Home / Raghava

Browsing Tag: Raghava

ನೋಡದೊ ಸ್ವಾತಂತ್ರ್‍ಯಾಕಾಶದಲಿ ಹಾರುತ್ತಿದೆ ನವ ರಾಷ್ಟ್ರಧ್ವಜವು! ಹಾರಲಿ! ಏರಲಿ! ಈ ಹೊಸ ಬಾವುಟ! ಚಿರ ಬಾಳಲಿ ನವ ಭಾರತ ಕೂಟ! ಹಿಂದೂ ಮುಸ್ಲಿಮ ಸಿಕ್ಕರು ಒಂದು ಹಿಂದೆ ಇಂದು ಮುಂದೆಂದೆಂದೂ- ಇಂತು ಸಾರುತಿದೆ ಈ ಹೊಸ ಬಾವುಟ: ಗೆಲ್ಲಲಿ ಎಲ್ಲರು ಒಂದ...

ಅದೊ ನೋಡು! ಹೊಲದಲ್ಲಿ ನೇಗಿಲನು ಬಲ್ವಿಡಿದು ಮೈಬೆವರಿನಿಂದುತ್ತ ಮಣ್ ನೆನೆವರಂ ದುಡಿದು ಹೆರವರಿಗೆ ಹೊನ್ ಬೆಳೆಯ ತೆಗೆಯೆ ಜೀವವ ತೇದು ನೇಗಿಲಿನ ರೇಖೆಯಿಂ ದುಡಿವ ಬಾಳ್ ನೆತ್ತರಿಂ ಭಾರತ ಭವಿಷ್ಯವನು ಬರೆವನವನು ನೆಲತಾಯ ನಲ್ಗುವರ-ಬಡ ರೈತನು. ಮತ್ತದೋ...

ಗಳಿಸಿಕೊಂಡಿಹೆವಿಂದು ಸ್ವಾತಂತ್ರ್‍ಯ ಭಾಗ್ಯವನು ಉಳಿಸಿಕೊಳ್ಳುವೆವೇನು ಅದನು ಮುಂದಿನ್ನು? ಜಾತಿ ಮತ ಪಂಥಗಳ ಭೇದಗಳನೆ ಹಿಡಿದು, ರೀತಿ ನೀತಿಯ ತೊರೆದು, ಗುಣಕೆ ಮನ್ನಣೆ ತಡೆದು, ಭೀತಿಯನ್ನೊಡ್ಡಿ ಜನತೆಯ ಹಕ್ಕುಗಳ ಕಡಿವ ಸರ್ವಾಧಿಕಾರ ಬರೆ ಸ್ವಾತಂತ್ರ...

“ಮನೆಯು ಪಾಲಾಯ್ತು ಒರ್‌ಬಾಳ್ವೆ ಹೋಳಾಯ್ತು ಕರುಳೆರಡು ಸೀಳಾಯ್ತು ಅಯ್ಯೊ! ಅಕಟಕಟಾ! ಎರಡಾಯ್ತು ಬಾವುಟ” ಎಂದು ಗೋಳಾಡದಿರು ಓ, ಗೆಳೆಯನೇ! ಕಲಹ ಪಾಲಿಗೆ ಮೊದಲು: ಹೊಗೆಯಿತಸಮಾಧಾನ, ಉರಿಯಿತು ದುರಭಿಮಾನ. ತಮ್ಮ, ಪಸುಗೆಯ ಬಯಸಿ ಕೈಮಾಡಿದ...

ಸ್ವಾತಂತ್ರ್‍ಯ ಸೌಧವನು ರಚಿಸತೊಡಗಿಹರದೋ ನಾಡ ನಾಯಕರೆಲ್ಲರೊಂದುಗೂಡಿ; ಸೌಧವನ್ನಾಗಿಸುತ ಅದಕೆ ಕಲಶವನಿಟ್ಟು ಹರಸು, ಹೇ! ಭಾರತದ ಭಾಗ್ಯದೈವ! ಮತದ ಮೈಲಿಗೆ ಕಳೆದು ಒಮ್ಮತದ ಮಡಿಯುಟ್ಟು ಸ್ವಾತಂತ್ರ್‍ಯ ಮಂದಿರದೊಳೆಲ್ಲ ನೆರೆದು ಭಾರತಾಂಬೆಯನೇಕನಿಷ್ಠೆಯ...

ನಾಗರಿಕ ಜೀವನದ ಗರ್ಭದೊಳಗಡೆ ಸಿಲುಕಿ ಕತ್ತಲೆಯೆ ಬೆಳಕೆನಿಸಿ, ಬೆಳಗು ಬೈಗುಗಳೆಂಬ ಭೇದ ಬರಿ ನೆನಪಾಗಿ, ಗಾಣದೆತ್ತಿನ ದುಡಿತ ಹವಣಿಸುವ ಬೇಸರದ ಜೊತೆಗೆ, ನಿತ್ಯವು ಹೊಟ್ಟೆ ಬಟ್ಟೆಗಳ ಹಂಚಿಕೆಯ ಹೊಂಚಿಕೆಯ ಹುಸಿ ಬಾಳ ಲಂಚ ಪ್ರಪಂಚದಲಿ ಸತ್ಯನಿಷ್ಠನ ಸಾವ...

ಓ, ಮಹಾತ್ಮನೆ, ನಿನ್ನ ಬಂದಿಸಿಟ್ಟಿಹರೆಂದು ಹಲರು ತಿಳಿದಿಹರು, ದಿಟ; ಆದರದು ತಪ್ಪೆಣಿಕೆ: ಬಂಧನವ ಬಯಸಿ ಬರಮಾಡಿಕೊಂಡಿಹೆ; ಜನಕೆ ಬಂಧನವೆ ಬಿಡುಗಡೆಗೆ ಹೆದ್ದಾರಿಯೊಂದೆಂದು ತೋರಿಸಲು. ಜಗ ಜನಾಂಗಗಳೆಲ್ಲ ತಾವಿಂದು ತಮ್ಮ ನಾಯಕರಿತ್ತ ಕುರುಡಾಣತಿಯ ಪಿಡ...

ಚರಿತೆಯ ಚಮತ್ಕಾರದಿಂದೊಡೆಯಿತೆಮ್ಮ ಜನ ಎರಡಾಗಿ: ಆದರೊಂದೇ, ನಿಜಕು ಜನತೆಯೊಂದೆ: ಹೊರಗಣಿನಿಸಿನ ಭೇದ ಭೇದವೇ? ಆ ತಂದೆ ಇಬ್ಬರಿಗು ದೈವವೆನೆ, ಒಪ್ಪದಿದೆ ಮೂಢ ಮನ. ಒಂದು ಮುಸ್ಲಿಮರೊಂದೆ: ಇದನರಿಯಬೇಕು ಜನ: ಮೆಲಿನಾ ಬಾನೊಂದೆ; ನಡೆವ ನೆಲ ತಾನೊಂದೆ; ಕ...

ಎಂದಿನಂತೆಯೆ ಬಂದಿತೇ ನಾಡ ಹಬ್ಬ? ನಮ್ಮ ನಾಯಕರೆಮ್ಮನಾಳುವುದೆ ಹಬ್ಬ! ಅದು ಹೊರತು, ಹಸಿದವನ ಕೈಗಿತ್ತು ಕಬ್ಬ, ‘ಓದಿ ತಣಿ’ ಎಂದಂತೆ ನಾಡಹಬ್ಬ! ಬಣಜಿಗನ ಬೊಕ್ಕಸವು ತುಂಬಿತಿದೆ ಗಿಡಿದು; ಕಾರ್ಮಿಕರು ಕೆರಳಿಹರು ತಮ್ಮ ಕನಸೊಡೆದು; ಕ್ಷಾಮಮಾರಿಯ ಮುಂದೆ...

ಬನ್ನಿರಿ ಬಾಲರೆ ನಡೆಯಿರಿ ಗೆಳೆಯರೆ ನಾಡಿನ ಬಿಡುಗಡೆ ಕಾಳೆಗಕೆ ತನ್ನಿರಿ ನಿಮ್ಮ ಕಪ್ಪ ಕಾಣಿಕೆಯ ಭಾರತ ಮಾತೆಯ ಓಲಗಕೆ! ಸತ್ಯದ ಕುದುರೆಯನೆಲ್ಲರು ಹತ್ತಿ ಹಿಡಿದು ಝಳಪಿಸಿರಿ ಅಹಿಂಸೆ ಕತ್ತಿ ತಿರುಗಿಸಿ ಗಿರ್‍ರನೆ ನೂಲುವ ಚರಕ ಹುಟ್ಟಡಗಲಿ ದಾರಿದ್ರ್‍...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...

ಒಂದೊಂದೆ ನೀರ ಹನಿಗಳು ಮುಳಿಹುಲ್ಲಿನ ಮಾಡಿನಿಂದ ಜಿನುಗಿ ತೊಟ್ಟಿಕ್ಕಿ ಆತ ಹೊದ್ದ ಕಂಬಳಿಯ ನೆನೆಸಿ ಒಳನುಸುಳಿ ಆತನ ಕುಂಡೆಯ ಭಾಗವೆಲ್ಲಾ ಒದ್ದೆಯಾದ ಕಾರಣವೋ ಹೊತ್ತಿಗೆ ಮುಂಚೆ ಎಂದೂ ಏಳದ ಹೊಲಿಯಪ್ಪ ಅಂದು ದಡಬಡಿಸಿ ಎದ್ದ. ಆತ ಮಲಗಿದ ಕಡೆಯಲ್ಲಿ ನೆಲವೆಲ್ಲಾ ಅದಾಗಲೇ ಹಸಿಯಾಗಿತ್ತಲ್ಲ. ಹ...

ಅದು ರಾಷ್ಟೀಯ ಹೆದ್ದಾರಿ ಎನ್.ಎಚ್.೧೭. ಎಡೆಬಿಡದ ವಾಹನಗಳ ಸಂಚಾರ. ಮಧ್ಯೆ ಮಧ್ಯೆ ಅಪಾಯಕಾರಿ ತಿರುವುಗಳು. ಹೊಸಬರಿಗೆ ಅಪರಿಚಿತರಿಗೆ ಮುಂದೆ ತಿರುವು ಇದೆ ಎಂದು ತಿಳಿಯಲಾಗದ, ಅವಘಡವೇನಾದರೂ ಸಂಭವಿಸಿದರೆ ನೇರವಾಗಿ ಪ್ರಪಾತದ ಪಾಲಾಗುವ ಭಯವನ್ನು ಹೊಂದಿದ ಭೀಕರ ತಿರುವುಗಳನ್ನು ಹೊಂದಿದ ವಕ...