
ಬಯಲಾಟದ ಒಂದು ಮೇಳದಲ್ಲಿ ಸಂಕಣ್ಣ, ಹುಣಸಿಕ್ಕ ಹಿಮ್ಮೇಳದ ಹಾಡುಗಾರರಾಗಿದ್ದರು. ಸಂಕಣ್ಣ ಅಸಾಧ್ಯ ಸಿಂಬಳ ಬುರಕನಾಗಿದ್ದರೆ, ಹುಣಸಿಕ್ಕ ತಡೆಯಿಲ್ಲದೆ ತುರಿಸುವ ಹುರುಕಲಿಯಾಗಿದ್ದನು. ಸಿಂಬಳ ಹಣಿಕೆ ಹಾಕಿದಾಗೊಮ್ಮೆ ಸಂಕಣ್ಣ ಸರಕ್ಕನೇ ಮೂಗೇರಿಸಿ, ಅಂಗಿ...
ಹಳ್ಳಿಯಲ್ಲಿ ಒಕ್ಕಲಿಗರ ಮನೆ. ದನಗಳ ಕೊಟ್ಟಿಗೆಯಲ್ಲಿಯೇ ಅವರು ಬಚ್ಚಲಮಾಡಿ ಕೊಂಡಿದ್ದರು. ಎಮ್ಮೆಯ ಕರು ಒಂದು ದಿನ ನೀರಡಿಸಿ, ಕಟ್ಟಿಹಾಕಿದ ಕಣ್ಣಿಯನ್ನು ಹರಿದುಕೊಂಡು ಬಚ್ಚಲುಮನೆಗೆ ನೀರು ಕುಡಿಯಲು ಹೊಕ್ಕಿತು. ಜಳಕದ ಹಂಡೆಯಲ್ಲಿ ಬಾಯಿಹಾಕಿತು. ಚಿಕ...
ನನ್ನೀಸಾಹೇಬ ಹಾಗೂ ಬಡೇಮಾ ಎಂಬ ಇಬ್ಬರು ಗಂಡಹೆಂಡಿರಿದ್ದರು. ನನ್ನೀ ಸಾಹೇಬನು ಹೆಸರಿಗೆ ತಕ್ಕಂತೆ ತೆಳ್ಳಗಿನ ಕುಳ್ಳನೇ ಆಗಿದ್ದನು. ಅದರಂತೆ ಬಡೇಮಾ ಕೂಡ ಹೆಸರಿಗೆ ಒಪ್ಪುವ ಹಾಗೆ ಮೇಲೆತ್ತರದ ದುಂಡಮೈಯವಳೇ ಆಗಿದ್ದಳು. ಅಂಥ ಇಜ್ಜೋಡಿನ ಸಂಸಾರವೂ ಸಾಗಿ...
ಗಂಡನು ಶಿವರಾತ್ರಿಯ ದಿನ ಉಪವಾಸ ಮಾಡುವನೆಂದು ತಿಳಿದು ಹೆಂಡತಿ ತಾನೂ ಉಪವಾಸ ಮಾಡುವುದನ್ನು ನಿರ್ಧರಿಸಿದಳು. ಉಪವಾಸವೆಂದರೂ ಹಳ್ಳಿಯಲ್ಲಿ ಗೆಣಸು, ಬಾಳೆಹಣ್ಣು, ಕಜ್ಜೂರಿ, ಸೇಂಗಾ ತಿನ್ನುವುದು ವಾಡಿಕೆಯಾಗಿದೆ. ಆ ಪ್ರಕಾರ ಗಂಡ ಹೆಂಡಿರು ಸಾಯಂಕಾಲದಲ...
ಹಳ್ಳಿಯಲ್ಲಿ ಚಿಕ್ಕ ತಕ್ಕಡಿ ಅಂಗಡಿ ಒಂದು. ಬೆಲ್ಲ – ಇಂಗು – ಜೀರಿಗೆ, ಚುರಮರಿ – ಪುಠಾಣಿ ಮಾರುವ ಕಿರಾಣಿ ಅಂಗಡಿ. ಹಳ್ಳಿಯೊಳಗಿನ ಗಿರಾಕಿಗಳು ಉಡಿಯಲ್ಲಿ ಜೋಳವನ್ನೋ ಕುಸುಬೆಯನ್ನೋ ತಂದು ಅಂಗಡಿಕಾರನ ಮಾಪಿನಲ್ಲಿ ಅಳೆದುಹಾಕಿ...
ಗಂಡ ಹೆಂಡಿರಿಬ್ಬರು. ಒಂದುದಿನ ಹೆಂಡತಿ ಮಾಲಾದಿ ಮಾಡಿ ಮೂರು ಉಂಡಿ ಕಟ್ಟಿಟ್ಟಳು. “ಮಾಲಾದಿ ನಾ ಮಾಡೀನು. ಎರಡು ನನಗೆ ಒಂದು ನಿನಗ” ಎಂದಳು ಹೆಂಡತಿ. “ಇಲ್ಲ. ನಾ ಮಾಡಿಸಂದಾಂವ. ನನಗೆ ಎರಡು ಉಂಡಿ ನಿನಗೆ ಒಂದು ಉಂಡಿ” ಎ...
ಕುರಿಕಾಯುವ ಜೊತೆಗಾರರಾದ ಕಾಮಣ್ಣ ಭೀಮಣ್ಣ ಅವರಿಬ್ಬರು ತಮ್ಮ ಕುರಿ ಹಿಂಡಿನೊಡನೆ ಅಡವಿಯಲ್ಲಿಯೇ ಅಡ್ಡಾಡುವರು; ಅಡವಿಯಲ್ಲಿಯೇ ವಾಸಿಸುವರು. ತಮ್ಮಷ್ಟು ಜಾಣರಾದವರು ಇನ್ನಾರೂ ಇಲ್ಲವೆಂದೇ ಅವರು ಬಗೆದಿದ್ದರು. ಅಂಥ ಜಾಣರಾಗಿದ್ದರೂ ಅವರಿಬ್ಬರೂ ಬಗೆಹರಿ...





















