ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು" ಎನ್ನುವ ಸಾಂಪ್ರದಾಯಿಕ ಗೊಡ್ಡು ಸಂಸಾರದಿಂದ ಬಂದಿದ್ದ...
"ಪೀಟರ್" "ಪ್ರಭು" "ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ...." ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹನ್ನೆರಡುಜನ ಶಿಷ್ಯರೂ ಹಿಂದೆ ಹಿಂದೆ ಬರುತ್ತಿದ್ದರು. ಆರಿಸಿಬಂದ ಜನ...
ಮಧ್ಯರಾತ್ರಿ ನಿದ್ದೆಯಿಂದ ಎಚ್ಚೆತ್ತ ಕಾದ್ರಿ ಒಮ್ಮೆ ಎಡಕ್ಕೆ ಮತ್ತೊಮ್ಮೆ ಬಲಕ್ಕೆ ಹೊರಳಾಡಿದ. ಹೂ... ಹೂ.... ನಿದ್ರೆ ಬರಲಾರದು. ಎದ್ದು ಕುಳಿತು ಪಕ್ಕದ ಚಾಪೆಯತ್ತ ಕಣ್ಣಾಡಿಸಿದ ಪಾತು ಅವನ ಕಡೆಗೆ ಮುಖ ಮಾಡಿ ಮಲಗಿ ಗೊರಕೆ...
‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ ಲಾರಂಭಿಸಿದಳು. ಮೈ ತುಂಬ ಹರಕು ಬಟ್ಟೆ...
ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ? ತಾನು ಮಾಡಿದ್ದು ಎಂಥಾ ಘೋರ! ಅಸಹ್ಯ...
"ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?" "ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?" "ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ನನ್ನ ಈ ಪ್ರಪಂಚವೇ ವಾಸಿ, ನನ್ನನ್ನು ನೋಡಿ...
ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ ಅವುಗಳಲ್ಲಿ ಹುರುಳಿಲ್ಲ ಎಂದು ನನಗೆ ಖಾತ್ರಿಯಾಗಿ...
ಮೃದುವಾಗಿ ಯಾರೋ ತೋಳು ತಟ್ಟಿದಂತಾಯಿತು. ಪುಸ್ತಕದಿಂದ ತಟ್ಟನೆ ತಲೆ ಎತ್ತಿದಳು ಲಿಂಡಾ. ನೀಲಿಕಣ್ಣುಗಳಲ್ಲಿ ಆಶ್ಚರ್ಯ ಮೂಡಿತ್ತು. "ಮದರ್ ಕರೆಯುತ್ತಿದ್ದಾರೆ..." ಅಷ್ಟೇ ಹೇಳಿ ಮೇರಿ ಸಿಸ್ಟರ್ ಹೊರಟರು. ಅವಳ ಎದೆ ಡವಗುಟ್ಟಿತು. ಈಗ ಯಾಕೆ ಕರೆಯುತ್ತಿದ್ದಾರೆ?...