ಮನ ಮಂಕಾಯಿತ್ತು. ತನುವು ಮರೆಯಿತ್ತು. ವಾಯು ಬರತಿತ್ತು. ಉರಿ ಎದ್ದಿತ್ತು. ಹೊಗೆ ಹರಿಯಿತ್ತು. ಸರೋವರವೆಲ್ಲ ಉರಿದು ಹೋಯಿತ್ತು. ಒಳಗೆ ಹೊಕ್ಕು ಕದವ ತೆಗೆದು ಬಯಲ ನೋಡಿ, ಬೆಳಗಕೂಡಿದಲ್ಲದೆ ನಿಜ ಮುಕ್ತಿ ಇಲ್ಲವೆಂದರು ನಮ್ಮ ಅಪ್ಪಣಪ್ರಿಯ...
ಹೊತ್ತು ಹೊತ್ತಿಗೆ ಕಿಚ್ಚನೆ ಬರಿಸಿದರೆ, ಕಲೆ ಉರಿದುದೆಂದು, ಹೊತ್ತು ಹೊತ್ತಿಗೆ ಪ್ರಾಣಕ್ಕೆ ಪ್ರಸಾದವ ಸ್ಥಾಪ್ಯವ ಮಾಡಿ, ತನುವ ಖಂಡಿಸದೆ, ಕಾಯವ ಮರಗಿಸದೆ, ಭಾವವನೆ ಬಯಲು ಮಾಡಿ, ಭವಕೆ ಸವೆದು, ಕಾಣದಪ್ತತವನೆ ಕಂಡು, ಮಹಾಬೆಳಗಿನಲಿ ಬಯಲಾದರು...
ಮನವೆಂದರೆ ಮರವೆಗೆ ಒಳಗು ಮಾಡಿತ್ತು. ತನುವೆಂದರೆ ತಾಮಸಕ್ಕೊಳಗು ಮಾಡಿತ್ತು. ಧನವೆಂದರೆ ಆಸೆ ಎಂಬ ಪಾಶಕ್ಕೊಳಗು ಮಾಡಿತ್ತು. ಇವು ಮಾಯಾ ಪಾಶವೆಂದು ಬಿಟ್ಟು ಹುಟ್ಟನರಿದು, ಬಟ್ಟಬಯಲಲ್ಲಿ ನಿಂದು, ಚಿತ್ತ ನಿರ್ಮಳವಾಗಿ ನೋಡಿ ಕಂಡ ಶರಣಗೆ ತನುವೆ...