Home / ಫಲಸಂಚಯ

Browsing Tag: ಫಲಸಂಚಯ

ಚಿತ್ರ: ಜೋಸ್ ಅಲೆಕ್ಸಿಸ್

ಆಗ ಅವಳಿನ್ನೂ ಚಿಕ್ಕವಳು. ರೂಪದಲ್ಲಿ ರಂಭೆಯಾಗಿದ್ದಳು. ಕಂಠದಲ್ಲಿ ಕೋಗಿಲೆಯಾಗಿದ್ದಳು. ಒಂದು ದಿವಸ ಅವಳನ್ನು ಅತ್ಯಂತ ಪ್ರೀತಿಯಿಂದ ಆರಾಧಿಸುವ ನೀಲ ಕಂಠರಾಯರು ಅವಳ ‘ಆನಂದವಿಲ್ಲಾ’ದ ಬಂಗ್ಲೆಯಲ್ಲಿಯ ಹೊರಗಿನ ಕೋಣೆ ಯಲ್ಲಿ ಕುಳಿತಿದ್ದಾರೆ. ಹೊರಗಿನ ...

ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ ಬಿರುದನ್ನು ಬಹಳ ಸಂತೋಷದಿಂದ ಅರ್‍...

ಕರೀಮನ ಹತ್ತಿರ ಒಂದು ಪಿಟೀಲು ಇದೆ. ಅದನ್ನು ಅವನು ಒಳ್ಳೆ ಮಧುರವಾಗಿ ಬಾರಿಸುತ್ತಾನೆ. ಬಾರಿಸುತ್ತ ಒಮ್ಮೊಮ್ಮೆ ಭಾವಾವೇಶದಲ್ಲಿ ತನ್ನನ್ನು ತಾನು ಮರೆತುಬಿಡುತ್ತಾನೆ. ಕರೀಮನ ಪಿಟೀಲುವಾದವೆಂದರೆ ಊರ ಜನರೆಲ್ಲರೂ ನೆನೆಯುತ್ತಾರೆ. ಒಂದು ಸಲವಲ್ಲ, ನೂರ...

‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ ಲಾರಂಭಿಸಿದಳು. ಮೈ ತುಂಬ ಹರಕು ಬಟ್ಟೆ ತೊಟ್ಟಿದ್ದಾಳೆ....

“ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?” ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. “ಥೂ ಗುಬ್ಬಿ, ಮಲ್ಲಾಡದಾಗ ನಿನಗಿನ್ನೂ ಮಳೀನ ಆಗಿಲ್ಲ! ಸುಳ್ಳಽ ಇಲ...

ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು ಮೆಟ್ಟಲುಗಳಮೇಲಿಂದ, ಗಡೆ-ಗಡ...

ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು ಬಿಟ್ಟು ನೋಡುತ್ತದೆ. ಹತ್ತಿರದಲ್ಲಿಯೇ ಇದ್ದ ವೃಂದಾವನದ ತುಳಸಿಯನ...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....