ಸಾಧನೆ

ಗಾಳಿ ಗೋಪುರವ ಮಾಡಿ
ಗುಡಿಯ ನಿರ್ಮಿಸಬಹುದೆ?

ಪೊಳ್ಳು ಗುರಿಯನ್ನಿಟ್ಟುಕೊಂಡು
ಜೀವನದಿ ಉನ್ನತಿ ಸಾಧಿಸಬಹುದೇ?

ಬರಿಯ ಕನಸುಗಳ ಕಾಣುತಲಿ
ತೃಪ್ತಿ ಜೀವನ ಸಾಗಿಸಬಹುದೆ?

ಹಟಮಾಡಿ ಗುರಿಯಿಟ್ಟು ದಿಟ್ಟ ಹೆಜ್ಜೆ ಇಟ್ಟರೆ
ಒಲಿಯದಿರುವುದೇ? ಸುಂದರ ಬದುಕು

ಸಾಧನೆಗೆ ಗುರಿ ಸಾಧಿಸುವ ಛಲ
ಸತತ ಪ್ರಯತ್ನವು ನಿನ್ನೊಡನೆ ಇದ್ದರೆ

ಮುಂದೆ ಗುರಿಯಿಟ್ಟು ಹಿಂದೆ ಗುರುವಿದ್ದು
ನೀ ಹೊರಡಲು ಉನ್ನತ ಸ್ಥಾನ ನಿನ್ನದೇನೆ

ಅಮೋಘ ಸಾಧನೆ ನಿನ್ನದಾದರೆ
ಜಗವೆ ಕೊಂಡಾಡುವುದು ನಿನ್ನನೆ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಡುಗೆ
Next post ವ್ಯತ್ಯಾಸ

ಸಣ್ಣ ಕತೆ

  • ರಾಮಿ

    ‘ಸಲಾಮ್ರಿ’ ರೈಲಿನ ಹೊತ್ತಾಗಿದೆ. ವೆಂಕಟೇಶನು ಒಂದೇಸವನೆ ತನ್ನ ಕೈಯಲ್ಲಿಯ ಗಡಿಯಾರವನ್ನು ನೋಡುತ್ತಿದ್ದಾನೆ. ‘ಸಲಾಮ್ರೀಽ ಏಕ ಪೈಸಾ.’ ಆಗ ಮತ್ತೆ ಒದರಿದಳು. ಟಾಂಗಾದ ತುದಿ ಹಿಡಿದು ಕೊಂಡು ಓಡ… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

cheap jordans|wholesale air max|wholesale jordans|wholesale jewelry|wholesale jerseys