ಭಾಗ್ಯನಗರ

ಈ ಚೌಕಾಂಬದಲಿ ನಿಂತು ಕೇಳುವೆನು ನಾನು ಭಾಗ್ಯ ನಗರವೇ ನಿನ್ನೆ ಭಾಗ್ಯದ ಬಾಗಿಲೆಲ್ಲಿ? ಇಷ್ಟೆತ್ತರದಿಂದ ಕಾಣಿಸುವುದೇನು-ಜನರು ಇರುವೆಗಳಂತೆ, ಟ್ರಕ್ಕುಗಳು, ಬಸ್ಸುಗಳು ಎತ್ತಿನಗಾಡಿಗಳು, ತಲೆಹೊರೆಯ ಮೂಟೆಗಳು ಯಾರೋ ಆಡುತ್ತಿರುವ ಆಟಿಕೆಗಳಂತೆ ಮನುಷ್ಯರ ಮಾತುಗಳು ಗೊಂದಲದಂತೆ ಗಾರೆಯಲಿ...