ಅಂಬಾರ್ದಲಾವಿಗೆ ಶಾಂಭವಿ

ಅಂಬಾರ್ದಲಾವಿಗೆ ಶಾಂಭವಿ                 ||ಪ||

ಶುಂಭ-ನಿಶುಂಭರ ಸಂಹಾರ ಮಾಡಿದ
ತುಂಬಿದ ಶಾರ ಮದೀನದೊಳಗ            ||ಅ.ಪ.||

ಕಾತೂನ ರೂಢಿಯೊಳು ಬೆಳೆದಳು
ಪ್ರೀತಿಲಿಂದ ಭೂತಲಕೆ ಇಳಿದು
ಜಗನ್ಮಾತೆ ಮೋರುಮ ಹಬ್ಬದೊಳಗೆ           ||೧||

ಆಸುರಾಧಿಪತಿಗಳ ಕೊಂದಳೋ
ದಸರೆ ಐಸುರದಿ ಹೆಸರು ಪಡೆದು ಬಹು
ಕುಶಲದಿ ಭೂವಲಯದೊಳಗೆ ಮೆರೆದು         ||೨||

ಧಾಮಶಪುರದ ಯಜೀದರ
ಕ್ರಮದಿ ಕಡಿದು ಕಾಲೊಳಗೆ ತುಳಿದು ಆ
ಹಿಮಾಚಲ ಪರ್ವತ ಸೇರಿಕೊಂಡು             ||೩||

ಆಕಾರ ಬೆಳಸಿ ಆನಂದದಿ
ಸಾಕಾಗದೆ ಶಿಶುನಾಳಧೀಶನೊಳು
ಬೇಕೆಂದನುತಲಿ ಲೋಕಮಾತೆ                 ||೪||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಒಂದು ಹಾಡು ಒಂದು ಕಥೆ
Next post ಮೋಡಿಕಾರ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಮಿಂಚಿನ ದೀಪ

    ಸಂಜೆ ಮೊಗ್ಗೂಡೆದಿತ್ತು. ಆಕಾಶದ ತುಂಬೆಲ್ಲಾ ಬಣ್ಣದ ಬಾಟಲಿ ಉರುಳಿಸಿದ ಹಾಗೆ ಕೆಂಪು, ನೀಲಿ ಬಣ್ಣ ಚೆಲ್ಲಿ, ಚಳಿಗಾಲದ ಸಂಜೆಯ ಮಬ್ಬಿನ ತೆಳುಪರದೆಯ ‘ಓಡಿನಿ’ ಎಲ್ಲವನ್ನೂ ಸುತ್ತುವಂತೆ ಪಸರಿಸಿಕೊಂಡಿತ್ತು.… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ಹೃದಯ ವೀಣೆ ಮಿಡಿಯೆ….

    ಒಂದು ವಾರದಿಂದಲೇ ಮನೆಯಲ್ಲಿ ತಯಾರಿ ನಡೆದಿತ್ತು. ತಂಗಿಯನ್ನು ನೋಡಲು ಬೆಂಗಳೂರಿನಿಂದ ವರ ಬರುವವನಿದ್ದ. ಗೋಪಿ ಅವಳನ್ನು ಆ ವರನ ಹೆಸರೆತ್ತಿ ಚುಡಾಯಿಸುತ್ತಿದ್ದ, ರೇಗಿಸುತ್ತಿದ್ದ. ಅವಳ ಕೆನ್ನೆ ಕೆಂಪಗೆ… Read more…

cheap jordans|wholesale air max|wholesale jordans|wholesale jewelry|wholesale jerseys