Home / Ananthanarayana S

Browsing Tag: Ananthanarayana S

“ಅಯ್ಯೋ! ಅಮ್ಮ!… ನೋವು… ನೋವು… ಸಂಕಟ…. ಅಮ್ಮ!-” ಒಂದೇ ಸಮನಾಗಿ ನರಳಾಟ. ಹೊಟ್ಟೆಯನ್ನು ಕಡೆಗೋಲಿನಿಂದ ಕಡದಂತಾಗುತ್ತಿತ್ತು. ಈ ಕಲಕಾಟದಿಂದ ನರ ನರವೂ ಕಿತ್ತು ಹೋದಂತಾಗಿ ಮೈಕೈಯೆಲ್ಲಾ ನೋವಿನಿಂದ ತುಂಬಿ...

“ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ.” ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. “ನೋಡೇ-ನಾನು ರೈಲಿನ ಇಂಜಿನ್ನು, ನೀನು...

“ಪೀಟರ್” “ಪ್ರಭು” “ಇನ್ನು ಮೂರುದಿನ ಮಾತ್ರ, ಪೀಟರ್. ಅನಂತರ….” ಮಾತು ಅರ್ಧಕ್ಕೆ ನಿಂತಿತು. ಯೇಸುಕ್ರಿಸ್ತ ತನ್ನ ಶಿಷ್ಯರೊಂದಿಗೆ ಕಾಲುನಡಿಗೆಯಲ್ಲಿ ಜೆರೂಸಲೆಂ ನಗರಕ್ಕೆ ನಡೆದು ಬರುತ್ತಿದ್ದ. ಹ...

“ನನಗದು ಬೇಕಿಲ್ಲ. ಬೇಕಿಲ್ಲ! ಸುಮ್ಮನೆ ಯಾಕೆ ಗೋಳು ಹುಯ್ಯುತ್ತೀಯಮ್ಮಾ?” “ಹೀಗೇ ಎಷ್ಟು ದಿನ ಮನೆಯಲ್ಲೇ ಕುಳಿತಿರುವೆ, ಮಗು?” “ಇಷ್ಟು ದಿನವಿರಲಿಲ್ಲವೇನಮ್ಮ-ಇನ್ನು ಮೇಲೆಯೂ ಹಾಗೆಯೇ, ಹೊರಗಿನ ಪ್ರಪಂಚಕ್ಕಿಂತ ...

“ಹಾಗಿದ್ದರೆ, ಪಾಪವೆಂದರೇನು ಗುರುಗಳೇ?” ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!...

ನಿನ್ನಿರುಳು ಕನಸೊಂದ ಕಂಡೆ, ಅತ್ತ ಕಡೆಯಲಿ, ಪೂರ್ವಕ್ಕೆ, ಕೊಂಚ ಓರೆಗೆ ತೋರುತಿರಲು ಎಳೆ ಚಂದ್ರ, ಕಿಟಕಿಯ ಬಳಿಯೇ ಕುಳಿತೆನ್ನ ಮುಂಗಡೆಗೆ ಕಂಬಿಗಳ ನೆರಳು ಮಲಗಿತ್ತು. ಅತ್ತಿತ್ತ ತುಸು ಬೆಳಕು, ಪಕ್ಕದಲ್ಲಾವುದೋ ಕಿರುಗತೆಯ ಬೆಳೆ ಕೂಡಿಸಿದ ಸಣ್ಣ ಕತೆ...

ಮುಗಿಲ ಹಣೆಯಲಿ ಹೊಳೆವ ಅಳಿತಾರೆಗಳು ರವಿಯು ಹಗಲಿನಲಿ ಹುಟ್ಟುತಿರೆ ಮಾಸಿಹೋಗುವ ತೆರದಿ, ಭಾವಗಳು, ಬಯಕೆಗಳು, ನೂರಾರು ಚಿಂತೆಗಳು, ಕನಸು ಮನವಾವರಿಸೆ, ಒಲವ ಸುಂದರ ರವದಿ ಮಾಯವಾಗುತಲಿಹವು, ಉರುಳಿರುವ ತಾರೆಗಳ ಗತಿಯ ಕೇಳುವುದೇಕೆ? ಹಗಲಿನೆಳಬಿಸಿಲಿನಲ...

ರಚನೆ: ೫ನೆಯ ಸೆಪ್ಟೆಂಬರ್ ೧೯೪೨, ಮೈಸೂರು ಮಾನವ ಜನ್ಮದಾಗ್ ಹುಟ್ಟಿದ್ಮೇಲೆ ಏನೇನ್ಕಂಡಿ ಜೀವನ್ದೊಳ್ಗೆ ಸಾಯೋತನ್ಕ ಗಂಡಾಗುಂಡಿ. ಲಕ್ಷ್ಮೀಪುರಂ ಸ್ಟೇಷನ್ನೊಳ್ಗೆ ಕುಳಿತ್ಕೊಂಡಿ ಬರೀತೇನೆ ಲಾವಣಿ ಒಂದು, ಜೈಲಿನ್ಕಂಡಿ. ಹಿಂದೆ ಎಂದೂ ಜೈಲಿನ್ಕಡ್ಗೆ ಸುಳ...

ಕಣ್ಣೀರಿನ ಕಡಲಿನ ಮೇಲೆ ಮಿಂಚಿದೆ ನನ್ನೀ ಬಾಳಿನ ಒಲವಿನಲೆ! ದೂರ ತೋರಿದಾ ನೀಲ ಬೆಟ್ಟಗಳ ನೀಲ ಮುಗಿಲಿನಲ್ಲಿ ಮುಳುಗು ಸೂರ್ಯನಾ ಕೆಂಪು ಕಾಡಿಗೆಯ ಬಣ್ಣ ಮಡಿಲಿನಲ್ಲಿ ತಾರೆ ಓರೆಯಲಿ ನಿಂತು ನೋಡುತಿರೆ, ಅಲೆಯು ಮೇಲೆ ಹೊಮ್ಮಿ ಚಿಣ್ಣ ಚಿಣ್ಣನೇ ದುಗುಡ ಹ...

“ಆಟದಲಿ ನಿಮಗಿರುವ ಹಿಗ್ಗು ಎಲ್ಲೆಡೆ ಹಬ್ಬಿ ನನ್ನನೂ ಆವರಿಸಿ ಸೆಳೆಯುತಿದೆ, ನಿಮ್ಮೆಡೆಗೆ ಕೂಡಿ ಆಡುವೆನೆನುವ ಆಸೆ ಎದೆಯನು ತಬ್ಬಿ ಎಳತನವನೆಬ್ಬಿಸಿದೆ. ಕಳೆದ ಕಾಲದ ಕಡೆಗೆ ನೆನವು ಹರಿಸಿದೆ ಇಂದು.” ಅದು ಹಿಂದೆ, ಬಲು ಹಿಂದೆ, ಇನ್ನು...

(ಒಂದು ಐತಿಹಾಸಿಕ ಕತೆ) ಹ್ಹಃ ಹ್ಹಃ ಹ್ಹಃ! ಅಹ್ಹಃ ಅಹ್ಹಃ ಅಹ್ಹಃ!! ಗಝುನಿ ಮಹಮೂದನಿಗೆ ಹಿಡಿಸಲಾರದ ನಗೆ. ನಕ್ಕು ನಕ್ಕು ಅವನ ಹೊಟ್ಟೆ ನೋಯುತ್ತಿದ್ದಿತು. ಆದರೂ ಅವನ ಆ ತಿರಸ್ಕಾರದ ನಗೆ ತಡೆಯಲಾರದಾಯಿತು. ಅದೊಂದು ಸುಪ್ರಸಿದ್ದವಾದ ಸೋಮನಾಥ ದೇವಾಲಯ. ಭಾರತದ ವೈಭವವನ್ನು ವಿಶ್ವಕ್ಕೆ ತೋ...

ಸರಲಾಕ್ಷ ಹುಲಿಮೀಸೆಯು ಮನೆಯಲ್ಲಿ ಬಂದಿರಲಾರಂಭಿಸಿದಂದಿನಿಂದ ತಾನು ತೊಂದರೆಗೊಂಡು ಬೇಸತ್ತು ಹೋಗಿರುವೆನೆಂದು ವಸತಿಗೃಹದ ಸ್ವಾಮಿನಿಯಾದ ಲೀಲಾಬಾಯಿಯು ದೂರಿಕೊಳ್ಳುತ್ತಿದ್ದಳು. “ಕೆಟ್ಟ ಮೋರೆಯವರೂ ಅಸಭ್ಯರೂ ಸುಟ್ಟಮನೆಯವರೂ ಸುಡದ ಮನೆಯವರೂ ತೆರವಿಲ್ಲದೆ ನನ್ನ ಮನೆಗೆ ಬರುತ್ತಿರುವ...

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....