ಕೆಟ್ಟಿರುವೆನು ನಾನು

ಕೆಟ್ಟಿರುವೆನು ನಾನು
ಗೊತ್ತು ನನಗೆ ಇದು ಸತ್ಯ
ಕಾರಣ ಬಲ್ಲ ನೀನು
ಕಾಡುವುದೆ ಹೀಗೆ ನಿತ್ಯ //ಪ//

ಕಣ್ಣಲ್ಲಿ ಕವಿತೆ ಬರೆದು
ಬುದ್ದಿಯನು ಅಳಿಸಿಹೆ
ಅದರಲ್ಲಿ ದೂರ ಒಯ್ದು
ಭಾವವನು ಬೆಳೆಸಿಹೆ
ಇಂತಹ ನೂರು ತಪ್ಪು
ನನ್ನದೆ ಹೇಳು ನಲ್ಲೆ?
ಸೂತ್ರ ಹಿಡಿದ ನಿನಗೆ
ನಾ ಏನು ಹೇಳಬಲ್ಲೆ?

ದೂರ ಹೋದರೂನು
ಸನಿಹ ಬರುವೆ ನೀನು
ಕಣ್ಣ ಒಳಗು ಹೊರಗು
ಥಕಥೈ ಕುಣಿವೆ ನೀನು
ಕಲೆಗೆ ಸೋಲದವರಾರು
ಹೇಳೆ ನಾಗವಲ್ಲಿ?
ಜೊತೆಗೆ ಬೆರೆಯೆ ಪ್ರೇಮ
ಯಾರು ಉಳಿವರಿಲ್ಲಿ??
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಗೊಂದಲ
Next post ತಪ್ಪು

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಮುದುಕನ ಮದುವೆ

    ಎಂಬತ್ತುನಾಲ್ಕು ವರ್ಷದ ನಿವೃತ್ತ ಡಾಕ್ಟರ್ ಶ್ಯಾಮರಾಯರಿಗೆ ೩೮ ವರ್ಷದ ಗೌರಮ್ಮನನ್ನು ಮದುವೆಯಾದಾಗ ಅದು ವೃತ್ತಪತ್ರಿಕೆಗಳಲ್ಲಿ ದೊಡ್ಡ ಅಕ್ಷರಗಳಲ್ಲಿ ಬಂದು ಒಂದು ರೀತಿಯ ಆಶ್ಚರ್ಯ, ಕೋಲಾಹಲ ಎಬ್ಬಿಸಿತ್ತು. ಡಾ.… Read more…

  • ಆ ರಾತ್ರಿ

    ಆ ದಿನ ಮಧ್ಯಾಹ್ನ ವಸಂತನ ಮನೆಯಲ್ಲಿ ಬಹಳ ಗಡಿಬಿಡಿ! ವಸಂತ ತಾನು ಕೂಡುವ ಕೋಣೆಯನ್ನು ಅತ್ಯಂತ ಶಿಸ್ತಿನಿಂದ ಇಡುವ ಕಾರ್ಯದಲ್ಲಿ ಮಗ್ನನಾಗಿದ್ದನು. ಗಡಿಯಾರದ ಮುಳ್ಳುಗಳು ಎರಡು ಗಂಟೆಯಾದುದನ್ನು… Read more…

  • ತನ್ನೊಳಗಣ ಕಿಚ್ಚು

    ಶಕೀಲಾ ಇನ್ನೂ ಮನೆಗೆ ಬಂದಿಲ್ಲ ಮೈಮೇಲೆ ಮುಳ್ಳುಗಳು ಎದ್ದಂಗಾಗದೆ. ಅಸಲು ಜೀವಂತ ಅದಾಳೋ? ಉಳಿದಾಳೆ ಜಿಂದಾ ಅಂಬೋದಾದ್ರೆ ಎಲ್ಲಿ? ಕತ್ಲೆ ಕವ್ಕತಾ ಅದೆ. ಈಗಷ್ಟೇ ಒಂದು ಗಂಟೆ… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

cheap jordans|wholesale air max|wholesale jordans|wholesale jewelry|wholesale jerseys