ನಮ್ಮ ದೇಶ ಭಾರತ

ನಮ್ಮ ದೇಶ ಭಾರತ
ನಮ್ಮ ತಾಯಿ ಭಾರತಿ
ನಾವು ಬೆಳಗುವೆವು ಅವಳಿಗಾರತಿ
ಭಾವೈಕ್ಯಗಾನವೆ ಇವಳ ಕೀರುತಿ

ಭರತ ಖಂಡ ನಮ್ಮಖಂಡ
ಭೂಗೋಳ ವಿಜ್ಞಾನ ಅಖಂಡ
ಚರಿತ್ರೆ ಪರ್‍ವಗಳ ವಿಶ್ವಚೇತನ
ಮನ ಮಿಡಿಯುವ ನವನಿಕೇತನ ||

ಸಹಸ್ರ ವೀರ ಬಾಹುಬಲಿಗಳ
ಖಡ್ಗ ವೀರ ಕಲಿಗಳ
ತ್ಯಾಗ ಸೌಮ್ಯ ಒಲುಮೆ ಮಣಿಗಳ
ನವ್ಯ ದಿವ್ಯಭಾರತ
ಇದುವೆ ನಮ್ಮ ಭಾರತ ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮುಂದೆ ಸಾಗು
Next post ಹನಿಗಳು ಒಡೆದ ಸಂಜೆ

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ಬ್ರಿಟನ್ ದಂಪತಿಗಳ ಪ್ರೇಮ ದಾಖಲೆ

    ಫ್ರಾಂಕ್ ಆಗ ಇನ್ನು ಹದಿನಾಲ್ಕು ವರ್ಷದ ಹುಡುಗ ತೆಳ್ಳಗೆ ಬೆಳ್ಳಗೆ ಇದ್ದು, ಕರಿಯ ಬಣ್ಣದ ದಟ್ಟ ಕೂದಲಿನ ಬ್ರಿಟಿಷ್ ಬಾಲಕ. ಹೈಸ್ಕೂಲಿನಲ್ಲಿ ಓದುತ್ತಿದ್ದ ಫ್ರಾಂಕ್‌ಗೆ ಕಾಲ್ಚೆಂಡು ಆಟ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…