ನಗೆ ಡಂಗುರ – ೧೧೮

ಮದುವೆ ಸಂದರ್ಶನ ನಡೆಯುತ್ತಿತ್ತು. ಭಾವಿ ಮಾವ ಹುಡುಗನನ್ನು ಮಾತನಾಡಿಸತೊಡಗಿದ:
ಭಾ.ಮ: “ನಿಮ್ಮ ವಿದ್ಯಾಭ್ಯಾಸ?” ಹುಡುಗ ತುಟಿಪಿಟಿಕ್ ಎನ್ನಲಿಲ್ಲ.
ಭಾ.ಮ: “ನಿಮ್ಮ ಕೆಲಸುಮಾಡುವ ಕಂಪನಿ ಹೆಸರು?” ಹುಡುಗ ತುಟಿ ಬಿಚ್ಚಲಿಲ್ಲ.
ಭಾ.ಮ: “ಹೋಗಲಿ, ನಿಮ ಕಂಪನಿಯಲ್ಲಿ ವರ್ಗಾವಣೆ ಪದ್ಧತಿ ಉಂಟುತಾನೆ?”
ಹುಡುಗ ತುಟಿ ಎರಡು ಮಾಡಲೇ ಇಲ್ಲ- ಮಗಳು ಇದನ್ನೆಲ್ಲಾ ಕೇಳಿಸಿಕೊಂಡು, “ಅಪ್ಪಾ, ಸಂದರ್ಶನ ಸಾಕು, ನಾನು ಈ ಹುಡುಗನನ್ನು ಒಪ್ಪಿದ್ದೇನೆ” ಎಂದಳು!
***

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಕ್ಕಿಯಾರಿಸುವಾಗ
Next post ಸಾವು

ಸಣ್ಣ ಕತೆ

  • ಮನೆಮನೆಯ ಸಮಾಚಾರ

    ಪ್ರಮೋದನಗರದ ಸಮೀಪದಲ್ಲಿ ಹೂವಿನಹಳ್ಳಿಯೆಂಬದೊಂದು ಗ್ರಾಮವಿರುವದು. ಅಲ್ಲಿ ಪ್ರೌಢರಾಯನೆಂಬ ದೊಡ್ಡ ವೃತ್ತಿವಂತನಾದ ಗೃಹಸ್ಥನಿದ್ದನು. ಪ್ರೌಢರಾಯರಿಗೆ ಇಬ್ಬರು ಗಂಡುಮಕ್ಕಳೂ, ಒಬ್ಬ ಹೆಣ್ಣು ಮಗಳೂ ಇದ್ದರು. ರಾಯರ ಹಿರಿಯ ಮಗನಾದ ರಾಮಚಂದ್ರರಾಯನು… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಆಪ್ತಮಿತ್ರ

    ಧಾರಾಕಾರವಾಗಿ ಮಳೆ ಸುರಿಯುತ್ತಿತ್ತು. ದೊಡ್ಡದೊಡ್ಡ ಮರಗಳು ಭೋರ್ ಎಂದು ಬೀಸುವ ಗಾಳಿಯಲ್ಲಿ ತೂಗಾಡುತ್ತಿದ್ದವು. ಇಂಗ್ಲೆಂಡಿನ ಆ ಚಳಿ ಮಳೆಯಲ್ಲಿ ಎರಡು ಆಪ್ತಮಿತ್ರ ಜೀವಗಳು ಒಂದನ್ನು ಅನುಸರಿಸಿ ಇನ್ನೊಂದು… Read more…

cheap jordans|wholesale air max|wholesale jordans|wholesale jewelry|wholesale jerseys