ಹರಿವ ತೊರೆಯ ಅಲೆ

ಹರಿವ ತೊರೆಯ ಅಲೆಅಲೆಗಳಲಿ
ನಿನ್ನ ಭಾವ ನರ್ತನ ||
ತುಡಿವ ಮನಗಳ ಜಾಲದಲಿ
ತಣಿವು ಎರೆಯುವ ಚೇತನ ||

ಸೃಷ್ಟಿ ಸೊಬಗಿನ ಇಳೆಯರಂಗದಲಿ
ಪ್ರಕೃತಿ ದೇವಿಯ ನರ್ತನ ||
ಅರಳು ಮಿಡಿಯುವ ವೀಣೆ ಕೊರಳಲಿ
ಉಲಿವ ಗಾಯನ ನೂತನ ||

ಉದಯ ಕಾಲದ ಬಾನಿನೊಡಲಲಿ
ನೂರು ರೂಪ ದರ್ಶನ ||
ಅದನು ನೋಡುವ ಜಗದ ಮೊಗದಲಿ
ಹರೆಯ ತುಂಬುವ ಚೇತನ ||

ಚೈತ್ರ ಚುಂಬಿತ ಹೂ ಬನಗಳಲಿ
ಮಧುರ ಕೆಳೆಗಳ ನರ್ತನ |
ವರ್ಣ ಚಿತ್ತ ಹೊಸತು ದರ್ಶನ
ನಮ್ಮ ಬಾಳಿಗೆ ನಿತ್ಯ ಚೇತನ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತ್ರಿಮೂರ್ತಿ
Next post ದೂಡಿದರೆ ನನ್ನನ್ನು

ಸಣ್ಣ ಕತೆ

  • ಅಹಮ್ ಬ್ರಹ್ಮಾಸ್ಮಿ

    ಬಹುಶಃ ಮೊದಲ ಬಾರಿ ನಾನು ಅವನನ್ನು ನೋಡುತ್ತಿರಬೇಕು. ಅವನು ಅಕಸ್ಮತ್ತಾಗಿ ನನ್ನ ಕಣ್ಣಿಗೆ ಬಿದ್ದನೋ, ಅಲ್ಲಾ ಅವನೇ ನಾನು ಕಾಣುವ ಹಾಗೆ ಎದುರಿಗೆ ಬಂದನೋ ಎಂಬ ವಿಷಯದಲ್ಲಿ… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

cheap jordans|wholesale air max|wholesale jordans|wholesale jewelry|wholesale jerseys