಪಿ...

ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : “ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?” ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ ಕಪ್ಪಿಗೆ ಬಸಿದುಕೋಳ್ಳುತ್ತಿದ್ದರು....

“ಏಳು!” ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ ತನ್ನ ತಲೆಯನ್ನು ಅನಿಸಿ ಕುಳಿ...

ಓದುತ್ತಿದ್ದಂತೆ ಮನೋಹರನ ಉಸಿರು ಬಿಗಿಯಾಯಿತು. ನಾಡಿಯಲ್ಲೆಲ್ಲ ನೆತ್ತರು ಧುಮ್ಮಿಕ್ಕೆ ಹರಿಯುತ್ತಿರುವ ಅನುಭವ. ಎಲ್ಲವನ್ನೂ ಮತ್ತೊಮ್ಮೆ ಜೀವಿಸಿದಷ್ಟು ಆಯಾಸ. ಡೆಸ್ಕಿ ನಿಂದ ಸಿಗರೇಟು ಎತ್ತಿಕೊಂಡ. ಸೇದಬಾರದು ಎಂದಿದ್ದರು ಡಾಕ್ಟರರು. ಉದ್ವೇಗಗೊಳ್ಳ...

ಖಾದಿ ಪಂಚೆ, ಖಾದಿ ಜುಬ್ಬಾ ತಪ್ಪದೆ ತೊಟ್ಟುಕೊಂಡಿರುವವನೇ ದರ್ಜಿ ದಾಸಣ್ಣ, ದಾಸಣ್ಣನ ಮೈಕೈ ಮೇಲೆಲ್ಲ ಬಿಳಿಯ ಕಲೆಗಳಿವೆ. ನೋಡಿದವರು ತೊನ್ನೆಂದು ಭ್ರಮಿಸಬಹುದು. ಆದರೆ ಇವು ಬೆಂಕಿಯ ಆಕಸ್ಮಿಕದಿಂದ ಉಂಟಾದ ಕಲೆಗಳು. ತನಗೆ ಬೇಕೆನಿಸುವಾಗ ಯಾರನ್ನಾದರೂ...

ಕೆರೆಯ ಮೈಲುದ್ದದ ಏರಿಯ ಮೇಲೆ ಒಂದು ಭಾನುವಾರ ಸಂಜೆ ಒಬ್ಬ ಕಳ್ಳ ಕುಂಟುತ್ತ ಒಂದು ಕೊನೆಯಿಂದ ಇನ್ನೊಂದು ಕೊನೆಗೆ ನಡೆಯುತ್ತಿದ್ದ. ಆತ ಏರಿಯ ಮಧ್ಯ ತಲುಪುವ ಹೊತ್ತಿಗೆ ಎದುರಗಡೆಯಿಂದ ಇನ್ನೊಬ್ಬ ಬಂದು ಸೇರಿಕೊಂಡ. ಇಬ್ಬರೂ ಮುಖ ಮುಖ ನೋಡಿಕೊಂಡರು. ಆಮ...

ಜನ ಪೆಟ್ಟಿಗೆ ಸಾಮಾನು ಸರಂಜಾಮುಗಳೊಂದಿಗೆ ಗೇಟಿನತ್ತ ಧಾವಿಸುತ್ತಿದ್ದಂತೆ ಗಾಳಿ ಮಳೆ ಹೊಡೆಯುವುದಕ್ಕೆ ಶುರುವಾಯಿತು. ದೊಡ್ಡ ದೊಡ್ಡ ಮಳೆಯ ಹನಿಗಳು ಸ್ಟೇಷನ್ನಿನ ಹಂಚಿನ ಮಾಡಿನ ಮೇಲೆ ಬಿದ್ದು ಶಬ್ದ ಮಾಡಿದವು. ಹೊರಗೆ ಕಾದಿದ್ದ ಟ್ಯಾಕ್ಸಿ ಟಾಂಗಾಗಳು...

ಸಿನಿಮಾ ಮುಗಿದು ನಾಯಕ ತನ್ನ ಹೋಟೇಲಿಗೆ ಮರಳಿದಾಗ ಸಾಧಾರಣ ಒಂದೂವರೆ ಗಂಟೆಯಾಗಿರಬಹುದು. ಅವನ ವಾಚು ಕೆಟ್ಟುಹೋಗಿತ್ತು. ಹೋಟೇಲು ಕಾಂಪೌಂಡಿನ ಉಕ್ಕಿನ ಗೇಟು ತುಸುವೆ ತೆರೆದಿತ್ತು. ಬದಿಗೆ ಗೂಡಿನಲ್ಲಿ  ಕುಳಿತಿದ್ದ ಕಾವಲಿನವ ತೂಕಡಿಸುತ್ತಿದ್ದ. ತೂಕಡ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...