Home / Muthanna I.M.

Browsing Tag: Muthanna I.M.

ಇಹದ ಸುಖವನು ಬಯಸಿ, ಆತ್ಮಯೋಗದ ಬಲವು ತನ್ನದೆಂಬುದ ನೆಚ್ಚಿ, ಮುಂಗುರಿಯ ದೃಷ್ಠಿಯನು ನಂಬಿಕೆಯ ನೇತೃದಲಿ ನೋಡುತಲು, ಜೀವನದ ಧ್ಯೇಯವನು ದಿಗ್ಭ್ರಾಂತ ತರಂಗದೊಳಾಡಿಸುತ, ಕೋಟಿಮಾನವರಲ್ಲಿ ತನ್ನ ಪ್ರತಿಭೆಯ ಸಾಕ್ಷ್ಯ ಸಾರುತಲಿ ಪಾಡುತಲಿ, ಮಾನವನು ತಾನ್ಪ...

ಹಸುರು ಸೀರೆಯನುಟ್ಟು ರಂಗು ಬಳೆಗಳ ತೊಟ್ಟು ತನ್ನ ಗೆಳತಿಯರೊಡನೆ ನಡೆದವಳು ಯಾರು? ಅರಳಿಯಾ ಮರದಡೀ ಹೂಬುಟ್ಟಿ ಕೆಳಗಿರಿಸಿ ಚೆಂಡು ಹೂಗಳ ಕೋದು ಹಾಡಿದಳು-ಯಾರು? ಹಣೆಗೆ ತಿಲಕವನಚ್ಚಿ ಮುಡಿಗೆ ಹೂಗಳ ಮುಚ್ಚಿ ಮೆಲ್ಲಡಿಯನಿಡುತಿಡುತ ಪೋದವಳು ಯಾರು? ಜಾರು...

ತುಂಬಿದ ಚಂದ್ರನೆ ನೀ ಬಾರ ತುಂಬಿದ ಭಾಗ್ಯವ ನೀ ತಾರ ನಂಬಿದ ಗತಿಗೆ ನೆಲೆ ತೋರ! ಅಗಸ ಮಿತ್ರನು ನೀನದಕೊ ತಂಪನು ಸುರಿಸುತ ನೀ ಮಿನುಗೊ ಭೂಮಿಯ ಕನ್ನಡಿ ನೀನೆ ಕಣೊ ನೈದಿಲೆ ನಗುವುದು ನೀ ಬರಲು ನಲ್ಮೆಯ ಹೂವಿಗೆ ನೀ ಮುಗುಳು ಸಂತಸವೀಯುತ ನೀ ಬಾಳು! ವಸಂತ...

ಭಾರತೀ ಸತೀಯ ಗೆಲವು ಮಂದಹಾಸ ನೋಡೊ!  ||ಪಲ್ಲ|| ತ್ರಿವರ್ಣದಾ ಧ್ವಜವ ಬೀಸಿ ಶೂರಕುವರಿ ಏರಿ ಬಂದಳದೋ ಪಾರತಂತ್ರ್‍ಯಪಾಶ ಮುರಿದು ನಾರೀ!  ||ಅ.ಪ|| ನೊಂದಮೊಗವು ಅಂದಸೊಗವು ಎಲ್ಲ ಮ್ಲಾನವಾಗಿದೆ, ನೂರುವೆರಡು ವರುಷವೆಲ್ಲ ದಾಸ್ಯತನದೊಳಡಗಿರೆ; ತನ್ನ ತಾ...

ತಾರೆಗಳು ಶತಕೋಟಿ ಉದಿಸಿದರು ಬಾನಿನಲಿ, ಮೀರಿ ತೆರೆಗಳ ಧೀರ್ಘ ಆರ್ಭಟವೆ ಹೆಚ್ಚಿರಲಿ, ಶೂರ ಪುರುಷರು ಕಾಯದೊಳವಧಿಯನು ಮುಟ್ಟಿರಲಿ, ಸಾರ ಸಗ್ಗವು ತೋರ್ಪ ಸ್ತುತಿಹಲವು ಘೂರ್ಮಿಸಲಿ- ಯಾರು ನೋಡುವರೆನ್ನ-ಸ್ಮರಪರುಂ ಇಲ್ಲಿ? ಧಾರೆಧಾರೆಗಳಾಗಿ ಜಗದಿ ನೆತ್...

ಅಕೊ ಮೂಡ ಬಯಲಿನಲಿ ಬೆಳ್ನೆರೆಯ ಚೆಲ್ಲಿಹರು ಅದೋ ಮೂಡ ಬಾನಿನಲಿ ರವಿ ಕಾರುತಿಹನು! ಭುವಿಯೆಲ್ಲ ಬೆಳಕಿನಾ ಮುನ್ನೀರಂತಾದುದು; ಗಿರಿಯೆಲ್ಲ ನಗುವಂತೆ ತಲೆಯೆತ್ತಿ ನೋಡುವುದು. ಚಂದಿರನ ಓಡಿಸಿತು ಇಬ್ಬನಿಯ ಮಳೆಯು; ಬಿಳಿವಣ್ಣು ತಾರಕೆಯ ಹಕ್ಕಿಗಳು ಕುಟುಕ...

ಕರೆಕರೆದು ಬರುವೆನೊ ಬಂದೆನೊ ಇದೊ ಬಂದೆ, ಕರ್ಣಾಟ ಸಾಗರ ಸೇರಽಲು; ತಿಳಿನೀರ ತಳವನ್ನು ಸೇರಲು!  ||ಕರೆ|| ಕೊಡಗಿನ ಮಲೆನಾಡ ಶಿಖರದೊಳುದಯಿಸಿ ಹರಿಹರಿದೆ ಕನ್ನಡ ರಾಜ್ಯದೊಳ್; ಕವಿರಸದ ಹನಿಯಾಗಿ ಸೇರಽಲು! ಕಾಂತಿಯೊ ಇದು ಒಂದು ಕ್ರಾಂತಿಗೆ ಸಮನಾಗಿ ಕರ್...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...